ಚ#ಡ್ಡಿ ಒಳಗೆ ಧರ್ಮ ಕೇಳಿದ ಸೈತಾನಗಳಿಗೆ ಭಾರತದ ಒಬ್ಬರು ಮಹಿಳೆಯರು ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟಿದ್ದಾರೆ

 
ನಿಮಗೆಲ್ಲಾ ಗೊತ್ತಿರುವ ಹಾಗೆ ಬುಧವಾರ ನಸುಕಿನ ರಾತ್ರಿ 1 ಗಂಟೆಯಿಂದ 1.30ರ ಅವಧಿಯಲ್ಲಿ ಭಾರತದ ಮಿಲಿಟರಿ ಪಡೆಗಳು, ಪಾಕಿಸ್ತಾನದ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಕಡೆ ವೈಮಾನಿಕ ದಾಳಿ ನಡೆಸಿದೆ. ಉಗ್ರರನ್ನೇ ಗುರಿಯಾಗಿಸಿಕೊಂಡು ನಡೆದ ಡೆಡ್ಲಿ ದಾಳಿಯಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಸಾವಿನ ಸಂಖ್ಯೆಯಲ್ಲಿ ನಿಖರತೆ ಇನ್ನೂ ಇಲ್ಲ, ಆದರೆ ದಾಳಿ ಆಗಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ. ಭಾರತದ ರಕ್ಷಣಾ ಪಡೆಗಳ ಅಧಿಕಾರಿಗಳು, ಮಾಧ್ಯಮಗೋಷ್ಠಿಯನ್ನು ನಡೆಸಿ, ದಾಳಿಯ ವಿವರಣೆಯನ್ನು ದೇಶಕ್ಕೆ ನೀಡಿದ್ದಾರೆ. ಇಬ್ಬರು ಮಹಿಳಾ ಅಧಿಕಾರಿಗಳು ದಾಳಿಯ ವಿವರಣೆಯನ್ನು ನೀಡಿದ್ದು ಗಮನಾರ್ಹವಾಗಿತ್ತು. <a href=https://youtube.com/embed/4QtSuM4qDbQ?autoplay=1&mute=1><img src=https://img.youtube.com/vi/4QtSuM4qDbQ/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಭಾರತೀಯ ಸೇನೆಯ ಕಾರ್ಫ್ಸ್ ಆಫ್ ಸಿಗ್ನಲ್ಸ್‌ನ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ, ಏಷ್ಯಾ ಸೇರಿದಂತೆ ಹಲವು ದೇಶಗಳನ್ನೊಳಗೊಂಡ ಬಹುರಾಷ್ಟ್ರೀಯ ಕ್ಷೇತ್ರ ಫೋರ್ಸ್ 18ರಲ್ಲಿ ಭಾರತೀಯ ಸೇನಾ ತರಬೇತಿ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾಗವಹಿಸಿದ ಎಲ್ಲಾ ದೇಶಗಳಲ್ಲಿ ಖುರೇಷಿ ಅವರು ಏಕೈಕ ಮಹಿಳಾ ಕಮಾಂಡರ್ ಆಗಿದ್ದರು. ಇದು ಮಿಲಿಟರಿ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಭಾರತದ ಬದ್ಧತೆಯನ್ನು ಒತ್ತಿ ಹೇಳುತ್ತದೆ.
ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅನೇಕ ಹೈ-ರಿಸ್ಕ್ ಕಾರ್ಯಾಚರಣೆಗಳಲ್ಲಿ ಸೇವೆ ಸಲ್ಲಿಸ್ತಿದ್ದಾರೆ. ಈಶಾನ್ಯ ಭಾರತದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. 2004ರಲ್ಲಿ ಐಎಎಫ್‌ಗೆ ನೇಮಕಗೊಂಡ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್, ಚೇತಕ್ ಮತ್ತು ಚೀತಾ ಹೆಲಿಕಾಪ್ಟರ್‌ಗಳನ್ನು ಹಾರಿಸುವ ಮೂಲಕ ಖ್ಯಾತಿ ಗಳಿಸಿದ್ದಾರೆ. 2017ರಲ್ಲಿ ವಿಂಗ್ ಕಮಾಂಡರ್ ಹುದ್ದೆಗೆ ಬಡ್ತಿ ಪಡೆದ ಅವರು, IAFನಲ್ಲಿ ಮಹಿಳೆಯರಿಗೆ ಮಾರ್ಗದರ್ಶಕರಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.