ಪುಷ್ಪ 2 ಹಾಡಿಗೆ ಭರ್ಜರಿ ಸೊಂಟ ಬಳುಕಿಸಿದ ಆಶಿಕಾ ರಂಗನಾಥ್
ಬಹುನಿರೀಕ್ಷಿತ ಪುಷ್ಪ 2 ಸಿನಿಮಾದ ಹಾಡುಗಳು ಸಖತ್ ಸದ್ದು ಮಾಡುತ್ತಿವೆ. ಅದರಲ್ಲೂ ಇತ್ತೀಚೆಗೆ ರಿಲೀಸ್ ಆದ ಸೂಸೇನೆ ಎಂಬ ಹಾಡಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಈ ಹಾಡಿಗೆ ನಟಿ ಆಶಿಕಾ ರಂಗನಾಥ ಕೂಡ ಹೆಜ್ಜೆ ಹಾಕಿದ್ದಾರೆ. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ 2 ಸಿನಿಮಾ ಸೂಸೇನೆ ಸಾಂಗ್‌ಗೆ ಈಗಾಗಲೇ ಸಾಕಷ್ಟು ಜನ ರೀಲ್ಸ್ ಮಾಡುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.
ಇದರ ನಡುವೆ ಆಶಿಕಾ ಕೂಡ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಸೊಂಟ ಬಳುಕಿಸಿದ ಆಶಿಕಾಗೆ ಬಗೆ ಬಗೆಯ ಕಾಮೆಂಟ್ಸ್ ಹರಿದು ಬರುತ್ತಿವೆ. ಅಂದಹಾಗೆ, ನಟಿ ಆಶಿಕಾ ಕೂಡ ಕನ್ನಡದ ಜೊತೆ ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರಿಗೂ ಉತ್ತಮ ಅವಕಾಶಗಳು ಅರಸಿ ಬರುತ್ತಿವೆ.
https://youtube.com/shorts/6dYmMqh2FC0?si=y1mxmN15hQqrfiAc
ಕನ್ನಡ ಸಿನಿಮಾಗಳ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅನೇಕ ನಟಿಯರು ಬಾಲಿವುಡ್, ಟಾಲಿವುಡ್, ಕಾಲಿವುಡ್ನಲ್ಲೂ ಮಿಂಚುತ್ತಿದ್ದಾರೆ. ಅವರಲ್ಲಿ ನಟಿ ಆಶಿಕಾ ಕೂಡ ಇಬ್ಬರಾಗಿದ್ದಾರೆ. ಆಶಿಕಾ ಸದ್ಯ ಟಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಆಶಿಕಾ ರಂಗನಾಥ್ ಇದೀಗ ಚೆಂದದ ಫೋಟೋಗಳನ್ನು ಶೇರ್ ಮಾಡಿದ್ದಾರೆ.
ಗ್ರೇ ಕಲರ್ ಲೆಹಂಗ ಧರಿಸಿದ ನಟಿ ಆಶಿಕಾ ರಂಗನಾಥ್ ದೇವ ಕನ್ಯೆಯಂತೆ ಕಾಣ್ತಿದ್ದಾರೆ. ಫೋಟೋಗಳಿಗೆ ಚೆಂದದ ಪೋಸ್ ಕೊಟ್ಟಿದ್ದಾರೆ. ನಟಿ ಆಶಿಕಾ ರಂಗನಾಥ್ ಒಂದೇ ಕುರ್ಚಿಯಲ್ಲಿ ಕುಳಿತು ವಿವಿಧ ಭಂಗಿಗಳಲ್ಲಿ ಪೋಸ್ ಕೊಟ್ಟಿದ್ದಾರೆ.
ಕನ್ನಡದ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶಿಕಾ ರಂಗನಾಥ್, ಇದೀಗ ಟಾಲಿವುಡ್ನಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾರೆ. ಆಶಿಕಾ ಅಭಿನಯದ ಸಿನಿಮಾ ಸೂಪರ್ ಹಿಟ್ ಆಗ್ತಿದ್ದು, ನಟಿ ಮಣಿಗೆ ಡಿಮ್ಯಾಂಡ್ ಹೆಚ್ಚಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.