ನೇಹಾ ಹಿರೇಮಠ್ ವಿಷಯದಲ್ಲಿ ಮೌನ ಮುರಿದ ಅಶ್ವಿನಿ ಪುನೀತ್, ಖಡಕ್ ವಾನಿ೯ಂಗ್
ನೇಹಾ ಹಿರೇಮಠ ಹತ್ಯೆಗೆ ರಾಜ್ಯದ ಮೂಲೆ ಮೂಲೆಯಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಭೀಕರ ಹತ್ಯೆಯ ಸುದ್ದಿ ಬಿತ್ತರವಾಗುತ್ತಿದಗದಂತೆ ಕನ್ನಡ ಚಿತ್ರರಂಗದ ನಟರು ನೇಹಾ ಸಾವಿಗೆ ನ್ಯಾಯ ಸಿಗಲೇಬೇಕು ಎಂದು ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈಗ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್‌ಕುಮಾರ್ 'ಜಸ್ಟಿಸ್ ಫಾರ್ ನೇಹಾ' ಬೆಂಬಲ ಸೂಚಿಸಿದ್ದಾರೆ.
ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಸಿನಿಮಾ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಮುಖಂಡರು ಈ ಹತ್ಯೆಗೆ ತೀವ್ರ ಆಕ್ರೋಶ ಹೊರ ಹಾಕುತ್ತಿದ್ದು, ಅಪರಾಧಿಗೆ ಶಿಕ್ಷೆ ಆಗಲೇಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕಿದ್ದಾರೆ.
ಈಗ ಅಶ್ವಿನಿ ಪುನೀತ್ ರಾಜ್‌ಕುಮಾರ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯ ಸ್ಟೋರಿಯಲ್ಲಿ ನೇಹಾ ಸಾವಿಗೆ ನ್ಯಾಯ ಸಿಗಬೇಕೆಂದು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಕ್ಕೂ ಮನವಿಯನ್ನು ಮಾಡಿಕೊಂಡಿದ್ದಾರೆ.ಅಶ್ವಿನಿ ಪುನೀತ್ ರಾಜ್‌ಕುಮಾರ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹೀಗೆ ಬರೆದಿದ್ದಾರೆ.
ನೇಹಾ ಹಿರೇಮಠ ಅವರ ಸಾವಿಗೆ ನ್ಯಾಯ ಸಿಗಲಿ ಎಂಬುದು ನಮ್ಮೆಲ್ಲರ ಆಶಯ. ಕಾನೂನಿನ ಅಡಿಯಲ್ಲಿ ಇಂತಹ ಕಹಿ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಮ್ಮ ವಿನಂತಿ. ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಎಂದು ಬರೆದುಕೊಂಡಿದ್ದು, #JusticeForNeha" ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು ನೇಹಾ ಹಿರೇಮಠ ಹತ್ಯೆಗೆ ಆಕ್ರೋಶ ಹೊರಹಾಕಿದ್ದಾರೆ. ಧ್ರುವ ಸರ್ಜಾ, ರಿಷಭ್ ಶೆಟ್ಟಿ, ರಕ್ಷಿತಾ ಪ್ರೇಮ್, ಅನುಶ್ರೀ ಸೇರಿದಂತೆ ಹಲವು ಮಂದಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿದ್ದರು. #JusticeForNeha ಹ್ಯಾಶ್ ಟ್ಯಾಗ್ ಅಡಿಯಲ್ಲಿ ಈ ಹತ್ಯೆಯನ್ನು ವಿರೋಧಿಸಿ, ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.