ಕೊ‌ ಲೆ ಮಾಡೋನು ಒಬ್ಬ ಗಂಡಸಾ; ಪ್ರಕಾಶ್ ರಾಜ್ ಸಿ ಡಿಮಿಡಿ

 

ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗುತ್ತಿರುವ, ಪ್ರಕಾಶ್‍ ರೈ ಮತ್ತು ಡಾರ್ಲಿಂಗ ಕೃಷ್ಣ ತಂದೆ- ಮಗನಾಗಿ ಅಭಿನಯಿಸುತ್ತಿರುವ ಫಾದರ್ ಚಿತ್ರದ ಚಿತ್ರೀಕರಣ ಅರಮನೆ ನಗರ ಮೈಸೂರಿನಲ್ಲಿ ನಡೆಯುತ್ತಿದೆ. 100 ವರ್ಷಗಳ ಹಳೆಯ ಮನೆಯಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಚಿತ್ರತಂಡದವರು ಚಿತ್ರದ ಕುರಿತು ಮಾಹಿತಿ ನೀಡಿದರು.

ಪ್ರಕಾಶ್ ರೈ ಮಾತನಾಡಿ, ಚಂದ್ರು ಜೊತೆಗೆ ನಾನು ಮೊದಲು ಕಬ್ಜ ಚಿತ್ರ ಮಾಡಬೇಕಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಈಗ ಫಾದರ್ ಚಿತ್ರದಲ್ಲಿ ಅಭಿನಯಿಸುತ್ತಿದ್ದೇನೆ. ಇದೊಂದು ಮನಸ್ಸಿಗೆ ಹತ್ತಿರವಾಗುವ ಕಥೆ. ತಂದೆ-ಮಗನ ಪ್ರೀತಿಯ ಜೊತೆಗೆ, ಇವತ್ತಿನ ತಂದೆ ಮಕ್ಕಳ ಸಂಬಂಧದ ಬಗ್ಗೆ ಹೇಳಲಾಗಿದೆ. ಕಥೆ ಕೇಳಿದಾಗ ನನಗೆ ಇದು ಇಂದಿಗೆ ಮುಖ್ಯವಾಗಿ ಬೇಕಾಗಿರುವ ಸಿನಿಮಾ ಎಂದೆನಿಸಿತು. ಇದೊಂದು ಕಾಡುವಂತಹ ಚಿತ್ರ. ಆರ್ ಚಂದ್ರು ಆರ್ ಸಿ ಸ್ಟುಡಿಯೋಸ್ ಮೂಲಕ ಐದು ಚಿತ್ರಗಳನ್ನು ನಿರ್ಮಿಸುತ್ತಿರುವುದು ಖುಷಿಯ ವಿಚಾರ.  <a href=https://youtube.com/embed/-bAaliCqVT0?autoplay=1&mute=1><img src=https://img.youtube.com/vi/-bAaliCqVT0/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ನಾನು ಕೂಡ ನಿರ್ಮಾಪಕನಾಗಿ ಹಲವು ಚಿತ್ರಗಳನ್ನು ನಿರ್ಮಿಸಿದ್ದೇನೆ. ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಹಾಗೂ ನಾನು ಬಹಳ ಇಷ್ಟೊಡುವ ಮೈಸೂರಿನಲ್ಲಿ ಚಿತ್ರೀಕರಣವಾಗುತ್ತಿರುವುದು ಖುಷಿಯಾಗಿದೆ ಎಂದರು.ಇತ್ತೀಚಿನ ದರ್ಶನ್ ಪ್ರಕರಣದ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆ ಮಾಧ್ಯಮದ ಕಡೆಯಿಂದ ತೇಲಿಬಂತು, ಅದಕ್ಕೆ ಅಷ್ಟೇ ಜಾಣ್ಮೆಯಿಂದ ಉತ್ತರಿಸಿದ ಪ್ರಕಾಶ್ ರಾಜ್, ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿ ಆಗ್ತಿಲ್ಲ, ಆ ಬಗ್ಗೆ ಮಾತಾಡೋಣ.

ಆಟೋ ಚಾಲಕರಿಗೆ ಬೈಕ್‍ ಸವಾರರಿಂದ ತೊಂದರೆ ಆಗುತ್ತಿದೆ ಆ ಬಗ್ಗೆ ಮಾತಾಡೋಣ. ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಅಡುಗೆ ಮಾಡುವವರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಸಂಬಳ. ಅದರ ಬಗ್ಗೆ ಮಾತಾಡೋಣ. ಮಿಕ್ಕವರೆಲ್ಲಾ ಬಹಳ ಬ್ಯುಸಿಯಾಗಿರುವುದರಿಂದ ನಾವು ಇದರ ಬಗ್ಗೆ ಮಾತಾಡೋಣ್ವಾ? ಎಂದರು. ಸೋಷಿಯಲ್ ಮೀಡಿಯಾ ಬಳಕೆಯೂ ಸರಿಯಾಗಿ ಆಗ್ತಿಲ್ಲ ಎಂದೂ ಬೇಸರಿಸಿಕೊಂಡರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.