ದೃಷ್ಟಿಬೊಟ್ಟು ನಾಯಕ ನಟಿ ರಿಯಲ್ ಲೈಫ್ ನಲ್ಲಿ ಹೇಗಿದ್ದಾರೆ ಗೊತ್ತಾ, ದೇವಲೋಕದ ಅಪ್ಸರೆ

 
 ಕನ್ನಡ ಕಿರುತೆರೆಯಲ್ಲಿ ಕಳೆದ ಕೆಲ ದಿನಗಳಿಂದ ಹೊಸ ಧಾರಾವಾಹಿಯೊಂದು ಆರಂಭವಾಗಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆ ಇಲ್ಲಿದೆ. ಇದನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ದೃಷ್ಟಿಬೊಟ್ಟು.ಈ ಹಿಂದೆ ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ನಟ ವಿಜಯ್ ಲಲಿತ ಸೂರ್ಯ ಮತ್ತೊಮ್ಮೆ ಕಿರುತೆರೆ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. 
ವಿಜಯ್ ಸೂರ್ಯ ಅವರು ರಗಡ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿದ್ದು, ಕುತೂಹಲ ಸೃಷ್ಟಿ ಮಾಡಿದೆ. ಇನ್ನು ಬ್ರೇಕಪ್ ಅಂಥೆಮ್ ಕೂಡ ರಿಲೀಸ್ ಆಗಿದೆ.ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಈ ಧಾರಾವಾಹಿಯ ಪಾತ್ರಕ್ಕೋಸ್ಕರ ಅವರಿಗೆ 2 ಗಂಟೆಗಳ ಕಾಲ ಮೇಕಪ್ ಮಾಡಲಾಗುವುದಂತೆ. ದೃಷ್ಟಿ ಪಾತ್ರ ಜನರಿಗೆ ತಲೆಯಲ್ಲಿ ಇರಬೇಕು ಅಂತ ಅವರು ತಮ್ಮ ಇನ್‌ಸ್ಟಾಗ್ರಾಮ್ ಅಕೌಂಟ್ ಡಿಲಿಟ್ ಮಾಡಿದ್ದಾರಂತೆ. ಈ ಮೊದಲು ಈ ನಟಿ ಉದಯದಲ್ಲಿ ಪ್ರಸಾರವಾಗುವ ಆನಂದ ರಾಗ ಧಾರವಾಹಿಯಲ್ಲಿ ನಟಿಸಿದ್ದರು.
 ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗಡೆ ಸೇರಿದಂತೆ ಅನೇಕ ಕಿರಿ ಹಿರಿ ನಟ-ನಟಿಯರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕುತೂಹಲಕರ ಕಥಾನಕವನ್ನು ದೃಷ್ಟಿಬೊಟ್ಟು ಎಳೆಎಳೆಯಾಗಿ ಅನಾವರಣಗೊಳಿಸುತ್ತಾ ಹೋಗುತ್ತದೆ.
 ದೃಷ್ಟಿಯ ಪಾಲಿಗೆ ರೂಪ ಅನ್ನುವುದೇ ಶಾಪ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುತ್ತಿರುವ ಅವಳಿಗೆ ತನ್ನ ಸೋದರಿಯನ್ನು ಮರಳಿ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಗುರಿ.ಮೊದಲು ಮೆಕಾನಿಕ್ ಆಗಿ ಈಗ ರೌಡಿಯಾಗಿರುವ ಕಥಾನಾಯಕ ದತ್ತ, ಸುಂದರವಾಗಿರುವ ಹೆಣ್ಣುಗಳನ್ನ ಕಂಡರೆ ಉರಿದು ಬೀಳುತ್ತಾನೆ. ದುರುಳ ಪೋಲೀಸನೊಬ್ಬನ ಕೈಗೆ ಸಿಕ್ಕ ದೃಷ್ಟಿ ಅವನ ಕಿರುಕುಳಕ್ಕೆ ಸಿಕ್ಕು ಒದ್ದಾಡುತ್ತಿರುವಾಗ ದತ್ತನ ಪ್ರವೇಶವಾಗುತ್ತದೆ. ಆಮೇಲೆ ಕತೆ ಹಲವು ಊಹಿಸಲಾಗದ ತಿರುವುಗಳನ್ನು ತೆಗೆದುಕೊಳ‌್ಳುತ್ತಾ ಮುಂದೆ ಸಾಗುತ್ತದೆ. ದೃಷ್ಟಿಗೆ ತನ್ನ ರೂಪ ಶತ್ರುವಾಯಿತ ಕಾದು ನೋಡಬೇಕಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.