ಬಿಗ್ ಬಾಸ್ ವಿನಯ್ ಬಗ್ಗೆ ಸ್ವಂತ ಪತ್ನಿ ಹೇಳಿದ್ದೇನು ಗೊತ್ತಾ
ಇತ್ತಿಚಿಗೆ ಬಿಗ್ಬಾಸ್ ಮನೆ ರಂಗೇರುತ್ತಿದೆ. ಹೌದು ಅದರೊಂದಿಗೆ ಬಿಗ್‌ಬಾಸ್ ಮನೆಯಲ್ಲಿ ಸ್ಪರ್ಧಿಗಳ ಹಾವಳಿನೂ ಜೋರಾಗಿದ್ದು, ವಿನಯ್, ಸಂಗೀತಾ ಶೃಂಗೇರಿ, ಡ್ರೋನ್ ಪ್ರತಾಪ್, ತನಿಷಾ, ತುಕಾಲಿ ಸಂತೋಷ್ ಸೇರಿದಂತೆ ಹಲವು ಮಂದಿ ಪ್ರಬಲ ಸ್ಪರ್ಧಿಗಳು ಎನಿಸಿಕೊಂಡಿದ್ದಾರೆ.
ಅದರಲ್ಲೂ ವಿನಯ್ ಸ್ಟ್ರಾಂಗ್ ಕಂಟೆಸ್ಟೆಂಟ್ ಅಂತ ಅನಿಸಿಕೊಂಡಿದ್ದು, ಹಿನ್ನೆಲೆಯಲ್ಲೇ ಕಿಚ್ಚ ಸುದೀಪ್ ಕೂಡ ವಿನಯ್ ಬಗ್ಗೆ ಮಾತಾಡಿದ್ದರು. ಬಿಗ್‌ಬಾಸ್ ಮನೆಯೊಳಗೆ ವಿನಯ್ ಏರು ಧ್ವನಿಯಲ್ಲಿ ಮಾತಾಡುತ್ತಾ ಡಾಮಿನೇಟ್ ಮಾಡುತ್ತಿದ್ದಾರೆಂದು, ಹಲವು ಸ್ಪರ್ದಿಗಳ ಅನಿಸಿಕೆಯಾಗಿದ್ದು, ಸದ್ಯ ವೀಕ್ಷಕರು ಸಹ ವಿನಯ್ ನಡುವಳಿಕೆ ಬಗ್ಗೆ ಟ್ರೋಲ್ ಮಾಡಿದ್ದಾರೆ.
ಆದ್ರೀಗ ಬಿಗ್ ಬಾಸ್‌ನಲ್ಲಿ ವಿನಯನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಅವರ ಪತ್ನಿ ಅಕ್ಷತಾ ವಿನಯ್ ಆರೋಪ ಮಾಡಿದ್ದಾರೆ.ಬಿಗ್ ಬಾಸ್ ಮನೆಯಲ್ಲಿ ವಿನಯ್ ಅವರನ್ನು ಬಿಂಬಿಸುತ್ತಿರುವ ರೀತಿ ಖುಷಿಯಿಲ್ಲ ಎಂದು ಕಣ್ಣೀರಿಟ್ಟ ಅಕ್ಷತಾ ವಿನಯ್ ಒಂದು ಸಂದರ್ಶನದಲ್ಲಿ ವಿನಯ್ ಬಿಗ್ ಬಾಸ್ ಮನೆಗೆ ಹೋಗಿದ್ದು ಖುಷಿಯಿದೆ.
ಆದರೆ, ಅವರನ್ನು ತೋರಿಸುತ್ತಿರೋದು ಖುಷಿಯಿಲ್ಲ. ಅವರನ್ನು ಬಿಂಬಿಸುತ್ತಿರುವ ರೀತಿ ಖುಷಿಯಿಲ್ಲ. ಯಾಕೆ ಆ ರೀತಿ ಮಾಡುತ್ತಿದ್ದಾರೆ ಅನ್ನೋ ಬಗ್ಗೆ ನನಗೆ ತುಂಬಾನೇ ಬೇಜಾರಿದೆ. ಅವರೆಲ್ಲರನ್ನು ನೋಡಿದರೆ ವಿನಯ್ ಮಾತ್ರ ಡಿಫ್ರೆಂಟ್ ಆಗಿದ್ದಾರೆ ಅಂತ ಅನಿಸುತ್ತಾರೆ. ಮನೆಯೊಳಗೆ ಎಲ್ಲರೊಂದಿಗೂ ಫ್ರೆಂಡ್ಲಿಯಾಗಿದ್ದಾರೆ.
ಆ ಬಗ್ಗೆ ಖುಷಿಯಾಗಿದೆ. ಆದರೆ, ಯಾಕೆ ಹೀಗೆ ಬಿಂಬಿಸುತ್ತಿದ್ದಾರೆ ಅಂತ ಬೇಜಾರಿದೆ. ಎಂದು ಅಕ್ಷತಾ ವಿನಯ್ ಆರೋಪಿಸಿದ್ದಾರೆ. ಅವರ ಒಳ್ಳೆತನವನ್ನು ಹೈಲೈಟ್ ಮಾಡುತ್ತಿಲ್ಲ. ಮನೆಯಲ್ಲಿ ಇದ್ಮೇಲೆ ಕತ್ತೆ ಅನ್ನೋದು ಅದು ಇದೂ ಅಂತ ಮಾತಾಡುತ್ತಾರೆ. ತಮಾಷೆಗೂ ಅದನ್ನು ಹೇಳಬಹುದು. ತಮಾಷೆಗೆ ಹೇಳಿರುವುದನ್ನೂ ಸೀರಿಯಸ್ ಆಗಿ ತೆಗೆದುಕೊಂಡು ಅದನ್ನೇ ಪ್ರೋಮೊ ಮಾಡಿ ಹಾಕುತ್ತಿದ್ದಾರೆ.
ಅದ್ಯಾಕೆ ಅಂತ ಕೇಳೋಣ ಅಂತ ಚಾನೆಲ್‌ಗೆ ಬಹಳಷ್ಟು ಬಾರಿ ಫೋನ್ ಮಾಡಿದೆ. ಆದರೆ, ಅವರು ಪ್ರತಿಕ್ರಿಯೆ ನೀಡಲಿಲ್ಲ. ಸಂಗೀತಾ ಮತ್ತು ವಿನಯ್ ಮಧ್ಯೆ ಮೊದಲಿನಿಂದಲೂ ಸರಿಯಿಲ್ಲ ಹಾಗೆಂದು ಅವರಿಬ್ಬರೂ ದ್ವೇಷಿಸುತ್ತಿಲ್ಲ ಎಂದು ಅಕ್ಷತಾ ವಿನಯ್ ಹೇಳಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.