ಹೊರದೇಶದಲ್ಲಿ ಮಂಗಳೂರಿನ ತುಳು ಭಾಷೆ ಮಾತನಾಡಿದ 'ಡಾ ಬ್ರೋ; ಕನ್ನಡಿಗರಿಗೆ ಮೈಜುಮ್
ನಮಸ್ಕಾರ ದೇವ್ರು. ಎಂದರೆ ಸಾಕು. ಮೊದಲು ನೆನಪಾಗೋದೇ ಡಾ.ಬ್ರೋ. ಕನ್ನಡದ ಯುವಕನೊಬ್ಬ ಬಹುತೇಕ ಎಲ್ಲಾ ದೇಶಗಳನ್ನೂ ಸುತ್ತಿ ಅಲ್ಲಿನ ಪರಿಚಯ ಮಾಡುವ ಪರಿ ಅಂತೂ ಅತ್ಯದ್ಭುತವಾದದ್ದೆ. ಕನ್ನಡಿಗರಿಗೇ ಅಂಗೈನಲ್ಲೆ ಇಡೀ ಜಗತ್ತನ್ನೇ ತೋರಿಸ್ತಿದ್ದಾರೆ ಡಾ.ಬ್ರೋ. ಯೂಟ್ಯೂಬ್ನಲ್ಲಿ ಅಲ್ಪ ಕಾಲದಲ್ಲಿಯೇ ಕೋಟಿ ಕೋಟಿ ಅಭಿಮಾನಿಗಳನ್ನು ಪಡೆದಿರುವ ಡಾ.ಬ್ರೋ ವಿಶೇಷತೆ ಎಂದರೆ ಯಾವ ದೇಶಕ್ಕೆ ಹೋದರೂ ಅಲ್ಲಿ ಕನ್ನಡದಲ್ಲಿಯೇ ಮಾತನಾಡಿ ಕನ್ನಡಿಗರ ಹೃದಯ ಗೆಲ್ಲುತ್ತಿದ್ದಾರೆ.
ತಾಲಿಬಾನ್, ಪಾಕಿಸ್ತಾನ್ದಂಥ ರಾಷ್ಟ್ರಗಳಿಗೂ ಮುನ್ನುಗ್ಗಿ ಅಲ್ಲಿನವರನ್ನು ಮಾತನಾಡಿಸಿ ಅದರ ವಿಡಿಯೋ ಮಾಡುವ ಸಾಹಸ ಬಹುಶಃ ಸಾಮಾನ್ಯ ಜನರಿಗೆ ಕನಸಿನ ಮಾತೇ. ಇಂಥ ದುಸ್ಸಾಹಸಕ್ಕೂ ಕೈ ಹಾಕಿದವರು ಡಾ.ಬ್ರೋ. ಡಾ. ಬ್ರೋ ನಿಜವಾದ ಹೆಸರು ಗಗನ್. ಅತ್ಯಂತ ಕಾಡು ಮನುಷ್ಯರಿಂದಲೇ ತುಂಬಿ ಹೋಗಿರುವ ದೇಶಗಳಿಗೂ ನುಗ್ಗಿದ್ದಿದೆ. ಉಗಾಂಡಾಕ್ಕೆ ಹೋಗಿ ಅಭಿಮಾನಿಗಳಿಗೆ ಆತಂಕವನ್ನೂ ಮೂಡಿಸಿದ್ದಾರೆ.
ತಾಲೀಬಾನಿಗಳನ್ನೂ ಮಾತನಾಡಿಸಿ ಫ್ಯಾನ್ಸ್ಗೆ ಶಾಕ್ ನೀಡಿದ್ದಾರೆ. ದಯವಿಟ್ಟು ನಿಮ್ಮ ಪ್ರಾಣ ಪಣಕ್ಕಿಡಬೇಡಿ ಎಂದು ಅಭಿಮಾನಿಗಳು ಹೇಳುತ್ತಲೇ ಇರುತ್ತಾರೆ . ಆದರೂ ಧೈರ್ಯದಿಂದ ಗಗನ್ ಎಲ್ಲಾ ದೇಶಗಳಿಗೂ ಲಗ್ಗೆ ಇಡುತ್ತಿದ್ದಾರೆ.ಇದೀಗ ಇಂಡೋನೇಷಿಯಾಕ್ಕೆ ಪ್ರಯಾಣ ಬೆಳೆಸಿದ್ದು, ಅಲ್ಲಿ ತುಳು ಮಾತನಾಡಿ ಸಕತ್ ಸದ್ದು ಮಾಡಿದ್ದಾರೆ.
ಅಂದಹಾಗೆ ಗಗನ್ ಅವರೇನೂ ತುಳುನಾಡಿನವರಲ್ಲ. ಬೆಂಗಳೂರಿನವರು. ಆದರೆ ತುಳುವಿನಲ್ಲಿ ಒಂದೇ ಒಂದು ವಾಕ್ಯ ಕಲಿತಿದ್ದು, ಅದನ್ನು ಇಂಡೋನೇಷಿಯಾದಲ್ಲಿಯೂ ಹೇಳುವ ಮೂಲಕ ಸಕತ್ ವೈರಲ್ ಆಗುತ್ತಿದ್ದಾರೆ. ಈ ಕುರಿತು ವಿಡಿಯೋ ತುಣುಕೊಂದನ್ನು ತುಳು ಕಂಟೆಂಟ್ ಕ್ರಿಯೇಟರ್ ಶರಣ್ ಚಿಲಿಂಬಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ಅದೀಗ ವೈರಲ್ ಆಗಿದೆ.
ಕೆಲ ದಿನಗಳ ಹಿಂದೆ ಗಗನ್ ಅವರು ಮಂಗಳೂರಿಗೆ ಭೇಟಿ ನೀಡಿದ್ದರು. ಆಗ ಶರಣ್ ಚಿಲಿಂಬಿ ಅವರು ಹೇಗಿದ್ದೀರಿ ಎನ್ನುವುದಕ್ಕೆ ತುಳುವಿನಲ್ಲಿ ಏನು ಹೇಳುತ್ತಾರೆ ಎಂದು ಕಲಿಸಿಕೊಟ್ಟಿದ್ದರು. ಎಂಚ ಉಲ್ಲರ್ ಎಂದರೆ ಹೇಗಿದ್ದೀರಿ ಎಂದು ಹೇಳಿದ್ದರು. ಇದನ್ನೇ ಗಗನ್ ಅವರು, ಇಂಡೋನೇಷಿಯಾದಲ್ಲಿಯೂ ಬಳಸಿದ್ದಾರೆ.
ಇಂಡೋನೇಷಿಯಾದಲ್ಲಿ ಡಾ. ಬ್ರೋ ಗಾಡಿಯಲ್ಲಿ ಹೋಗುತ್ತಿರುವಾಗ ಅಲ್ಲಿನ ಸ್ಥಳೀಯರಿಗೆ ಕೈಬೀಸಿ ಹಲೋ… ಎಂಚ ಉಲ್ಲರ್. ಎಂಚ ಉಲ್ಲರ್ ಎಂದು ತುಳುವಿನಲ್ಲಿ
ಮಾತನಾಡಿರುವಂತಹ ದೃಶ್ಯವನ್ನು ಕಾಣಬಹುದು. ಇದರ ವಿಡಿಯೋ ತುಣುಕು ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ತುಳು ಮಾತನಾಡುವವರ ಮನ ಗೆದ್ದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.