FactCheck:ಕಾಲ್ತುಳಿತಕ್ಕೆ ನೀನೆ ಕಾರಣ ಎಂದ ಸಚಿನ್; ಅಸಲಿಯಾಗಿ ಸಚಿನ್ ಹೇಳಿದ್ದೇ ನು
Jun 13, 2025, 15:56 IST
ಹದಿನೆಂಟು ವರ್ಷದ ನಂತರ ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ, ಅಭಿಮಾನಿಗಳ ಆಸೆಯನ್ನು ಕೊನೆಗೂ ಈಡೇರಿಸಿತ್ತು. ಈ ಸಂಭ್ರಮವನ್ನು ಬೆಂಗಳೂರಿನ ಜನತೆಯೊಂದಿಗೆ ಹಂಚಿಕೊಳ್ಳಲು ನಗರಕ್ಕೆ ಬಂದರು. ತಮ್ಮ ನೆಚ್ಚಿನ ಕ್ರಿಕೆಟಿಗರನ್ನು ನೋಡಲು ನುಗ್ಗಿದ ಅಭಿಮಾನಿಗಳಿಂದ ಕಾಲ್ತುಳಿತ ಉಂಟಾಗಿ 11ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆ ಮುಂದೆ ಪ್ರೀತಿ ಪಾತ್ರರನ್ನು ಕಳೆದುಕೊಂಡವರ ಗೋಳಾಟ ಮುಂದುವರೆದಿದೆ. ಈ ಬಗ್ಗೆ ಸಚಿನ್ ತೆಂಡೂಲ್ಕರ್ ಸಂತಾಪ ಸೂಚಿಸಿದ್ದಾರೆ. ಸರ್ಕಾರ, ಆರ್‌ಸಿಬಿ, ಕೆಎಸ್‌ಸಿಎಯಿಂದ ಪರಿಹಾರ ಘೋಷಿಸಲಾಗಿದೆ.
ಹೌದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ದುರಂತದ ಬಗ್ಗೆ ಸಚಿನ್ ತೆಂಡೂಲ್ಕರ್ ಕಳವಳ ವ್ಯಕ್ತಪಡಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ತಂಡದ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 11 ಜನರು ಮೃತಪಟ್ಟಿದ್ದಾರೆ. 33 ಜನರಿಗೆ ಗಾಯಗಳಾಗಿವೆ. ಈ ಘಟನೆ ಆರ್‌ಸಿಬಿ ತಂಡದ ಐತಿಹಾಸಿಕ ಐಪಿಎಲ್ ಗೆಲುವಿನ ಸಂಭ್ರಮವನ್ನು ದುಃಖದಲ್ಲಿ ಮುಳುಗಿಸಿದೆ.
<a href=https://youtube.com/embed/A2Z2ucaqU6Y?autoplay=1&mute=1><img src=https://img.youtube.com/vi/A2Z2ucaqU6Y/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಸಚಿನ್ ತೆಂಡೂಲ್ಕರ್ ಅವರು ಎಕ್ಸ್‌ನಲ್ಲಿ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಘಟನೆ ಘೋರ ದುರಂತ. ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಎಲ್ಲರಿಗೂ ಶಾಂತಿ ಮತ್ತು ಧೈರ್ಯ ಸಿಗಲಿ.ಈ ದುರಂತದ ನೋವು, ಗೆಲುವಿನ ಸಂತೋಷವನ್ನು ಮರೆಸಿದೆ. ನಾವು ಸಂತ್ರಸ್ತರ ಜೊತೆಗಿದ್ದೇವೆ ಎಂದು ಸಚಿನ್ ಅವರು ಹೇಳಿದ್ದಾರೆ.
ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ಬೆಂಗಳೂರು ಮೂಲದ ಅನಿಲ್ ಕುಂಬ್ಳೆ, ಕ್ರಿಕೆಟ್ ಜಗತ್ತಿಗೆ ದುಃಖದ ದಿನ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ, ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಕೂಡ ದುಃಖ ಹಂಚಿಕೊಂಡಿದ್ದು, ಸಂಭ್ರಮಾಚರಣೆ ಊಹಿಸಲಾಗದ ದುರಂತವಾಗಿ ಮಾರ್ಪಟ್ಟಿದೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.