ಸರ್ಕಾರವನ್ನೇ ನಡುಗಿಸಿದ ಹೈಕೋರ್ಟ್ ಜಡ್ಜ್; ಭ್ರಷ್ಟಾಚಾರದ ವಿರುದ್ಧ ತೊಡೆತಟ್ಟಿದ ಲಾಯರ್
ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಯು 'ಕಲೆಕ್ಷನ್ ಸೆಂಟರ್' ಆಗಿದೆ, ಎಸಿಬಿ ಭ್ರಷ್ಟಾಚಾರದ ಕೂಪವಾಗಿದೆ, ಅದರ ಮುಖ್ಯಸ್ಥರೇ ಕಳಂಕಿತ ವ್ಯಕ್ತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರ ಬಗ್ಗೆ ಹೆಚ್ಚಿನ ಜನರಿಗೆ ಅರಿವಿಲ್ಲ. ಹೌದು ಸರ್ಕಾರದ ನಡೆಯನ್ನು ಖಂಡಿಸಿ ವಿರೋಧ ವ್ಯಕ್ತ ಪಡಿಸಿ ಯಾರ ಹೇಳಿಕೆಗೂ ಬಗ್ಗದ ನ್ಯಾಯಾಧೀಶರು ಇವರು.
ಇನ್ನು ಇವರಿಗೆ ವರ್ಗಾವಣೆಯ ಭೀತಿ ಎದುರಾಗಿತ್ತು ಆಗ
ನ್ಯಾಯಾಲಯಕ್ಕೆ ಬೆದರಿಕೆ ಹಾಕುವ ಪರಿಸ್ಥಿತಿ ಉದ್ಭವಿಸಿದೆ. ಎಸಿಬಿ ಎಡಿಜಿಪಿ ಬಹಳ ಪವರ್‌ಫುಲ್ ಆಗಿದ್ದಾರಂತೆ, ಓರ್ವ ವ್ಯಕ್ತಿ ಈ ವಿಚಾರವನ್ನು ನನ್ನ ಸಹೋದ್ಯೋಗಿ ನ್ಯಾಯಮೂರ್ತಿಯೊಬ್ಬರಿಗೆ ಹೇಳಿದ್ದಾರಂತೆ. ಅದನ್ನು ಆಧರಿಸಿ ನನ್ನ ಸಹೋದ್ಯೋಗಿ ನ್ಯಾಯಮೂರ್ತಿಗಳೇ ನನಗೆ ವರ್ಗಾವಣೆಯ ಬೆದರಿಕೆಯಿದೆ ಎಂದು ತಿಳಿಸಿದರು ಎಂದು ನ್ಯಾಯಮೂರ್ತಿಗಳು ಕಲಾಪ ಸಮಯದಲ್ಲಿ ಪ್ರಸ್ತಾಪಿಸಿದರು.
ಈ ವರ್ಗಾವಣೆ ಬೆದರಿಕೆಯ ಬಗ್ಗೆಯೂ ಆದೇಶದಲ್ಲಿ ಬರೆಯುತ್ತೇನೆ. ಯಾವುದೇ ರೀತಿಯ ಬೆದರಿಕೆ ಎದುರಿಸಲು ಸಿದ್ಧ. ಜನರ ಒಳಿತಿಗಾಗಿ ವರ್ಗಾವಣೆಯಾಗಲೂ ಸಿದ್ಧ. ಯಾರ ಬಗ್ಗೆಯೂ ನನಗೆ ಭಯವಿಲ್ಲ. ಬೆಕ್ಕಿಗೆ ಗಂಟೆ ಕಟ್ಟಲು ನಾನು ಸಿದ್ಧನಿದ್ದೇನೆ ಎಂದು ಗರಂ ಆಗಿ ಹೇಳಿಕೆ ನೀಡಿದ್ದರು.ಹೈಕೋರ್ಟ್ ನ್ಯಾಯಮೂರ್ತಿಯಾದ ಮೇಲೆ ಒಂದಿಂಚೂ ಆಸ್ತಿ ಮಾಡಿಲ್ಲ. ನನ್ನ ಹುದ್ದೆ ಹೋದರೂ ಚಿಂತೆಯಿಲ್ಲ. ನಾನು ರೈತನ ಮಗ. ನನ್ನ ತಂದೆ ನನಗಾಗಿ ಮಾಡಿರುವ ಭೂಮಿ ಇದೆ. ಅದನ್ನು ಉಳುಮೆ ಮಾಡಿಕೊಂಡು ಬದುಕಲೂ ಸಿದ್ಧನಿದ್ದೇನೆ.
ನನಗೆ 500 ರೂಪಾಯಿಯಲ್ಲಿ ಜೀವನ ನಡೆಸುವುದೂ ಗೊತ್ತು, 5,000 ರೂಪಾಯಿಯಲ್ಲಿ ಬದುಕುವುದಕ್ಕೂ ಗೊತ್ತು. ನಾನು ಯಾವುದೇ ರಾಜಕೀಯ ಪಕ್ಷಕ್ಕೂ ಸೇರಿಲ್ಲ. ಯಾವುದೇ ಪಕ್ಷದ ಸಿದ್ಧಾಂತಕ್ಕೂ ಬದ್ಧನಾಗಿಲ್ಲ. ಸಂವಿಧಾನಕ್ಕೆ ಮಾತ್ರ ನಾನು ಬದ್ಧವೆಂದರು.ಭ್ರಷ್ಟಾಚಾರ ನಿಗ್ರಹ ದಳವನ್ನು ಭ್ರಷ್ಟಾಚಾರ ತಡೆಯುವ ಉದ್ದೇಶದಿಂದ ಸ್ಥಾಪಿಸಲಾಗಿದೆಯೇ ಅಥವಾ ಭ್ರಷ್ಟಾಚಾರ ಎಸಗುವವರ ರಕ್ಷಣೆ ಮಾಡಲೆಂದು ಸ್ಥಾಪಿಸಲಾಗಿದೆಯೇ? ನಿಜಕ್ಕೂ ಇದು ನಾಚಿಕೆಗೇಡಿನ ಸಂಗತಿ ಎಂದು ಕರ್ನಾಟಕ ಹೈಕೋರ್ಟ್ ನ್ಯಾ. ಎಚ್. ಪಿ. ಸಂದೇಶ್ ಮತ್ತೆ ಎಸಿಬಿ ವಿರುದ್ಧ ಹರಿಹಾಯ್ದಿದ್ದರುರು. ಅದೇ ಕಾರಣದಿಂದ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.