ಮಕ್ಕಳಿಗೆ ಸಾಂಬಾರ್ ಹಾಕುವ ಬದಲು ಖಾರದ ಪುಡಿ ಹಾಕಿ ಊಟ ಮಾಡಿಸಿದ ಶಿಕ್ಷಕರು

 
ಶಾಲೆಯೊಂದು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟಕ್ಕೆ ಖಾರದಪುಡಿ ಬೆರೆಸಿದ ಅನ್ನ ಬಡಿಸುವ ಮೂಲಕ ವಿವಾದಕ್ಕೆ ಕಾರಣವಾಗಿದೆ. ಈ ಆಹಾರ ಸೇವಿಸಿದ ಮಕ್ಕಳು ಹೊಟ್ಟೆನೋವಿನಿಂದ ಬಳಲುತ್ತಿದ್ದು, ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಹಲವಾರು ಪೋಷಕರು ದೂರಿದ್ದಾರೆ.
ತೆಲಂಗಾಣದ ಕೊತ್ತಪಲ್ಲಿ ಗ್ರಾಮದ ಶಾಲೆಯೊಂದು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದಲ್ಲಿ ಖಾರದಪುಡಿ ಬೆರೆಸಿದ ಅನ್ನ ಬಡಿಸುವ ಮೂಲಕ ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಭಾರತ್ ರಾಷ್ಟ್ರ ಸಮಿತಿ ನಾಯಕರು ರಾಜ್ಯ ಸರ್ಕಾರವು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿದೆ ಎಂದು ಟೀಕಿಸಿದ್ದು, ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಕರೆ ನೀಡಿದ್ದಾರೆ.
ತೆಲಂಗಾಣ ಮುಖ್ಯಮಂತ್ತಿಗಳೇ, ನಮ್ಮ ಶಾಲೆಯ ಮಕ್ಕಳು ಇಂತಾ ಕ್ರೂರ ಆಹಾರಕ್ಕೆ ಅರ್ಹರೇ? ಕೆಸಿಆರ್ ಸರ್ಕಾರ ಶಾಲಾ ಮಕ್ಕಳಿಗೆ ಅದ್ಭುತವಾದ ಉಪಹಾರ ಯೋಜನೆಯನ್ನು ಜಾರಿಗೆ ತಂದಿದೆ, ಅದನ್ನು ಕಾಂಗ್ರೆಸ್ ಸರ್ಕಾರ ಯಾವುದೇ ಕಾರಣವಿಲ್ಲದೆ ರದ್ದುಗೊಳಿಸಿದೆ. ಈಗ ಈ ರೀತಿಯ ವರದಿಗಳನ್ನು ನೋಡುತ್ತಿರುವುದು ಆಘಾತಕಾರಿಯಾಗಿದೆ. ತೆಲಂಗಾಣ ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಶಾಲೆಗಳ ಪರಿಸ್ಥಿತಿಯನ್ನು ಆದಷ್ಟು ಬೇಗ ಪರಿಶೀಲಿಸಬೇಕು ಎಂದು ವಿನಂತಿಸುತ್ತೇನೆ ಎಂದು ರಾಮರಾವ್ ತಮ್ಮ ಎಕ್ಸ್​ ಪೋಸ್ಟ್​ನಲ್ಲಿ ಬರೆದಿದ್ದಾರೆ.
ಇನ್ನು ತೆಲಂಗಾಣ ಮಾಜಿ ಆರೋಗ್ಯ ಸಚಿವ ಹರೀಶ್ ರಾವ್ ಕೂಡ ಕಾಂಗ್ರೆಸ್ ಸರಕಾರವನ್ನು ಟೀಕಿಸಿದ್ದು, ಈ ಘಟನೆಯು ರೇವಂತ್ ರೆಡ್ಡಿ ಸರಕಾರದ ನಿರ್ಲಕ್ಷ್ಯ ಧೋರಣೆಯನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ. ಆಗಸ್ಟ್ 2 ರಂದು ಮಧ್ಯಾಹ್ನದ ಊಟ ನೀಡಿದ ಏಜೆನ್ಸಿಯು ವಿದ್ಯಾರ್ಥಿಗಳಿಗೆ ಖಾರದ ಪುಡಿ ಮತ್ತು ಎಣ್ಣೆ ಮಿಶ್ರಿತ ಅನ್ನವನ್ನು ಬಡಿಸಿದ ಘಟನೆ ಸಂಭವಿಸಿದೆ. 
ಖಾರದಪುಡಿ ಮಿಶ್ರಿತ ಅನ್ನಸ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾ ಶಿಕ್ಷಣಾಧಿಕಾರಿಗೆ ಸೂಚಿಸಲಾಗಿದೆ. ಹಲವಾರು ಪೋಷಕರು ತಮ್ಮ ಮಕ್ಕಳು ಹೊಟ್ಟೆನೋವಿನಿಂದ ಬಳಲುತ್ತಿದ್ದು, ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ದೂರಿದ್ದಾರೆ ವರದಿ ತಿಳಿಸಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.