ಮೀಸಲಾತಿಗೆ ಬಿತ್ತು ಕತ್ತರಿ? ಸಿಮ್ ಅವರಿಂದ ಟ್ವಿಟರ್ ನಲ್ಲಿ ಬಿಗ್ Update

 

ಖಾಸಗಿ ಕಂಪನಿಗಳಲ್ಲಿ ಎಲ್ಲಾ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದ ಪೋಸ್ಟ್‌ಗೆ ಬಂದ ವಿರೋಧದ ನಡುವೆ ಸಿಎಂ ಪೋಸ್ಟ್‌ ಅನ್ನು ಡಿಲೀಟ್ ಮಾಡಿದ್ದಾರೆ.

ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಉದ್ಯಮಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ-ವಿರೋಧ ಚರ್ಚೆಯಾಗುತ್ತಿದ್ದಂತೆಯೇ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಇದರಿಂದ ನಾನಾ ಪ್ರಶ್ನೆಗಳು ಹುಟ್ಟಿಕೊಂಡಿವೆ. <a href=https://youtube.com/embed/p0q7NW3idiY?autoplay=1&mute=1><img src=https://img.youtube.com/vi/p0q7NW3idiY/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಕನ್ನಡ ನಾಡಿನಲ್ಲಿ ಯಾವುದೇ ಕನ್ನಡಿಗರು ಉದ್ಯೋಗದಿಂದ ವಂಚಿತರಾಗಬಾರದು ಮತ್ತು ಅವರು ಶಾಂತಿಯುತ ಜೀವನ ನಡೆಸುವಂತಾಗಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡ ಪರ ಸರ್ಕಾರ ಎಂದು ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದರು. ಆದರೀಗ ಆ ಪೋಸ್ಟ್‌ ಅನ್ನು ಡಿಲೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೆ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಸೇರಿದಂತೆ ಕೈಗಾರಿಕೋದ್ಯಮಿಗಳ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ ತಮ್ಮ ಟ್ವಿಟ್ ಡಿಲೀಟ್ ಮಾಡಿಕೊಂಡಿದ್ದಾರೆ.

ಕರ್ನಾಟಕ ಸರ್ಕಾರ ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024 ಅನ್ನು ವಿಧಾನಸಭೆಯಲ್ಲಿ ಮಂಡಿಸಲು ಮುಂದಾಗಿದೆ. ಇದರಿಂದ ಉದ್ಯೋಗದಿಂದ ವಂಚಿರಾಗುತ್ತಿದ್ದ ಕನ್ನಡಿಗರಿಗೆ ಅನುಕೂಲ ಆಗಲಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.