ಕ್ಷೇತ್ರದ ಪವಾಡ ತಿಳಿದು, ಧರ್ಮಸ್ಥಳದ ಭಕ್ತರಿಗೆ ಸಿಹಿಸುದ್ದಿ ಕೊಟ್ಟ ಕೇಂದ್ರ ಸರ್ಕಾರ

 

ಹಾಳಾದ ರಸ್ತೆಯಿಂದ ಬೆಸೆತ್ತಿದ್ದ ಭಕ್ತಾದಿಗಳಿಗೆ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಸ್ಥಳೀಯರಿಗೆ ಸಿಹಿ ಸುದ್ದಿ.ಹೌದು ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಉಜಿರೆ-ಧರ್ಮಸ್ಥಳ- ಪೆರಿಯಶಾಂತಿ ವರೆಗಿನ ರಸ್ತೆಯ ಅಭಿವೃದ್ಧಿಗೆ ಹಸಿರು ನಿಶಾನೆ ತೋರಿಸಿದೆ.

ಧಾರವಾಡದ ಸಂಸದ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಫೇಸ್‌ಬುಕ್ ಪೋಸ್ಟ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ಸಚಿವರು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ರೂ. 613.65 ಕೋಟಿ ವೆಚ್ಚದಲ್ಲಿ NH-73ಯ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ವರೆಗಿನ 28.49 ಕಿ. ಮೀ. ಉದ್ದದ ರಸ್ತೆಯನ್ನು ಸುಸಜ್ಜಿತ ಎರಡು ಲೇನ್‌ಗಳಾಗಿ ವಿಸ್ತರಣೆ ಮಾಡಲು ಅನುಮೋದಿಸಿದೆ ಎಂದು ಹೇಳಿದ್ದಾರೆ.

ಈ ವಿಸ್ತರಣೆಯು ದಕ್ಷಿಣ ಕನ್ನಡ ಜಿಲ್ಲೆಯ NH-73 ಮತ್ತು NH-75 ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸುತ್ತದೆ. ಇದು ಧರ್ಮಸ್ಥಳದ ಶ್ರೀ ಮಂಜುನಾಥ ದೇವಸ್ಥಾನ ಮತ್ತು ಬಾಹುಬಲಿ ಪ್ರತಿಮೆಯಂತಹ ಹಲವಾರು ಮಹತ್ವದ ಪ್ರವಾಸಿ ಮತ್ತು ಧಾರ್ಮಿಕ ಸ್ಥಳಗಳನ್ನು ಸಂಪರ್ಕಿಸುತ್ತದೆ ಎಂದು ತಿಳಿಸಿದ್ದಾರೆ. ಹೆಚ್ಚುವರಿಯಾಗಿ, ಮಳೆಗಾಲದಲ್ಲಿ ಘಾಟ್ ವಿಭಾಗದಲ್ಲಿ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ನೀಡುತ್ತದೆ. 

ಕರ್ನಾಟಕದ ರಸ್ತೆ ಮೂಲಸೌಕರ್ಯವನ್ನು ಸುಧಾರಿಸುವಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ಶ್ರೀ ನಿತಿನ್ ಗಡ್ಕರಿ ಅವರಿಗೆ ಧನ್ಯವಾದಗಳು ಎಂದು ಪ್ರಹ್ಲಾದ್ ಜೋಶಿ ಪೋಸ್ಟ್ ಹಾಕಿದ್ದಾರೆ. ಉಜಿರೆ-ಧರ್ಮಸ್ಥಳ-ಪೆರಿಯಶಾಂತಿವರೆಗಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಿ, ಅಭಿವೃದ್ಧಿಗೊಳಿಸಬೇಕು ಎಂದು 2022ರಲ್ಲಿಯೇ ಪ್ರಸ್ತಾವನೆ ಸಿದ್ಧಗೊಳಿಸಲಾಗಿತ್ತು. 

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಧರ್ಮಸ್ಥಳ ನೇತ್ರಾವತಿ ತನಕದ ಚತುಷ್ಪಥ ರಸ್ತೆಯ ಉದ್ಘಾಟನೆ ವೇಳೆ ಉಜಿರೆ-ಪೆರಿಯಶಾಂತಿ ರಸ್ತೆಯನ್ನು ಮೇಲ್ದೆರ್ಜೆಗೆ ಏರಿಸಿ, ಅಭಿವೃದ್ಧಿಗೊಳಿಸುವ ಕುರಿತು ಸರ್ಕಾರದ ಗಮನ ಸೆಳೆದಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.