ನವೆಂಬರ್ ನಲ್ಲಿ ಸಿಎಮ್ ಬದಲಾವಣೆ ಗ್ಯಾರಂಟಿ ಎಂದ ಕೋಡಿಶ್ರೀಗಳು, ಸಿಎಮ್ ಯಾರು ಆಗ್ತಾರೆ ಅಂದರೆ

 

ರಾಜ್ಯ ರಾಜಕಾರಣದಲ್ಲಿ ಮತ್ತೆ ಮುಖ್ಯಮಂತ್ರಿಯ ಬದಲಾವಣೆ ಚರ್ಚೆ ಜೋರಾಗಿದೆ. ನವೆಂಬರ್‌ನಲ್ಲಿ ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡಲಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿಯೇ ಹರಿದಾಡುತ್ತಿವೆ. ಆದರೆ, ಈ ಕುರಿತು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಸ್ವಾಮೀಜಿ, ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಸಂಕ್ರಾಂತಿಯವರೆಗೆ ಯಾವುದೇ ಬದಲಾವಣೆ ಆಗುವುದಿಲ್ಲ. ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿಯೇ ಮುಂದುವರಿಯುತ್ತಾರೆ ಎಂದು ತಿಳಿಸಿದ್ದಾರೆ. ಈ ಹೇಳಿಕೆಗಳಿಂದಾಗಿ ಸಿಎಂ ಬದಲಾವಣೆಯ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಸ್ವಲ್ಪ ಮಟ್ಟಿಗೆ ತೆರೆ ಬಿದ್ದಂತಾಗಿದೆ.

ಅವರು ಮುಂದುವರೆದು, ರಾಜ್ಯದಲ್ಲಿ ಯಾವುದೇ ರಾಜಕೀಯ ಕ್ರಾಂತಿಯಾಗುವುದಿಲ್ಲ. ಜನರ ಹಿತಕ್ಕಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಹಬ್ಬಗಳು ನಡೆಯುತ್ತಿವೆ. ದಸರಾದ ನಿಜವಾದ ಅರ್ಥವೆಂದರೆ ದುಷ್ಟ ಶಕ್ತಿಗಳನ್ನು ದೂರವಿಡುವುದು. ಮನುಷ್ಯನು ತನ್ನೊಳಗಿನ ಕೋಪ, ತಾಪ, ಆಸೆಗಳನ್ನು ಗೆಲ್ಲುವ ಪ್ರಯತ್ನ ಮಾಡಬೇಕು. ಅಷ್ಟೇ ಅಲ್ಲದೆ ಶಾಂತಿ, ನೆಮ್ಮದಿ ಮತ್ತು ಸುಖವೇ ದಸರಾ ಹಬ್ಬದ ನಿಜವಾದ ಸಂದೇಶ ಎಂದು ತಿಳಿಸಿದರು. <a style="border: 0px; overflow: hidden" href=https://youtube.com/embed/S3MQweUHtok?autoplay=1&mute=1><img src=https://img.youtube.com/vi/S3MQweUHtok/hqdefault.jpg alt=""><span><div class="youtube_play"></div></span></a>" style="border: 0px; overflow: hidden;" width="640">

ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಕಸರತ್ತು ಮುಂದುವರಿದಿದ್ದರೂ, ಸ್ವಾಮೀಜಿಯ ಈ ಮಾತುಗಳು ಕಾಂಗ್ರೆಸ್ ನಾಯಕತ್ವಕ್ಕೆ ಶಾಂತಿ ತಂದಿವೆ. ವಿರೋಧ ಪಕ್ಷವು ಆಡಳಿತ ವೈಫಲ್ಯವನ್ನು ತೀವ್ರವಾಗಿ ಎತ್ತಿ ಹಿಡಿಯುತ್ತಿದ್ದರೆ, ಕಾಂಗ್ರೆಸ್ ತನ್ನ ಸರ್ಕಾರ ಸಂಪೂರ್ಣ ಅವಧಿ ಮುಂದುವರಿಯುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಿದೆ.