ಮಂಗಳೂರಿನ ನಡು ರಸ್ತೆಯಲ್ಲಿ ನಮಾಜ್ ಮಾಡಿದ ಮುಸ್ಲಿಮರು; ಸಿಡಿದೆ ದ್ದ ಸಾರ್ವಜನಿಕರು

 

ಧರ್ಮ ಆಚರಣೆಗಳು ಮನೆಯಲ್ಲಿರಬೇಕೆ ಹೊರತು ಸಮಾಜದಲ್ಲಲ್ಲ. ಹೌದು ಇತ್ತೀಚಿಗೆ ಬೆಂಗಳೂರಿನಲ್ಲಿ ಮುಸ್ಲಿಮರು ನಡುರಸ್ತೆಯಲ್ಲಿ ಕೂತು ನಮಾಜ್  ​ಮಾಡುತ್ತಿದ್ದ ಭಾವಚಿತ್ರ ಎಲ್ಲಡೆ ಹರದಾಡಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಕಳೆದ ಶುಕ್ರವಾರ ಘಟನೆ ನಡೆದಿದ್ದು, ನಮಾಜ್​ ಮಾಡಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ.

ಕಂಕನಾಡಿಯಲ್ಲಿನ ಮಸೀದಿ ಮುಂದೆ ಇರುವ ರಸ್ತೆಯಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ನಡು ರಸ್ತೆಯಲ್ಲಿ ನಮಾಜ್​​ ಮಾಡುತ್ತಿದ್ದರಿಂದ ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದಾರೆ. ಕದ್ರಿ​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುಸ್ಲಿಮರು ನಮಾಜ್​ ಮಾಡಿದನ್ನು ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದ್ದು, ಅಸಮದಾನ ವ್ಯಕ್ತವಾಗಿದೆ. <a href=https://youtube.com/embed/wOIYHM7Byd0?autoplay=1&mute=1><img src=https://img.youtube.com/vi/wOIYHM7Byd0/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಇದೇ ವರ್ಷ ಫೆಬ್ರವರಿಯಲ್ಲಿ ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ವಾರ್ಡ್​ನಲ್ಲಿರುವ ಅತೀಕ್ ಮಸೀದಿ ಬಳಿ ಮುಸ್ಲಿಮರು ನಡು ರಸ್ತೆಯಲ್ಲಿ ನಮಾಜ್ ಮಾಡಿದ್ದರು. ಈ ಸಂಬಂಧ ಹಿಂದೂಪರ ಕಾರ್ಯಕರ್ತ ತೇಜಸ್​ ಗೌಡ ಅವರು ದೂರು ನೀಡಿದ್ದರು.ಇದಾದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡು ರಸ್ತೆಯಲ್ಲಿ ನಮಾಜ್​ ಮಾಡುತ್ತಿದ್ದ ಮುಸ್ಲಿಮರಿಗೆ ಪೊಲೀಸ್​ ಅಧಿಕಾರಿ ಬೂಟ್​ ಕಾಲಿನಿಂದ ಒದ್ದು ಎಬ್ಬಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್​ ಆಗಿತ್ತು. ಇದು ಪರ-ವಿರೋಧದ ಚರ್ಚೆಗೂ ಕಾರಣವಾಗಿತ್ತು.

ಇದೀಗ ಯುವಕರು ನಡುರಸ್ತೆಯಲ್ಲೇ ನಮಾಜ್‌ಗೆ ಕುಳಿತಿರುವುದರಿಂದ ವಾಹನ ಸವಾರರು ಮುಂದೆ ಚಲಿಸಲು ತೊಂದರೆಯಾಗಿದೆ. ಯೂಟರ್ನ್ ತೆಗೆದುಕೊಳ್ಳುವ ದೃಶ್ಯವೂ ಸ್ಪಷ್ಟವಾಗಿ ಸೆರೆಯಾಗಿದೆ. ಈ ಘಟನೆ ವಿಡಿಯೋ ಶೇರ್ ಮಾಡಿಕೊಂಡು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮಾಜ್ ಮಾಡಲೆಂದೇ ಮಸೀದಿ ಇರುವುದು ಆದರೆ ಮಸೀದಿ ಬಿಟ್ಟು ನಡುರಸ್ತೆಗೆ ಕುಳಿತು ನಮಾಜ್ ಮಾಡಿದರೆ ವಾಹನಗಳು ಸಂಚರಿಸುವುದು ಹೇಗೆಂದು ಪ್ರಶ್ನಿಸಿದ್ದಾರೆ. ರಸ್ತೆ ಮಧ್ಯೆ ನಮಾಜ್ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.