ಆತನ ವಿಚಾರ ದಯವಿಟ್ಟು ಬೇಡ! ಜಗ್ಗಣ್ಣ ವಾ ರ್ನಿಂಗ್

 
ಕಲಾವಿದರ ಸಂಘದ ಕಟ್ಟಡದಲ್ಲಿ ಹಲವು ಬಗೆಯ ಪೂಜೆ ಮಾಡಲಾಗಿದೆ. ಇದರಲ್ಲಿ ಅನೇಕ ಕಲಾವಿದರು ಭಾಗಿ ಆಗಿದ್ದಾರೆ. ನಟ ಜಗ್ಗೇಶ್​ ಕೂಡ ಆಗಮಿಸಿ ಈ ಪೂಜೆಯ ಬಗ್ಗೆ ಮಾತನಾಡಿದ್ದಾರೆ. ಇಂದು ನಡೆದ ಪೂಜೆ ದರ್ಶನ್​ ಸಲುವಾಗಿ ಮಾಡಿದ್ದು ಎಂಬ ಗುಮಾನಿ ಕೂಡ ಇದೆ. ಆ ಕುರಿತಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಜಗ್ಗೇಶ್​ ಅವರು ನೇರವಾಗಿ ಉತ್ತರ ನೀಡಿದ್ದಾರೆ.
ಕನ್ನಡ ಚಿತ್ರರಂಗದ ಬಹುತೇಕ ಕಲಾವಿದರು ಸೇರಿಕೊಂಡು ಇಂದು ಚಾಮರಾಜಪೇಟೆಯಲ್ಲಿ ಇರುವ ಕಲಾವಿದರ ಸಂಘದ ಕಟ್ಟಡದಲ್ಲಿ ಪೂಜೆ, ಹೋಮ ಮುಂತಾದ್ದನ್ನು ಮಾಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಈ ಪೂಜೆಯಲ್ಲಿ ಭಾಗಿಯಾಗಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಇದೇ ವೇಳೆ ನಟ ದರ್ಶನ್​ ಅವರು ಕೊಲೆ ಆರೋಪದಲ್ಲಿ ಜೈಲು ಸೇರಿರುವುದು ಕನ್ನಡ ಚಿತ್ರರಂಗದ ಪಾಲಿಗೆ ಬೇಸರದ ಸಂಗತಿ.
 ಅವರಿಗೆ ಕಾನೂನಿನ ಕಂಟಕ ಎದುರಾಗಿದೆ. ಆ ಸಲುವಾಗಿಯೇ ಕಲಾವಿದರ ಸಂಘದಲ್ಲಿ ಪೂಜೆ, ಹೋಮ ಮಾಡಲಾಗಿದೆ ಎಂಬ ಅನುಮಾನ ಕೆಲವರಿಗೆ ಇದೆ. ಆ ಪ್ರಶ್ನೆಗೆ ನಟ ಜಗ್ಗೇಶ್​ ಅವರು ಉತ್ತರಿಸಿದ್ದಾರೆ.ನನಗೆ ಕೂಡ ಆರಂಭದಲ್ಲಿ ಅದೇ ರೀತಿಯ ಮಾಹಿತಿ ಬಂತು. ದರ್ಶನ್​ಗಾಗಿ ಪೂಜೆ ಆಗಿದ್ದರೆ ನಾನು ಕೂಡ ಬರುತ್ತಿರಲಿಲ್ಲ. ಅದು ಬೇರೆ ಆಯಾಮ ಪಡೆದುಕೊಳ್ಳುತ್ತಿತ್ತು. ಆದರೆ ಇದು ಅದಲ್ಲ. ಕಲಾವಿದರ ಒಳಿತಿಗಾಗಿ ಈ ಪೂಜೆ ನಡೆದಿದೆ.  <a href=https://youtube.com/embed/lVxzm_43Q_Q?autoplay=1&mute=1><img src=https://img.youtube.com/vi/lVxzm_43Q_Q/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಕೆಲವರಿಗೆ ಮಾಹಿತಿ ಕೊರತೆ ಆಗಿರಬಹುದು. ಹಾಗಾಗಿ ಅಪಾರ್ಥ ಮಾಡಿಕೊಂಡಿದ್ದಾರೆ. ಅನೇಕರು ಬೇರೆ ವಲಯಗಳಿಂದ ನನಗೆ ಫೋನ್​ ಮಾಡಿ ಕೇಳಿದರು. ನನಗೂ ಅನುಮಾನ ಬಂತು. ವಿಚಾರಿಸಿದಾಗ ಆ ಥರ ಅಲ್ಲ ಎಂಬುದು ಗೊತ್ತಾದಮೇಲೆ ನಾನು ಕೂಡ ಬಂದೆ ಎಂದು ಜಗ್ಗೇಶ್​ ಹೇಳಿದ್ದಾರೆ.ನಾಗದೇವರು ಸಲಹೆ ನೀಡಿದೆ. ತಂದೆ-ತಾಯಿ ಮುಂದಿನ ಪೀಳಿಗೆಗೆ ಬುದ್ಧಿ ಹೇಳುವ ರೀತಿ ಒಗ್ಗಟ್ಟಾಗಿ ಹೋಗಿ ಎಂದಿದೆ. 
ನಾನು ಆಧ್ಯಾತ್ಮಿಕವಾಗಿ ಇರುವವನು. ಹಾಗಾಗಿ ನಿರ್ಮಾಪಕರ ಸಂಘಕ್ಕೆ ಸಲಹೆ ನೀಡಿದ್ದೆ. ಕೆಲವರಿಗೆ ದೇವರು ಅಂದ್ರೆ ಆಗಲ್ಲ. ಅಂಥವರಿಗೆ ನಾವು ಏನೂ ಮಾಡೋಕೆ ಆಗಲ್ಲ. ದೇವರನ್ನು ನಂಬುವವರ ಮತ್ತು ನಂಬದವರ ಬೆಳವಣಿಗೆ ಹೇಗಿದೆ ಅಂತ ನೀವೇ ನೋಡಿ ಎಂದಿದ್ದಾರೆ ಜಗ್ಗೇಶ್​. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು‌ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.