ರಶ್ಮಿಕಾ ಮಂದಣ್ಣ ಹೊಸ ಅವತಾರಕ್ಕೆ ಫಿದಾ ಆದ ಕನ್ನಡಿಗರು

 

ನಟಿ ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಡೀಪ್ ಫೇಕ್ ವಿಡಿಯೋಗೆ ಬಲಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ವೈರಲ್ ಆಗುತ್ತಿದ್ದು, ಇದರಲ್ಲಿ AI ಬಳಸಿ ಮಾರ್ಫಿಂಗ್ ಮಾಡಲಾಗಿದೆ. ಈ ವಿಡಿಯೋದಲ್ಲಿ ರಶ್ಮಿಕಾ ಮಂದಣ್ಣ ಮುಖವನ್ನು ಮಾಡೆಲ್‌ನ ಮುಖದೊಂದಿಗೆ ಎಐ ಸಹಾಯದಿಂದ ಸಂಯೋಜಿಸಲಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, 2024ರ ಏಪ್ರಿಲ್ ನಲ್ಲಿ ಕೊಲಂಬಿಯಾದ ಮಾಡೆಲ್ ಮತ್ತು ಕಂಟೆಂಟ್ ಕ್ರಿಯೇಟರ್ ಡೇನಿಯೆಲಾ ವಿಲ್ಲಾರ್ರಿಯಲ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು. ಇದರಲ್ಲಿ ಅವರು ಸ್ಟ್ರಾಪ್‌ಲೆಸ್ ಬಿಕಿನಿಯಲ್ಲಿ ಜಲಪಾತದ ಬಳಿ ಪೋಸ್ ನೀಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ, AI ಸಹಾಯದಿಂದ ಮಾಡೆಲ್‌ನ ಮುಖವನ್ನು ರಶ್ಮಿಕಾ ಅವರ ಮುಖದೊಂದಿಗೆ ಬದಲಾಯಿಸಲಾಗಿದ್ದು ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

https://www.facebook.com/share/r/LxSKiUQZ1htQLSTJ/?mibextid=xCPwDs

ಕಳೆದ ವರ್ಷ ನವೆಂಬರ್‌ನಲ್ಲಿ ರಶ್ಮಿಕಾ ಅವರ ಇದೇ ರೀತಿಯ ವೀಡಿಯೊ ವೈರಲ್ ಆಗಿತ್ತು. ಆ ವಿಡಿಯೋ ಕೂಡ ಎಐ ಸಹಾಯದಿಂದ ಮಾರ್ಫಿಂಗ್ ಮಾಡಿ ಮಾಡಲಾಗಿತ್ತು. ಹಳೆಯ ವೈರಲ್ ವೀಡಿಯೊದಲ್ಲಿ ಬ್ರಿಟನ್ ಮೂಲದ ಜಾರಾ ಪಟೇಲ್ ಅವರ ದೇಹದ ಮೇಲೆ ರಶ್ಮಿಕಾ ಅವರ ಮುಖವನ್ನು ಅಳವಡಿಸಲಾಗಿತ್ತು. ಆದರೆ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಇನ್​​ಸ್ಟಾಗ್ರಾಮ್​ನಲ್ಲಿ ಅವರ ಹಿಂಬಾಲಕರ ಸಂಖ್ಯೆ 3.2 ಕೋಟಿ ದಾಟಿದೆ. ಫಾಲೋವರ್ಸ್​ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಲೇ ಇದೆ. ರಶ್ಮಿಕಾ ಮಂದಣ್ಣ ಅವರು ತಮ್ಮ ಫ್ಯಾನ್ಸ್ ಖುಷಿಪಡಿಸಲು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. 

ಇತ್ತೀಚೆಗಂತೂ ಹಲವು ಬಗೆಯ ಫೋಟೋಶೂಟ್​ಗಳನ್ನು ಮಾಡಿಸಿ ರಶ್ಮಿಕಾ ಮಂದಣ್ಣ ಪೋಸ್ಟ್ ಮಾಡುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.