ರಿಷಭ್ ಶೆಟ್ಟಿಗೆ National award, ಒಮ್ಮೆಲೇ ಕಾಲ್ ಮಾಡಿ ರೊ ಚ್ಚಿಗೆದ್ದ ಯಶ್

 
ಕನ್ನಡ ನಟರಲ್ಲಿ ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗೋದಿಲ್ಲ ಎಂಬ ಮಾತು ಆಗಾಗ ಕೇಳಿ ಬರುತ್ತದೆ.ಆದರೆ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡದ ಸಿನಿಮಾಗಳು ಶೈನ್​ ಆಗಿವೆ. ರಿಷಬ್​ ಶೆಟ್ಟಿ ಅವರಿಗೆ ಕಾಂತಾರ ಸಿನಿಮಾದಲ್ಲಿನ ನಟನೆಗಾಗಿ ​‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಒಲಿದಿದೆ. ಈ ಸುದ್ದಿ ತಿಳಿದು ನಟ ‘ರಾಕಿಂಗ್ ಸ್ಟಾರ್​’ ಯಶ್​ ಅವರು ದೂರವಾಣಿ ಮೂಲಕ ರಿಷಬ್​ ಶೆಟ್ಟಿಗೆ ಅಭಿನಂದನೆ ತಿಳಿಸಿದರು. 
ಆ ಬಗ್ಗೆ ರಿಷಬ್​ ಮಾತನಾಡಿದ್ದಾರೆ. ಯಶ್​ ಅವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿನಿಮಾಗೆ ತುಂಬ ದೊಡ್ಡ ಬೆಂಬಲ ನೀಡಿದ್ದರು. ಸಿನಿಮಾ ನೋಡಿ ನನಗೆ ವಿಶ್​ ಮಾಡಿದ್ದರು. ಜನರಿಗೆ ಆ ಸಿನಿಮಾ ತಲುಪಲು ಅವರ ಕೊಡುಗೆ ಇತ್ತು. ಆ ಫೀಲಿಂಗ್​ ಇಂದಿಗೂ ಅವರ ಮೇಲಿದೆ. ಇಂದು ಅವರು ಶೂಟಿಂಗ್​ನಲ್ಲಿ ಇದ್ದರಂತೆ. ರಾಷ್ಟ್ರ ಪ್ರಶಸ್ತಿ ಬಂದ ತಕ್ಷಣ ಫೋನ್​ ಮಾಡಿ ವಿಶ್​ ಮಾಡಿದರು. ಖುಷಿ ಆಯಿತು, ತುಂಬ ಹೆಮ್ಮೆ ಎನಿಸುತ್ತಿದೆ ಅಂತ ಹೇಳಿದರು. ಕೆಜಿಎಫ್​ 2 ಸಿನಿಮಾಗೆ ಪ್ರಶಸ್ತಿ ಬಂದಿದ್ದಕ್ಕೆ ನಾನು ಅವರಿಗೆ ವಿಶ್​ ಮಾಡಿದೆ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.
ಕನ್ನಡದ ಕಾಂತಾರ ಸಿನಿಮಾದಲ್ಲಿ ಅತ್ಯುತ್ತಮ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ ಚಿತ್ರವಾಗಿ ಎರಡು ವಿಭಾಗದಲ್ಲಿ ಕಾಂತಾರ ಪ್ರಶಸ್ತಿ ಬಾಚಿಕೊಂಡಿದೆ.2022ನೇ ಸಾಲಿನಲ್ಲಿ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗೈದ ಚಿತ್ರಗಳ ಪಟ್ಟಿಯನ್ನು ಕೇಂದ್ರ ವಾರ್ತಾ ಪ್ರಸಾರ ಮತ್ತು ಮಾಹಿತಿ ಸಚಿವಾಲಯ ಘೋಷಿಸಿದೆ. 
ಅತ್ಯುತ್ತಮ ನಟರ ರೇಸ್ ನಲ್ಲಿ ರಿಷಬ್ ಶೆಟ್ಟಿ ಹಾಗೂ ಮಲೆಯಾಳಂ ನಟ ಮಮ್ಮುಟ್ಟಿ ನಡುವೆ ಭಾರಿ ಸ್ಪರ್ಧೆ ಎರ್ಪಟ್ಟಿತ್ತು. ಕೊನೆಗೆ ರಿಷಭ್ ಶೆಟ್ಟಿಗೆ ಪ್ರಶಸ್ತಿ ಒಲಿದುಬಂದಿದೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಅತ್ಯುತ್ತಮ ಕನ್ನಡ ಚಿತ್ರವಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸಾಹಸ ನಿರ್ದೇಶನ ವಿಭಾಗದಲ್ಲೂ ಕೆಜಿಎಫ್-2 ಪ್ರಶಸ್ತಿ ಗೆದ್ದಿದೆ. 
ಕಾಂತಾರ ಸಿನಿಮಾ 10 ಫಿಲ್ಮ್‌ಫೇರ್ ಪ್ರಶಸ್ತಿ ಪಡೆದುಕೊಂಡಿದೆ. ಇದರ ಜೊತೆ 10 ಸೈಮಾ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಜೊತೆಗೆ ಇದೀಗ ರಾಷ್ಟ್ರೀಯ ಪ್ರಶಸ್ತಿ ಗರಿಯೂ ಸೇರಿಕೊಂಡಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.