ಕೋಟಿ ಕುಬೇರನ ಕೈಹಿಡಿಯಲ್ಲಿದ್ದಾರೆ ಮೋಹಕ ತಾರೆ; ಈತನ ಒಂದು ದಿನದ ಆದಾಯ ಎಷ್ಟು ಗೊ ತ್ತಾ

 
ಸ್ಯಾಂಡಲ್ವುಡ್ ಮೋಹಕ ತಾರೆಗೆ ರಮ್ಯಾಗೆ ಕೊನೆಗೂ ಕಂಕಣ ಭಾಗ್ಯ ಕೂಡಿ ಬಂದಿದೆಯಂತೆ. ನಟಿ ರಮ್ಯಾ ಅವರು ಇದೇ ನವೆಂಬರ್ ತಿಂಗಳಲ್ಲಿ ಹಸೆಮಣೆ ಏರುವ ಸಿದ್ಧತೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಅವರ ಮದುವೆ ಕುರಿತು ಸಾಕಷ್ಟು ಪ್ರಶ್ನೆಗಳು ಹುಟ್ಟಿಕೊಂಡಿದ್ದು, ರಮ್ಯಾ ಅವರ ಅಭಿಮಾನಿಗಳು ಸಾಕಷ್ಟು ಭಾರೀ ರಮ್ಯಾ ಅವರ ಬಳಿ ಮದುವೆ ಯಾವಾಗ ಎನ್ನುವ ಪ್ರಶ್ನೆಯನ್ನ ಮುಂದಿಟ್ಟಿದ್ದು, ಕೊನೆಗೂ ನಟಿ ರಮ್ಯಾ ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಲಿದ್ದಾರೆ ಎನ್ನಲಾಗಿದೆ. 
ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಅವರ ಬಗ್ಗೆ ನ್ಯೂಸ್ ಫಸ್ಟ್ ಗೆ ಮಾಹಿತಿ ಲಭ್ಯವಾಗಿದೆ. ಸ್ಯಾಂಡಲ್ವುಡ್ ಮೋಹಕ ತಾರೆ ಅವರು ಇಷ್ಟರಲ್ಲೇ ನಿಶ್ಚಿತಾರ್ಥ ಕಾರ್ಯಕ್ರಮ ಕೂಡ ನಡೆಯಲಿದೆ ಎನ್ನಲಾಗಿದ್ದು, ನವೆಂಬರ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ನಟಿ ರಮ್ಯಾ ಅವರು ಉದ್ಯಮಿಯೊಬ್ಬರನ್ನು ಕೈ ಹಿಡಿಯಲಿದ್ದಾರೆ. ಆ ಉದ್ಯಮಿ ಯಾರು ಅನ್ನೋ ಗುಟ್ಟನ್ನು ಇನ್ನೂ ಬಿಟ್ಟು ಕೊಟ್ಟಿಲ್ಲ. ಆದರೆ, ಸದ್ಯದ ಮಾಹಿತಿ ಪ್ರಕಾರ ಚೌಧರಿ ಗಾರ್ಮೆಂಟ್ಸ್ ಮಾಲೀಕ ಪ್ರಭವ್ ಚೌಧರಿ ಅವರನ್ನು ರಮ್ಯಾ ವಿವಾಹ ಆಗಲಿದ್ದಾರೆ ಎನ್ನಲಾಗಿದೆ. <a href=https://youtube.com/embed/VgKEc_t_bk4?autoplay=1&mute=1><img src=https://img.youtube.com/vi/VgKEc_t_bk4/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ರಮ್ಯಾ ಅವರು ಕೇವಲ ಸಿನಿಮಾ ರಂಗದಲ್ಲಿ ಅಷ್ಟೇ ಅಲ್ಲ ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. 2013ರಲ್ಲಿ ರಮ್ಯಾ ಮಂಡ್ಯದಲ್ಲಿ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಮಾಜಿ ಸಂಸದೆ ರಮ್ಯಾ ಅವರು ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಘಟಕದ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಸ್ಪರ್ಧೆ ನಡೆಸಿದ್ದು, ಸಿದ್ದರಾಮಯ್ಯ ಅವರ ಪರವಾಗಿ ನಟಿ ರಮ್ಯ ಅಬ್ಬರದ ಪ್ರಚಾರವನ್ನ ನಡೆಸಿದ್ದರು.
ಇನ್ನೂ ಯಾವುದೇ ಚುನಾವಣೆಗಳಾದರೂ ನಟಿ ರಮ್ಯಾ ಅವರು ಸ್ಪರ್ಧೆಗೆ ಕೈ ನಾಯಕರು ಒತ್ತಡವನ್ನ ಹಾಕಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ನಟಿ ರಮ್ಯ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಇದೀಗ , ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ನಡೆಯಲಿದ್ದು, ಕೈ ಅಭ್ಯರ್ಥಿಯಾಗಿ ನಟಿ ರಮ್ಯಾ ಸರ್ಧೆ ನಡೆಸುತ್ತಾರೆ ಎಂಬ ಮಾತು ಕೇಳಿ ಬಂದಿದೆ. ಆದರೆ, ಇದುವರೆಗೂ ಈ ಬಗ್ಗೆ ಕಾಂಗ್ರೆಸ್‌ ನಿಂದ ಯಾವುದೇ ಸ್ಪಷ್ಟನೆ ನೀಡಿಲ್ಲ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.