ಕಾರಿನ ಒಳಗಡೆ ಕಂತೆಕಂತೆ ನೋಟು; ಅಧಿಕಾರಿಗಳ ಬಳಿ ಆ.ರೋಪಿ ಯಾರ ಹೆಸರು ಹೇಳಿದ್ದನೆ ಗೊ‌.ತ್ತಾ

 | 
Y

ಎಲ್ಲೆಲ್ಲೂ ಚುನಾವಣೆಯ ಕಾವು ಜೋರಾಗಿದೆ. ಹೌದು ಹಣ, ಹೆಂಡ, ಸೀರೆ ಹೀಗೆ ನೀಡಿ ಜನರಿಗೆ ಆಮಿಷ ಒಡ್ಡುವ ಕೆಲಸ ಕೂಡಾ ಎಗ್ಗಿಲ್ಲದೆ ನಡೆಯುತ್ತಿದೆ. ಎರಡು ಕಾರುಗಳಲ್ಲಿದ್ದ ಕಂತೆ ಕಂತೆ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದ ಪ್ರಕರಣ ಜಯನಗರದಲ್ಲಿ ನಡೆದಿದೆ. ಅನುಮಾನಾಸ್ಪದ ಕಾರಿನ ಗ್ಲಾಸ್ ಒಡೆದು ಮಹಿಳಾ ಅಧಿಕಾರಿ ಹಣ ಸೀಜ್  ಮಾಡಿ ದಿಟ್ಟತನ ಮೆರೆದಿದ್ದಾರೆ.

ಅಧಿಕಾರಿಗಳು ಬರುತ್ತಿದ್ದಂತೆ ಕಾರಿನಲ್ಲಿದ್ದ ಐವರು, ಚೀಲದಲ್ಲಿರುವುದು ಮಾವಿನ ಹಣ್ಣು ಎಂದಿದ್ದಾರೆ. ಬಳಿಕ ಅಧಿಕಾರಿಗಳು ಪರಿಶೀಲನೆಗೆ ಮುಂದಾದಾಗ ಒಂದು ಕಾರಿನಲ್ಲಿದ್ದ ಐವರು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟಿನಲ್ಲಿ ಚುನಾವಣೆಯ ಕಾವು ಜೋರಾಗಿಯೇ ಇದೆ.

ಬೆಳಗ್ಗೆ 9 ಗಂಟೆಯಿಂದ ಫೋಲೋ, ಬೆಂಜ್ ಮತ್ತು ಫಾರ್ಚೂನರ್ ಕಾರುಗಳು ಬಂದು ನಿಂತಿದ್ದವು. ಫೋಲೋ ಕಾರಿನಿಂದ ಬೈಕ್‍ಗೆ ಹಣ ತುಂಬಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೂಡಲೇ ಫಾರ್ಚೂನರ್ ಕಾರಿನಲ್ಲಿ ಐವರು ಪರಾರಿಯಾಗಿದ್ದಾರೆ. ಸದ್ಯ ಎರಡು ಕಾರು ಮಾತ್ರ ಉಳಿದಿವೆ. ಒಂದು ಬೈಕ್ ಹಾಗೂ ಎರಡು ಕಾರುಗಳಲ್ಲಿ ಮೂರು ಬ್ಯಾಗ್‍ನಲ್ಲಿ ಹಣ ಸಿಕ್ಕಿದೆ ಎಂದು ಎಂಸಿಸಿ ನೋಡಲ್ ಆಫೀಸರ್ ಮನೀಷ್ ಮೌದ್ಗಿಲ್ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳು ಬೆಂಜ್ ಕಾರಿನ ಗ್ಲಾಸ್ ಒಡೆದು ಹಣ ಇರುವ ಬ್ಯಾಗ್‍ನ್ನು ಹೊರಗೆ ತೆಗೆದಿದ್ದು, ಕಾರಿನ ಒಳಗಡೆ ಇದ್ದ ದಾಖಲಾತಿಗಳನ್ನ ವಶಕ್ಕೆ ಪಡೆದಿದ್ದಾರೆ. ಕಾರಿನ ಒಳಗಡೆ ಒಂದು ಮೊಬೈಲ್ ಕೂಡ ಪತ್ತೆಯಾಗಿದೆ. ಇದೀಗ ಎರಡು ಕೌಂಟಿಂಗ್ ಮಷಿನ್‍ಗಳನ್ನು ತರಿಸಿಕೊಂಡು ಅಧಿಕಾರಿಗಳು ಹಣ ಎಣಿಸುವ ಕಾರ್ಯದಲ್ಲಿ ತೊಡಗಿದ್ದಾರೆ.‌ (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.