ಮದುವೆಯಾದ 8 ತಿಂಗಳ ಬಳಿಕ ಗರ್ಭಿಣಿಯಾದ ಅದಿತಿ ಪ್ರಭುದೇವ, ಗಂಡನಿಗೆ Thanks ಎಂದ ಪತ್ನಿ

 | 
ಸ್

ಸದಾ ಸಾಮಾಜಿಕ ಜಾಲ ತಾಣಗಳಲ್ಲಿ ಆಕ್ಟಿವ್ ಆಗಿರುವ ಹಾಗೂ ಅತ್ಯುತ್ತಮ ವಿಡಿಯೋಗಳ ಮೂಲಕ ಜನಕ್ಕೆ ಹತ್ತಿರವಾದ ನಟಿ ಅದಿತಿ ಹೌದು ಈ ನಟಿ ಮತ್ತು ಉದ್ಯಮಿ ಯಶಸ್ ಜತೆ ಅವರ  2022 ರಲ್ಲಿ ವಿವಾಹ ನೆರವೇರಿತ್ತು. ಇದೀಗ ನಟಿ 2024ರ ಹೊಸ ವರ್ಷ ಆರಂಭವಾಗುತ್ತಿದ್ದಂತೆ ತಾವು ತಾಯಿ ಆಗುತ್ತಿರುವ ಸಿಹಿ ಸುದ್ದಿಯನ್ನು ಅಭಿಮಾನಿಗಳ ಬಳಿ ಹಂಚಿಕೊಂಡಿದ್ದಾರೆ.

2022ರ ನವೆಂಬರ್ ತಿಂಗಳಲ್ಲಿ ನಟಿ ಅದಿತಿ ಪ್ರಭುದೇವ ಉದ್ಯಮಿ ಯಶಸ್ ಜತೆ ಅವರ ವಿವಾಹ ನೆರವೇರಿತ್ತು. ಈಗ ಅವರು ಗುಡ್​ ನ್ಯೂಸ್ ನೀಡಿದ್ದಾರೆ. ಫೋಟೋ ಹಂಚಿಕೊಂಡು ಅವರು ಸಂಭ್ರಮಿಸಿದ್ದಾರೆ. ಹೌದು ಅವರು ತಾಯಿಯಾಗುತ್ತಿದ್ದಾರೆ. ಮದುವೆಯ ಮುನ್ನ ಹಾಗೂ ನಂತರ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಇವರು ಇದೀಗ ಈ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.

ಸಂಬಂಧಗಳಲ್ಲಿ ಶ್ರೇಷ್ಠವಾದದ್ದು , ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು ನಲಿವಿನಲ್ಲೂ ನಮ್ಮ ಬಾಯಿಂದ ಬರುವ ಏಕೈಕ ಪದ ಅಮ್ಮ. ಜೀವನದಲ್ಲಿ ಪ್ರತಿಯೊಬ್ಬರೂ ಪ್ರೀತಿಯಿಂದ ಗೌರವದಿಂದ ಕಾಣುವ ಸಂಬಂಧ ಅಮ್ಮ . ಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ ಅಮ್ಮ . 2024 ಕ್ಕೆ ನಾನು ಅಮ್ಮ ಎಂದು ಇನ್​ಸ್ಟಾಗ್ರಾಮ್​​ನಲ್ಲಿ ಬರೆದುಕೊಂಡು ಕೆಲವು ಮುದ್ದಾದ ಫೋಟೋಗಳು ಶೇರ್​ ಮಾಡಿದ್ದಾರೆ. ಫ್ಯಾನ್ಸ್ ಶುಭಾಶಯ ತಿಳಿಸುತ್ತಿದ್ದಾರೆ.

2022ರ ನವೆಂಬರ್ 28ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್​​ನ ಗಾಯತ್ರಿ ವಿಹಾರ ಗ್ರ್ಯಾಂಡ್​ನಲ್ಲಿ ಅದ್ದೂರಿಯಾಗಿ ಇವರ ವಿವಾಹ ನೆರವೇರಿತ್ತು.  ಅದಿತಿ ಪ್ರಭುದೇವ ಅವರು ಚಿತ್ರರಂಗದಲ್ಲಿ ಯಶಸ್ಸಿನ ಮೆಟ್ಟಿಲು ಏರುತ್ತಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇದರ ಜೊತೆಗೆ ತಾಯಿ ಆಗುತ್ತಿದ್ದಾರೆ. ಹಾಗೂ ತಮ್ಮದೇ ಸ್ವಂತ ಯುಟ್ಯೂಬ್ ಚಾನೆಲ್ ಅನ್ನು ಕೂಡ ನಡೆಸುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.