ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರ, ಅಮಿತ್ ಶಾ ಹೇಳಿಕೆ ವೈರಲ್

 | 
ಹಾ

ದೇಶದೆಲ್ಲಡೆ ಭಾರೀ ಸದ್ದು ಮಾಡುತ್ತಿರುವ ಹಾಸನದ ಹಾಲೀ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಸಿಡಿಯ ವಿಚಾರದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಉದ್ದೇಶವೇ ಬೇರೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಹುಬ್ಬಳ್ಳಿ - ಧಾರವಾಡದ ಸಂಸದ ಪ್ರಲ್ಹಾದ್ ಜೋಶಿ ಪರ ಮತಯಾಚಿಸಿ ನಂತರ ಭಾರೀ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ್ದ ಅಮಿತ್ ಶಾ, ಕಾಂಗ್ರೆಸ್ ಪಾರ್ಟಿಯ ವೋಟ್ ಬ್ಯಾಂಕ್ ರಾಜಕಾರಣದಿಂದ ಉದ್ದೇಶಪೂರ್ವಕವಾಗಿ ಸಿಡಿ ಬಿಡುಗಡೆ ವಿಳಂಬ ಮಾಡಿತು ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಉದ್ದೇಶಪೂರ್ವಕವಾಗಿಯೇ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸಿಡಿಯ ವಿಚಾರದಲ್ಲಿ ತಡವಾಗಿ ಕ್ರಮ ತೆಗೆದುಕೊಳ್ಳಲು ಆರಂಭಿಸಿತು. ಆ ಮೂಲಕ, ಒಕ್ಕಲಿಗರ ಮತಕ್ಕಾಗಿ ಸಿಡಿ ವಿಚಾರದಲ್ಲಿ ವಿಳಂಬ ನೀತಿಯನ್ನು ಅನುಸರಿಸಿತು  ಎಂದು ಅಮಿತ್ ಶಾ ಹೇಳಿದ್ದಾರೆ.

ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಚುನಾವಣೆ ಮುಗಿಯಲಿ ಎನ್ನುವುದು ಕಾಂಗ್ರೆಸ್ಸಿನ ಉದ್ದೇಶವಾಗಿತ್ತು. ಸಿಡಿ ವಿಚಾರದಲ್ಲಿ ಸಂಪೂರ್ಣ ಮಾಹಿತಿ ಕರ್ನಾಟಕ ಸರ್ಕಾರಕ್ಕೆ ಇತ್ತು, ಅವರ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅವರು ಪ್ರಜ್ವಲ್ನನ್ನು ಎಸ್ಕೇಪ್ ಮಾಡಲು ಅನುವು ಮಾಡಿಕೊಟ್ಟರು ಎಂದು ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ.

( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.