ಎರಡನೇ ಮಗುವಿನ ಬಳಿಕ ಮೂರನೇ ಸಿಹಿಸುದ್ದಿ ಕೊಟ್ಟ ಅಮೂಲ್ಯ ಹಾಗೂ ಜಗದೀಶ್, ಕನ್ನಡಿರಿಗೆ ಹಬ್ಬ

 | 
Hs

ಚೆಲುವಿನ ಚಿತ್ತಾರದ ನಟಿ ಅಮೂಲ್ಯ ಯಾರಿಗೆ ತಾನೇ ಗೊತ್ತಿಲ್ಲಾ ಹೇಳಿ. ಮದುವೆ ಬಳಿಕ ಮನೆ, ಮಕ್ಕಳು ಅಂತ ಬ್ಯುಸಿ ಆಗಿದ್ದ ನಟಿ ಅಮೂಲ್ಯ ಮತ್ತೆ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಸ್ಯಾಂಡಲ್​​ವುಡ್​ಗೆ ರೀ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ. ಇದರ ನಡುವೆ ಚೆಂದದ ಫೋಟೋಶೂಟ್ ಕೂಡ ಮಾಡಿಸಿದ್ದಾರೆ.7 ವರ್ಷಗಳ ಹಿಂದೆ ಮುಗುಳು ನಗೆ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ನಟಿ ಅಮೂಲ್ಯ ಇದೀಗ ಮತ್ತೆ ಕಮ್ ಬ್ಯಾಕ್ ಮಾಡ್ತಿದ್ದಾರೆ. 

ಜಗದೀಶ್ ಎಂಬುವವರನ್ನು ವಿವಾಹವಾದ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ರು. ಬಳಿಕ ನಟಿ ಮಕ್ಕಳ ಆರೈಕೆಯಲ್ಲೇ ಬ್ಯುಸಿ ಆಗಿದ್ರು. ನಟಿ ಅಮೂಲ್ಯ ಮಕ್ಕಳ ಜೊತೆ ಹಬ್ಬ-ಹರಿದಿನಗಳಲ್ಲಿ ಫೋಟೋಶೂಟ್​ ಮಾಡಿಸಿಕೊಳ್ತಾ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ. ಇದೀಗ ಚೆಂದದ ಫೋಟೋಗಳನ್ನು ನಟಿ ಶೇರ್ ಮಾಡಿದ್ದಾರೆ.

ನಟಿ ಅಮೂಲ್ಯ ಫ್ಯಾಮಿಲಿ ಫೋಟೋಗೆ ಲೈಕ್​ಗಳ ಸುರಿಮಳೆಯಾಗಿದೆ. ನಟಿಯ ಚೆಂದದ ಫ್ಯಾಮಿಲಿಯನ್ನು ನೋಡಿದ ಫ್ಯಾನ್ಸ್ ಕೂಡ ಫುಲ್ ಖುಷ್​ ಆಗಿದ್ದಾರೆ. ರಾಜಕುಮಾರರ ಜೊತೆ ರಾಜ-ರಾಣಿ ಎಂದು ಕಮೆಂಟ್ ಮಾಡ್ತಿದ್ದಾರೆ. ಈದೀಗ ಮತ್ತೆ ಕ್ಯಾಮರಾ ಮುಂದೆ ಬರಲು ಅಮೂಲ್ಯ ಭರ್ಜರಿ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಅಮೂಲ್ಯ ರೀ ಎಂಟ್ರಿ ಸುದ್ದಿ ಕೇಳಿ ಫ್ಯಾನ್ಸ್ ಕೂಡ ಫುಲ್ ಖುಷ್ ಆಗಿದ್ದಾರೆ. ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅಮೂಲ್ಯ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ.

ಪ್ರಜ್ವಲ್ ದೇವರಾಜ್ ಮತ್ತು ಗುರುದತ್ತ ಗಾಣಿಗ ಅವರ ಬಹು ನಿರೀಕ್ಷಿತ ಸಿನಿಮಾ ಕರಾವಳಿ ಮೂಲಕ ಅಮೂಲ್ಯ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ ಎನ್ನಲಾಗ್ತಿದೆ. ಪ್ರಜ್ವಲ್ ದೇವರಾಜ್ ಗೆ ಜೋಡಿಯಾಗಿ ಅಮೂಲ್ಯ ಕಾಣಿಸಿಕೊಳ್ಳಲಿದ್ದಾರೆ. ನಟಿ ಅಮೂಲ್ಯ ಕೂಡ ಕರಾವಳಿ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗ್ತಿದೆ. ಪ್ರತಿಭಾವಂತ ಕಲಾವಿದರ ಹುಡುಕಾಟದಲ್ಲಿದ್ದ ನಿರ್ದೇಶಕರು, ಆ ಪಾತ್ರಕ್ಕೆ ಅಮೂಲ್ಯ ಸೂಕ್ತ ಎಂದು ನಿರ್ಧರಿಸಿದ್ದಾರೆ.

ಅತಿ ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ. ಫೆಬ್ರವರಿಯಲ್ಲಿ ಸಿನಿಮಾ ಸಿನಿಮಾ ಶೂಟಿಂಗ್ ಕೂಡ ಶುರುವಾಗಿದೆ. ಬಾಲ ಕಲಾವಿದೆಯಾಗಿ ಸಿನಿಮಾ ಪಯಣ ಆರಂಭಿಸಿದ ಅಮೂಲ್ಯ 13ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಕೆಲವೇ ದಿನಗಳಲ್ಲಿ ಮತ್ತೆ ಸಿನೆಮಾ ರೂಪದಲ್ಲಿ ನಮ್ಮ ಮುಂದೆ ಕಾಣಿಸಿಕೊಳ್ತಾರೆ ಅಮೂಲ್ಯ ಅವರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.