ಮತದಾನ ಮಾಡವರಿಗೆ ಕ್ಯಾಕರಿಸಿ ಉಗಿದ ಅನಂತ್ ನಾಗ್; ಮೋದಿ ಗೆಲ್ಲಿಸಿ ದೇಶ ಉಳಿಸಿ

 | 
Uu

ನಿನ್ನೆಯಷ್ಟೇ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯಲ್ಲಿ ಸ್ಯಾಂಡಲ್‌ವುಡ್‌ ನಟ ನಟಿಯರು ಬೆಳಗ್ಗಿನಿಂದಲೇ ಮತದಾನ ಮಾಡಿ ಜಾಗೃತಿ ಮೂಡಿಸಿದರು. ಇನ್ನೂ ಸಂಜೆ 3 ಗಂಟೆ ವೇಳೆ ಶೇ 50.93ರಷ್ಟು ಮತದಾನ ದಾಖಲಾಗಿದೆ. ಕೆಲವೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ ಇನ್ನು ಕೆಲವೆಡೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಟ ಅನಂತ್‌ ನಾಗ್‌ ಅವರು ಅಶ್ವಥ್ ನಗರದ ಪುಟ್ಟಯ್ಯ ಕಾಂಪೌಂಡ್ ಅಂಗನವಾಡಿ ಕೇಂದ್ರದಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದ ಜತೆ ಮಾತನಾಡಿದ ಅವರು,  ಮತಹಾಕದವರ ವಿರುದ್ಧ ಆಕ್ರೋಶ ಹೊರಹಾಕಿದರು. ಮತದಾನ ಮಾಡದವರನ್ನ ಮತಪಟ್ಟಿಯಿಂದ ತೆಗೆದುಹಾಕಿ. 

ಕಳೆದ ಐದು ಚುನಾವಣೆಗಳಿಂದ ಇದರ ಬಗ್ಗೆಯೇ ಚರ್ಚೆ ಆಗುತ್ತಲೇ ಇದೆ. ಯಾರು ನಿರಂತರವಾಗಿ ಮತ ಹಾಕುವುದಿಲ್ಲವೋ ಅವರನ್ನ ಮತಪಟ್ಟಿಯಿಂದಲೇ ತೆಗೆದುಹಾಕಿ ಎಂದರು.ಗಡಿಯಲ್ಲಿ ಯೋಧರು ದೇಶಕ್ಕಾಗಿ ಪ್ರಾಣ ಕೊಡುತ್ತಿದ್ದಾರೆ. ಇವರು ಮನೆಯಿಂದ ಹೊರಬಂದು ಒಂದು ಓಟ್ ಮಾಡೋಕಾಗಲ್ವ? ಸ್ವಾತಂತ್ರ್ಯ ಬಂದು 75 ವರ್ಷ ಆಯ್ತು.

 ಇನ್ನೂ ಎಂಥಹ ಜಾಗೃತಿ ಬೇಕು?. ಇಲ್ಲಿ ಯುವಕರು, ಹಿರಿಯರು ಎನ್ನುವ ಪ್ರಶ್ನೆ ಇಲ್ಲ. ಎಲ್ಲರನ್ನೂ ಒಂದೇ ತರಹ ನೋಡಿ. 75 ವರ್ಷಗಲ್ಲಿ ಆಗದ ಕೆಲಸ ಮುಂದೆ ಬರುವ ಸರ್ಕಾರ ಮಾಡಬೇಕು . ಅದೇ ಮಂಡ್ಯದಲ್ಲಿ ನೋಡಿ ಅತಿ ಹೆಚ್ಚಿನ ಮತದಾನವಾಗಿದೆ.ಮತದಾನ ಮಾಡಿದವರು ನಿಜವಾಗಿ ಸುಶಿಕ್ಷಿತರು ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.