ಬಿಗ್ ಬಾಸ್ ಪ್ರಿಯರಿಗೆ ಬಂಪರ್ ಸಿಹಿಸುದ್ದಿ, ಬಿಗ್ ಬಾಸ್ ಮನೆಗೆ ಮತ್ತೊಂದು ವೈಲ್ಡ್ ಕಾರ್ಡ್ ಎಂಟ್ರಿ

 | 
ರ್

ಸಾಮಾನ್ಯವಾಗಿ ಕಿರುತೆರೆಯ ಜನಪ್ರಿಯ ಷೋ ಆಗಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ಅವರನ್ನು ನೋಡಲು ವೀಕ್ಷಕರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ಆದರೆ, ಅವರು ಕೆಸಿಸಿ ಕಪ್ ಸೀಸನ್ 4ನಲ್ಲಿ ಭಾಗಿಯಾಗುವ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಸಂಜೆ ನಡೆಯುವ ವಾರದ ಕಥೆ ಕಿಚ್ಚನ ಜೊತೆ ಮತ್ತು ಕಿಚ್ಚನ ಪಂಚಾಯಿತಿಯಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳುವುದು ಅನುಮಾನವಾಗಿದೆ.

ಹೀಗಾಗಿ ಬಿಗ್ ಬಾಸ್ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದು, ನಟ, ಮಾಜಿ ಬಿಗ್ ಬಾಸ್ ಸ್ಪರ್ಧಿ ವಿಜಯ್ ರಾಘವೇಂದ್ರ ಅವರು ಬಿಗ್ ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಾರ ಕಿಚ್ಚನನ್ನು ಮಿಸ್ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನಟಿ ಶ್ರುತಿ ಅವರನ್ನು ಮನೆಯೊಳಗೆ ಕಳುಹಿಸಲಾಗಿದೆ. ಇದರಿಂದ ಎಲ್ಲ ಸ್ಪರ್ಧಿಗಳು ಸಂತೋಷದ ಅಲೆಯಲ್ಲಿ ತೇಲಿದ್ದು, ಅಷ್ಟರಲ್ಲೇ ಕಟಕಟೆಯಲ್ಲಿ ನಿಲ್ಲುವ ಗಳಿಗೆ ಎದುರಾಗಿದೆ. 

ಶ್ರುತಿ ನ್ಯಾಯಾಧೀಶರ ಕುರ್ಚಿಯಲ್ಲಿ ಕೂತಿದ್ದು, ಸ್ಪರ್ಧಿಗಳನ್ನು ಕಟಕಟೆಯಲ್ಲಿ ನಿಲ್ಲಿಸಿ ವಿಚಾರಣೆ ಮಾಡಿದ್ದಾರೆ. ನಟಿ ಶ್ರುತಿ ಅವರು ಮನೆಯಿಂದ ಹೊರ ಬರುತ್ತಿದ್ದಂತೆಯೇ ನಟ, ಮಾಜಿ ಬಿಗ್ ಬಾಸ್ ಸ್ಪರ್ಧಿ ವಿಜಯ್ ರಾಘವೇಂದ್ರ ಕೂಡ ಬಿಗ್ ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರತಿ ಶನಿವಾರ ಹಾಗೂ ಭಾನುವಾರ ಸುದೀಪ್ ಬಂದು ಆ ವಾರದ ಸ್ಪರ್ಧಿಗಳು ಮಾಡಿದ ತಪ್ಪು-ಒಪ್ಪುಗಳ ಬಗ್ಗೆ ಮಾತನಾಡುತ್ತಾರೆ. 

ಕಿಚ್ಚನ ಚಪ್ಪಾಳೆ ಯಾರಿಗೆ ಎಂದೂ ವೀಕ್ಷಕರು ಕಾಯುತ್ತಿರುತ್ತಾರೆ. ಶನಿವಾರ ಚೆನ್ನಾಗಿ ಕ್ಲಾಸ್ ತೆಗೆದುಕೊಂಡು, ಭಾನುವಾರ ಸುದೀಪ್ ಅವರು ಸ್ಪರ್ಧಿಗಳನ್ನು ನಕ್ಕು ನಲಿಸಿ ಹೊರಟು ಬಿಡುತ್ತಾರೆ. ಹಾಗೇ ಭಾನುವಾರ ನಾಮಿನೇಟ್ ಆದ ಸ್ಪರ್ಧಿಯ ಬಗ್ಗೆ ಮಾಹಿತಿ ಕೊಡುತ್ತಾರೆ. ಈ ಸಲ ಅದನ್ನು ವಿಜಯ್ ರಾಘವೇಂದ್ರ ಅವರು ಮಾಡಲಿದ್ದಾರೆ ಎನ್ನುವ ನ್ಯೂಸ್ ಎಲ್ಲೆಡೆ ವೈರಲ್ ಆಗಿದ್ದು ರವಿವಾರದ ತನಕ ಕಾದು ನೋಡಬೇಕಿದೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.