37ನೇ ವಸಂತಕ್ಕೆ ಕಾಲಿಟ್ಟ ಅನುಶ್ರೀ, ಈ ಬಾರಿಯ ಹುಟ್ಟುಹಬ್ಬಕ್ಕೂ ಮದುವೆ ಬಗ್ಗೆ Interest ಇಲ್ಲ ಎಂದ ಅನು

 | 
Hhh
ಕಿರುತೆರೆ ವೀಕ್ಷಕರಿಗೆ ಅನುಶ್ರೀ ಅವರ ಬಗ್ಗೆ ಹೇಳುವುದೇ ಬೇಡ. ಆ್ಯಂಕರ್​ ಅನುಶ್ರೀ ಎಂದೇ ಫೇಮಸ್​ ಆಗಿರುವ ಚಟಪಟ ಮಾತಿನ ಮಲ್ಲಿ ಈಕೆ. ಕನ್ನಡ ಕಿರುತೆರೆ ಜನಪ್ರಿಯ ನಿರೂಪಕಿ ಕಮ್ ಸ್ಯಾಂಡಲ್ವುಡ್ ನಟಿಯ ಪರಿಚಯ ಇಲ್ಲದವರೇ ಇಲ್ಲ ಎನ್ನಬಹುದೇನೋ. ಅದ್ಭುತವಾಗಿ ಕಾರ್ಯಕ್ರಮ ನಿರೂಪಣೆಯ ಜೊತೆಗೆ ಸಂಗೀತ, ನೃತ್ಯದಿಂದಲೂ ಮನರಂಜಿಸುತ್ತಾರೆ ಇವರು. 
ಅವರು ಟಿವಿ ಶೋಗಳನ್ನು ನಡೆಸಿಕೊಡುವ ಶೈಲಿಗೆ ವೀಕ್ಷಕರು ಫಿದಾ ಆಗಿದ್ದಾರೆ. ಕಿರುತೆರೆಯಲ್ಲಿ ಅನುಶ್ರೀ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಹಲವು ರಿಯಾಲಿಟಿ ಶೋಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಖ್ಯಾತಿ ಅವರಿಗಿದೆ. ತಮ್ಮ ಅದ್ಭುತ ನಿರೂಪಣಾ ಶೈಲಿಯಿಂದ ಇದಾಗಲೇ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಜನವರಿ 25, ಅನುಶ್ರೀ ಅವರಿಗೆ ಹುಟ್ಟುಹಬ್ಬದ ಸಂಭ್ರಮ. 36 ವರ್ಷ ಮುಗಿದು 37ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ ಇವರು. ಜೀ ಕನ್ನಡ ವಾಹಿನಿ ವಿಶೇಷ ವಿಡಿಯೋ ಒಂದನ್ನು ರಿಲೀಸ್ ಮಾಡುವ ಮೂಲಕ ಅನುಶ್ರೀ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ. 
ಆ್ಯಂಕರ್​ ಅನುಶ್ರೀ ಎಂದಾಕ್ಷಣ, ಅವರ ಲಕ್ಷಾಂತರ ಅಭಿಮಾನಿಗಳು ಸದಾ ಕೇಳುವ ಪ್ರಶ್ನೆ ಒಂದೇ ಮೇಡಂ... ಮದ್ವೆ ಯಾವಾಗ ಎನ್ನುವುದು. ಇದಕ್ಕೆ ಉತ್ತರ ಕೊಟ್ಟೂ ಕೊಟ್ಟೂ ಅನುಶ್ರೀಯವರು ಸೋತು ಹೋಗಿದ್ದಾರೆ. ಒಂದೇ ಪ್ರಶ್ನೆಯನ್ನು ಎಷ್ಟೂ ಅಂತ ಕೇಳ್ತೀರಾ ಎಂದು ಬೇಸರ ವ್ಯಕ್ತಪಡಿಸಿದ್ದೂ ಇದೆ. ನಾನು ಮದ್ವೆಯಾಗದೇ ಇರುವುದಿಲ್ಲ, ಆಗೇ ಆಗ್ತೀನಿ. ನಿಮಗೆ ಹೇಳಿಯೇ ಆಗ್ತೀನಿ. ಅಲ್ಲಿಯವರೆಗೆ ಮದ್ವೆ ವಿಷಯ ಕೆದಕದೇ ನನ್ನ ಪಾಡಿಗೆ ನನ್ನನ್ನು ಬಿಟ್ಟುಬಿಡಿ ಎಂದು ಅನುಶ್ರೀ ಅವರು ಅಭಿಮಾನಿಗಳಲ್ಲಿ ಹೇಳಿಕೊಂಡಿದ್ದೂ ಆಗಿದೆ.
ಆದರೆ ಅವರು ಸೋಷಿಯಲ್​ ಮೀಡಿಯಾದಲ್ಲಿ ಫೋಟೋ, ವಿಡಿಯೋ ಶೇರ್​ ಮಾಡಿದಾಗಲೆಲ್ಲಾ ತರ್ಲೆ ಫ್ಯಾನ್ಸ್​ ಇದೇ ಪ್ರಶ್ನೆ ಕೇಳುತ್ತಾರೆ.   ಗೂಗಲ್​ ದಾಖಲೆ ಪ್ರಕಾರ, ನಟಿ 1988ರ ಜ.25ರಂದು ಹುಟ್ಟಿದ್ದು, ಅವರಿಗೆ 36ವರ್ಷ. ವಯಸ್ಸು ಇಷ್ಟಾದರೂ ಮದುವೆ ಇನ್ನೂ ಆಗಿಲ್ಲ ಎನ್ನುವುದೇ ಅನುಶ್ರೀ ಅವರ ಅಭಿಮಾನಿಗಳಿಗೆ ಬೇಸರ ತಂದಿದೆ. ಆದ್ದರಿಂದ ಹೋದಲ್ಲಿ, ಬಂದಲ್ಲಿ ಮದ್ವೆ ಯಾವಾಗ ಎನ್ನುವ ಪ್ರಶ್ನೆಯೇ ಎದುರಾಗುತ್ತಿರುತ್ತದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.