ಮಿತಿಮೀರಿದ ವಯಸ್ಸಿನಲ್ಲಿ ಚಂದುಳ್ಳಿ ಚೆಲುವೆಯನ್ನು ಮದುವೆಯಾದ ಆಶಿಶ್ ವಿದ್ಯಾರ್ಥಿ, ಎಷ್ಟು ಸೂಪರ್ ಗೊತ್ತಾ‌ ಮದುಮಗಳು

 | 
Jjj

ಕನ್ನಡ ಮಾತ್ರವಲ್ಲದೇ ಬಹುಭಾಷೆಯಲ್ಲಿ ನಟಿಸಿರುವ ಆಶಿಶ್ ವಿದ್ಯಾರ್ಥಿ ಅವರು ತಮ್ಮ 61ನೇ ವಯಸ್ಸಿಗೆ 2ನೇ ಮದುವೆಯಾಗಿರೋದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಫ್ಯಾಷನ್ ಇಂಡಸ್ಟ್ರಿಯ ಉದ್ಯಮಿ ರೂಪಾಲಿ ಜೊತೆ ದಾಂಪತ್ಯ ಜೀವನಕ್ಕೆ ನಟ ಕಾಲಿಟ್ಟಿದ್ದಾರೆ. ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅವರು ಈ ಹಿಂದೆ ರಾಜೋಶಿ ಎಂಬುವವರನ್ನು ಮದುವೆಯಾಗಿದ್ದರು. ಆದರೆ ಈಗ ಆ ದಾಂಪತ್ಯಕ್ಕೆ ಸಾಕಷ್ಟು ವರ್ಷಗಳ ಹಿಂದೆಯೇ ಬ್ರೇಕ್ ಬಿದ್ದಿದೆ. 

ಉದ್ಯಮಿ ರೂಪಾಲಿ ಅವರನ್ನ ಇದೀಗ ನಟ ಆಶಿಶ್ 2ನೇ ಮದುವೆಯಾಗಿದ್ದಾರೆ. ಕೊಲ್ಕತ್ತಾದ ಕ್ಲಬ್‌ನಲ್ಲಿ ಮೇ25ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ. ಆಪ್ತರು, ಗುರುಹಿರಿಯರ ಸಮ್ಮುಖದಲ್ಲಿ ಸರಳವಾಗಿ ನಟ ಆಶಿಶ್ ಮದುವೆಯಾಗಿದ್ದಾರೆ. ನಮ್ಮ ಮದುವೆ ಸಿಂಪಲ್ ಆಗಿ ನಡೆಯಬೇಕೆಂದು ಆಸೆ ಇತ್ತು ಅದೇ ರೀತಿ ಆಯಿತು. ಖುಷಿಯಿದೆ. ಸದ್ಯದಲ್ಲೇ ನಮ್ಮಿಬ್ಬರ ಭೇಟಿ ಬಗ್ಗೆ ಎಲ್ಲವನ್ನೂ ಹೇಳುವೆ ಎಂದು ಆಶಿಶ್ ಮಾತನಾಡಿದ್ದಾರೆ. ವರದಿಗಳ ಪ್ರಕಾರ, ಅವರ ಮದುವೆಯಲ್ಲಿ ಆಪ್ತರು ಮತ್ತು ಸ್ನೇಹಿತರು ಮಾತ್ರ ಭಾಗವಹಿಸಿದ್ದರು. 

ಅವರ ಮದುವೆಯ ಪೋಟೋಗಳು ಇದೀಗ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಅಷ್ಟಕ್ಕೂ ರೂಪಾಲಿ ಅಸ್ಸಾಂನ ಗುವಾಹಟಿ ಮೂಲದವರಾಗಿದ್ದು, ಉದ್ಯಮಿಯಾಗಿದ್ದಾರೆ. ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ದುಬಾರಿ ಫ್ಯಾಷನ್ ಶಾಪ್​ ಇಟ್ಟುಕೊಂಡಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ 11 ಭಾಷೆಗಳಲ್ಲಿ ಸುಮಾರು 300 ಸಿನಿಮಾಗಳಲ್ಲಿ ನಟಿಸಿದ್ದಾರೆ ಆಶಿಶ್ ವಿದ್ಯಾರ್ಥಿ. 

ಇನ್ನು ಮದುವೆಯ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿರುವ ಆಶಿಶ್ ವಿದ್ಯಾರ್ಥಿ, "ನನ್ನ ಜೀವನದ ಈ ಹಂತದಲ್ಲಿ, ರೂಪಾಲಿ ಅವರನ್ನು ಮದುವೆಯಾಗುವುದು ಒಂದು ಅಸಾಮಾನ್ಯ ಭಾವನೆ. ರೂಪಾಲಿ ಭೇಟಿ ಹೇಗಾಯಿತು ಎಂಬುದನ್ನು ಬೇರೆ ಸಮಯದಲ್ಲಿ ಹಂಚಿಕೊಳ್ಳುತ್ತೇನೆ. ನಾವು ಸ್ವಲ್ಪ ಸಮಯದ ಹಿಂದಷ್ಟೇ ಪರಿಚಯವಾಗಿದ್ದು, ಈ ಬಂಧವನ್ನು ಮುಂದಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.