ಗಂಗೆ ನೀರು ಸ್ವಚ್ಛ ಇಲ್ಲ ಎಂದವರಿಗೆ ಟಕ್ಕರ್ ಕೊಟ್ಟು ಮೂರು ಬಾರಿ ಕುಂಭಮೇಳದ ತ್ರಿವೇಣಿಯಲ್ಲಿ ಮಿಂದೆದ್ದ ಬಿಗ್ ಬಾಸ್ ಅನುಷಾ ರೈ

 | 
Ji
ಬಿಗ್ ಬಾಸ್ ಸೀಸನ್ 11 ರಲ್ಲಿ ತಮ್ಮ ಕಲ್ಮಶವಿಲ್ಲದ ಆಟ ಹಾಗೂ ಮುಗ್ಧತೆಯ ಮೂಲಕ ಕನ್ನಡಿಗರ ಮನ ಗೆದ್ದ ನಟಿ ಅನುಷಾ ರೈ. ಬಿಗ್ ಬಾಸ್ ಮನೆಯಲ್ಲಿ ಇದ್ದಿದ್ದು ಕೆಲವೇ ದಿನವಾದರೂ ಇವರು ಜನರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಹಾಗಾಗಿಯೇ ಬಿಗ್ ಬಾಸ್ ನಿಂದ ಹೊರ ಬಂದ ಮೇಲೂ ಇವರು ಹೋದಲೆಲ್ಲಾ ಅಭಿಮಾನಿಗಳ ದಂಡೇ ಕಾಣಿಸಿಕೊಳ್ಳುತ್ತೆ. 
ಇದೀಗ ನಟಿ ಅನುಷಾ ರೈ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಭೇಟಿ ನೀಡಿದ್ದಾರೆ.ಕಳೆದ ಒಂದು ತಿಂಗಳಿನಿಂದ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕುಂಭಮೇಳ ನಡೆಯುತ್ತಿದೆ. ಇದೀಗ ಕೊನೆಯ ಹಂತಕ್ಕೆ ಬಂದು ನಿಂತಿದೆ. ಇನ್ನು ಸ್ವಲ್ಪ ದಿನಗಳ ಕಾಲ ಮಾತ್ರ ಕುಂಭಮೇಳ ನಡೆಯಲಿದೆ. ಹಾಗಾಗಿ ದೇಶ, ವಿದೇಶದಿಂದ ತ್ರಿವೇಣಿ ಸಂಗಮದಲ್ಲಿ ಮಿಂದು ಪುನೀತರಾಗಲು ಜನ ಪ್ರಯಾಗ್ ರಾಜ್ ಗೆ ಆಗಮಿಸುತ್ತಿದ್ದಾರೆ. 
ಸೆಲೆಬ್ರಿಟಿಗಳು ಸಹ ಇದಕ್ಕೆ ಹೊರತಾಗಿಲ್ಲ. ಈ ಹಿಂದೆ ನಟಿ, ನಿರೂಪಕಿ ಅನುಶ್ರೀ, ರಾಜ್ ಬಿ ಶೆಟ್ಟಿ, ಕಿರಣ್ ರಾಜ್, ಶ್ರೀನಿಧಿ ಶೆಟ್ಟಿ, ಕಾರುಣ್ಯಾ ರಾಮ್, ಸೇರಿ ಕನ್ನಡದ ಹಲವು ನಟ ನಟಿಯರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದರು. ಇದೀಗ ನಟಿ ಅನುಷಾ ರೈ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪುಣ್ಯ ಸ್ನಾನ ಮಾಡಿದ್ದಾರೆ. ದೋಣಿಯಲ್ಲಿ ಕುಳಿತು ತ್ರೀವೇಣಿ ಸಂಗಮಕ್ಕೆ ತೆರಳಿ ನೀರಿನಲ್ಲಿ ಮುಳುಗಿ ಎದ್ದಿದ್ದಾರೆ. ಇದೊಂದು ಮಹಾ ಸಂಭ್ರಮ ಎಂದು ಸಹ ಹೇಳಿದ್ದಾರೆ.
 ನಟಿಯ ವಿಡಿಯೋ ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ನಮ್ಮ ಸಂಸ್ಕೃತಿ ಹೆಣ್ಣು ಅಂದ್ರೆ ಅನುಷಾ ಮೇಡಂ, ಓಂ ನಮ ಶಿವಾಯ, ಆ ದೇವರು ನಿಮಗೆ ಆರೋಗ್ಯ ಆಯಸ್ಸು ಕೊಟ್ಟು ಕಾಪಾಡಲಿ ಅಕ್ಕ, ಜೊತೆಗೆ ನಟಿ ಬರೆದಿರುವಂತಹ ಸಾಲುಗಳಿಗೂ ಮೆಚ್ಚುಗೆ ಸೂಚಿಸಿದ್ದಾರೆ. ಇನ್ನೂ, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರೋ ಮಹಾ ಕುಂಭಮೇಳ ಜನವರಿ 13ರಂದು ಆರಂಭಗೊಂಡಿತ್ತು. ಫೆಬ್ರವರಿ 3 ರಂದು ಕೊನೆಯ ಅಮೃತ ಸ್ನಾನ ನಡೆದಿತ್ತು. 
ಇದೀಗ ಮಹಾ ಕುಂಭಮೇಳದ ಕೊನೆಯ ಪುಣ್ಯ ಸ್ನಾನ ಫೆಬ್ರವರಿ 26ರಂದು ಮಹಾಶಿವರಾತ್ರಿಯಂದು ನಡೆಯಲಿದೆ. ಹೀಗಾಗಿ ಈಗಲೂ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಬಂದು ಪುಣ್ಯ ಸ್ನಾನ ಮಾಡಿ ಹೋಗುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.