ಟಿಕೆಟ್ ಕೊಡಲ್ಲ ಎಂದ ಬಿಜೆಪಿ ರಾಜಾಧ್ಯಕ್ಷ; ಯಡಿಯೂರಪ್ಪ ಮಗನ ಮಾತಿಗೆ ಕೋಪಗೊಂಡ ಸಿಂಹ

 | 
Hhh

ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪಿದೆ ಎಂಬ ವದಂತಿಗಳ ಬೆನ್ನಲ್ಲೇ ಅವರು ಆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಸದ್ಯ ಬಿಜೆಪಿ ವಲಯದಲ್ಲಿ ಚಾಲ್ತಿಯಲ್ಲಿರುವ ವದಂತಿಗೂ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಗಳಿಗೂ ವ್ಯತ್ಯಾಸವಿದೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗುವ ಬಗ್ಗೆ ಭರವಸೆ ಇದೆ. ಆದರೆ ಅಂತಿಮವಾಗಿ ಪಕ್ಷದ ಹೈಕಮಾಂಡ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಇಂದು ಪ್ರತಾಪ್ ಸಿಂಹ ಹೇಳಿದರು.ನಾನು ಮೊದಲನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗಲೂ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತಯಾಚನೆ ಮಾಡಿದ್ದೆ.

 ಎರಡನೇ ಬಾರಿ ಸ್ಪರ್ಧಿಸುವಾಗಲು ಮೋದಿ ಹೆಸರಿನಲ್ಲಿಯೇ ಸ್ಪರ್ಧಿಸಿದ್ದೆ. ಮೂರನೇ ಬಾರಿಯೂ ಮೋದಿ ಹೆಸರಿನಲ್ಲೇ ಚುನಾವಣೆ ಎದುರಿಸಿ ಜಯಗಳಿಸುತ್ತೇನೆ. ಪಕ್ಷದ ವಿಶ್ವಾಸ ನನ್ನ ಮೇಲಿದೆ. ನನಗೆ ಮತ್ತೆ ಅವಕಾಶ ಸಿಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.ನಾನು ಏನೆಂಬುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೊತ್ತಿದೆ. 

ಸೋಲುವ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ವಿಚಾರದಲ್ಲಿ ಹೊಡೆದಾಟ ನಡೆಯುತ್ತಿದೆ. ಬಿಜೆಪಿಯಲ್ಲಿ ಗೆಲುವಿನ ಪೈಪೋಟಿ ಇರಬಾರದು ಎಂದರೆ ಹೇಗೆ? ಗೆಲ್ಲುವ ಕುದುರೆ ಎಲ್ಲರೂ ಪ್ರಯತ್ನ ಮಾಡುತ್ತಿರುತ್ತಾರೆ. ಮೈಸೂರಿನಲ್ಲಿ ಬಿಜೆಪಿ ಗೆಲ್ಲುವಂತ ಪರಿಸ್ಥಿತಿಯನ್ನು ನಾನು ಸೃಷ್ಟಿ ಮಾಡಿದ್ದೇನೆ. ನನಗೆ ತಾಯಿ ಚಾಮುಂಡಿ, ಪ್ರಧಾನಿ ಮೋದಿ ಆಶೀರ್ವಾದವಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.