ಕೇಂದ್ರದ ಬಜೆಟ್ ನಲ್ಲಿ ಹೆಣ್ಣುಮಕ್ಕಳಿಗೆ ಬಂಪರ್ ಆಫರ್;

 | 
Je

ಎಲ್ಲರೂ ಕಾಯುತ್ತಿದ್ದ ಕಾದು ಕುಳಿತ್ತಿದ್ದ ಸಮಯ ಬಂದಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಮಂಡನೆ ವೇಳೆ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಮೂರನೇ ಬಾರಿಗೆ ಸಂಪುಟಕ್ಕೆ ಸೇರ್ಪಡೆಯಾಗಿರುವುದು ನನಗೆ ಹೆಮ್ಮೆ ತಂದಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಬಡವರಿಗೆ ಹೆಚ್ಚಿನ ಆದ್ಯತೆ ನೀಡಿ ಈ ಬಜೆಟ್ ಮಂಡಿಸುತ್ತಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಅಲ್ಲದೇ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಮಹಿಳೆಯರಿಗೆ ದೊಡ್ಡ ಸ್ಥಾನ ನೀಡಿದೆ. ನಿರ್ಮಲಾ ಸೀತಾರಾಮನ್ ಅವರು ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂಪಾಯಿ ಉದ್ಯೋಗ, ಶಿಕ್ಷಣಕ್ಕೆ 1.48 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಮಹಿಳೆಯರ ಕೌಶಲ್ಯಾಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ಮಹಿಳೆಯರಿಗೆ 3 ಲಕ್ಷ ಕೋಟಿ ರೂಪಾಯಿ, 20 ಲಕ್ಷ ಯುವಕ-ಯುವತಿಯರಿಗೆ ತರಬೇತಿ ನೀಡಲು ಉದ್ಯೋಗಿ ಮಹಿಳಾ ಹಾಸ್ಟೆಲ್‌ಗಳನ್ನು ಸ್ಥಾಪಿಸಿ ಹೊಸ ಕಾರ್ಯಕ್ರಮ ನೀಡಲಾಗುವುದು ಎಂದು ಭರವಸೆ ನೀಡಿದರು.

ಉಳಿದಂತೆ ಬಜೆಟ್-2024 ರಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವಲಯವನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಮುದ್ರಾ ಯೋಜನೆಯಡಿ ಸಾಲದ ಮಿತಿಯನ್ನು ಹೆಚ್ಚಿಸಿದೆ. ಪ್ರಸ್ತುತ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ 10 ರೂಪಾಯಿ ಲಕ್ಷದವರೆಗೆ ಸಾಲ ನೀಡಲಾಗುತ್ತದೆ.ಆದರೆ ಈಗ ಈ ಸಾಲದ ಮಿತಿಯನ್ನು 20 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. 

ಇದಂರಂತೆ ನೀವು 20 ಲಕ್ಷದವರೆಗೂ ಸಾಲ ಪಡೆಯಬಹುದು. ಯುವಕರನ್ನು ಉದ್ಯಮಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ 2015 ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿತು. ಇದು ಅಗತ್ಯ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.