ಡಿವೋರ್ಸ್ ಬೆನ್ನಲ್ಲೇ ಸಿಹಿಸುದ್ದಿ ಕೊಟ್ಟ ಚಂದನ್ ಶೆಟ್ಟಿ; ಮೌನವಾದ ನಿವೇದಿತಾ ಗೌಡ

 | 
Hi

ಸ್ಯಾಂಡಲ್ವುಡ್ ನಟ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ  ಜೂನ್ 7 ರಂದು ಡಿವೋರ್ಸ್ ಪಡೆದಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಇಬ್ಬರ ಡಿವೋರ್ಸ್ ಬಗ್ಗೆ ಹಲವು ವದಂತಿಗಳು ಹಬ್ಬಿತ್ತು. ಈ ಬೆನ್ನಲ್ಲೇ ಬೆಂಗಳೂರಿನ ರೆಸಾರ್ಟ್‌ನಲ್ಲಿ ಚಂದನ್ ಮತ್ತು ನಿವೇದಿತಾ ಸುದ್ದಿಗೋಷ್ಠಿ ನಡೆಸಲಾಯಿತು. ನಮ್ಮ ಇಬ್ಬರ ನಡುವೆ ಹೊಂದಾಣಿಕೆ ಇಲ್ಲದೇ ಡಿವೋರ್ಸ್  ಪಡೆದಿದ್ದೇವೆ ಎಂದು ಚಂದನ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

‌ಅದರ ಬೆನ್ನಲ್ಲೇ ಚಂದನ್ ಶೆಟ್ಟಿ ಅರುಣ್ ಅಮುಕ್ತ ನಿರ್ದೇಶನದ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೊ ಸಾಂಗ್ ಬಿಡುಗಡೆಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್  ಹಾಜರಿದ್ದರು.

ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ.

ವಿಜೇತ್ ಕೃಷ್ಣ, ಚಂದನ್ ಶೆಟ್ಟಿ ಮತ್ತು ಚೇತನ್ ಕುಮಾರ್ ದಶಕದ ಹಿಂದೆ ರೂಂ ಮೇಟ್ ಗಳಾಗಿದ್ದರಂತೆ. ಈ ಹಿಂದೆ ವಿಜೇತ್ ಮತ್ತು ಚಂದನ್ ಶೆಟ್ಟಿ ಸಮಾಗಮದಲ್ಲಿ ಒಂದೇ ಒಂದು ಪೆಗ್ಗಿಗೆ ಎಂಬ ಹಾಡು ಬಂದಿತ್ತು. ಅದು ಸೂಪರ್ ಹಿಟ್ ಆಗಿತ್ತು. ಈ ಹಾಡೂ ಅದೇ ರೀತಿ ಹಿಟ್ಟಾಗಲೆಂಬ ಆಶಯವನ್ನ ಚಂದನ್ ಶೆಟ್ಟಿ ವ್ಯಕ್ತ ಪಡಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.