ಕಾರು ಅಡ್ದ ಹಾಕಿ ನ ಟ ಚೇತನ್ ಗೆ ಹಿಗ್ಗಾಮುಗ್ಗಾ ಥಳಿತ

ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಹಾಗೂ ಧಾರವಾಹಿಗಳ ಮೂಲಕ ಮನೆಮಾತಾದ ನಟ ಚೇತನ್ ಚಂದ್ರ. ಹೌದು ನಟ ಚೇತನ್ ಚಂದ್ರ ಮೇಲೆ ಕಿಡಿಗೇಡಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ತಾಯಂದಿರ ದಿನದ ದಿನವೇ ಜನರ ಗುಂಪೊಂದು ಏಕಾಏಕಿ ದಾಳಿ ನಡೆಸಿದ್ದು, ಮುಖ ಕಿತ್ತು ರಕ್ತ ಬರುವ ಹಾಗೆ ಹಲ್ಲೆ ಮಾಡಿದ್ದಾರೆ.
ಅಷ್ಟಕ್ಕೂ ತಾಯಂದಿರ ದಿನದ ಹಿನ್ನೆಲೆಯಲ್ಲಿ ನಟ ಚೇತನ್ ಚಂದ್ರ ತಾಯಿಯನ್ನು ಹೊರಗಡೆ ಕರೆದುಕೊಂಡು ಹೋಗಿ ಬಳಿಕ ದೇವಾಸ್ಥಾನಕ್ಕೆ ತೆರಳಿ ಮರಳುವ ವೇಳೆ ಕಗ್ಗಲಿಪುರ ಸಮೀಪಲ್ಲಿ ಗಾಡಿ ವಿಚಾರಕ್ಕೆ ಗಲಾಟೆ ತೆಗೆದು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಘಟನೆಯ ವಿವರವನ್ನು ನಟ ಚೇತನ್ ಚಂದ್ರ ಇನ್ಸ್ಟಾಗ್ರಾಮ್ ಲೈವ್ನಲ್ಲಿ ಹಂಚಿಕೊಂಡಿದ್ದಾರೆ.
ಕಗ್ಗಲಿಪುರದ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ ವೇಳೆ ತಾವಿರುವ ಪರಿಸ್ಥಿತಿಯಲ್ಲೇ ವಿಡಿಯೋ ಮಾಡಿರುವ ಚೇತನ್ ಚಂದ್ರ, ಈ ವಿಡಿಯೋವನ್ನು ನನ್ನ ಪತ್ನಿ, ಮಗು, ಹೆತ್ತವರು ನೋಡುತ್ತಿರುತ್ತಾರೆ. ಸದ್ಯ ನಾನು ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ. ವಿಡಿಯೋದಲ್ಲಿ ಚೇತನ್ ಚಂದ್ರ ಅವರ ಮುಖವೆಲ್ಲಾ ರಕ್ತವಾಗಿದ್ದು, ಧರಿಸಿದ್ದ ಬಟ್ಟೆ ಕೂಡ ರಕ್ತವಾಗಿದೆ.
ಇಂದು ಒಂದು ಕೆಟ್ಟ ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡೆ. ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ವಾಪಸ್ ಬರುವಾಗ, ಬೇಕಂತಲೇ ನನ್ನ ಗಾಡಿ ಅಡ್ಡ ಹಾಕಿ ಹೊಡೆದರು. ಚೆನ್ನಾಗಿ ಕುಡಿದು ನನ್ನ ಗಾಡಿ ಅಡ್ಡ ಹಾಕಿದ್ದಾರೆ. ಏನಿಲ್ಲ ಅಂದರೂ 20 ಜನರು ಸೇರಿಕೊಂಡು ನನಗೆ ಹೊಡೆದಿದ್ದಾರೆ. ಅದರ ವಿಡಿಯೋ ಇದೆ. ಸದ್ಯ ಕಗ್ಗಲಿಪುರ ಪೊಲೀಸ್ ಠಾಣೆ ಪಕ್ಕದಲ್ಲಿ ಪ್ರಥಮ ಚಿಕಿತ್ಸೆ ಪಡೆಯಲು ಬಂದಿದ್ದೇನೆ.
ಈಗ ಮತ್ತೆ ಬಂದು ಕಾರು ಒಡೆದು ಹಾಕಿದ್ದಾರೆ. ತುಂಬ ಕೆಟ್ಟ ಜನರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನನಗೆ ನ್ಯಾಯ ಬೇಕು ಎಂದು ನಟ ಚೇತನ್ ಚಂದ್ರ ಆಗ್ರಹಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.