ಕೊರೋನಾ ಮತ್ತಷ್ಟು ಹೆಚ್ಚಾದರೆ ಲಾಕ್ ಡೌನ್ ಪಕ್ಕಾ, ಬೆಂಗಳೂರಲ್ಲಿ 3 ಜನರನ್ನು ಬ.ಲಿ ಪಡೆದ ವೈರಸ್
ಕೊರೊನಾವೈರಸ್‌ನ ಮೂರು ಅಲೆಗಳಿಂದ ಜಗತ್ತು ಈಗಷ್ಟೇ ಚೇತರಿಸಿಕೊಂಡಿದೆ. ಆದರೆ ಈಗ ಮತ್ತೊಮ್ಮೆ ಕರೋನದ ಹೊಸ ಉಪ ರೂಪಾಂತರವು ಜನರಲ್ಲಿ ಆತಂಕ ಉಂಟು ಮಾಡಿದೆ. ಕರೋನಾದ ಹೊಸ JN.1 ರೂಪಾಂತರವು 41 ದೇಶಗಳಿಗೆ ಹರಡಿದೆ. ಈಗ ಅದರ ಪ್ರಕರಣಗಳು ಭಾರತದ ಹಲವು ರಾಜ್ಯಗಳಲ್ಲಿಯೂ ಕಾಣಿಸಿಕೊಂಡಿದೆ. ದೇಶದಲ್ಲಿ ಇದುವರೆಗೆ 2300 ಕ್ಕೂ ಹೆಚ್ಚು ಸಕ್ರಿಯ ಕರೋನಾ ಪ್ರಕರಣಗಳಿವೆ.
ಕೇರಳದಲ್ಲಿ ಸಾಲು ಸಾಲು ಹೊಸ ಕೋವಿಡ್ ಪ್ರಕರಣ ದಾಖಲಾಗುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಆತಂಕ ಹೆಚ್ಚಾಗುತ್ತಿದೆ. ಕಳೆದ 20 ದಿನದಲ್ಲಿ ಬೆಂಗಳೂರಿನಲ್ಲಿ 17 ಹೊಸ ಕೊರೋನಾ ಸೋಂಕು ಪತ್ತೆಯಾಗಿದೆ. ಬಿಬಿಎಂಪಿಯ ಎಂಟು ವಲಯಗಳಲ್ಲಿ ಹೊಸ ಕೊರೋನಾ ಸೋಂಕು ಕಾಣಿಸಿಕೊಂಡಿದೆ.3 ಸಾವು ಸಂಭವಿಸಿದೆ.
ರಾಷ್ಟ್ರದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಧರಿಸಲು ವೈದ್ಯರು ಸಲಹೆ ನೀಡಿದ್ದಾರೆ. ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಕೊರೊನಾ ಏರಿಕೆ ಆಗುತ್ತಿದೆ. ಈ ಮಧ್ಯೆ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗಳು ಎದುರಾಗಿವೆ. ಕೋವಿಡ್ ಇಲ್ಲದೇ ನಿಶ್ಚಿಂತೆಯಿಂದ ಇದ್ದ ಜನರು ಇದೀಗ ಒಮ್ಮೆಲೆ ಮಾರ್ಗಸೂಚಿಗಳನ್ನು ಅನುಸರಿಸುತ್ತಾರಾ? ಎಂಬುದನ್ನು ಕಾದು ನೋಡಬೇಕಿದೆ. ಆರೋಗ್ಯ ದೃಷ್ಟಿಯಿಂದ ಸರ್ಕಾರ ಸೂಚನೆ ಪಾಲಿಸಬೇಕಿದೆ.
ಆದರೆ ಹಲವು ಕೋವಿಡ್ ಅಲೆ ನೋಡಿರುವ ಜನರು ಹೊಸ ತಳಿ ಏನು ಮಾಡೀತು ಎಂಬ ನಿರ್ಲಕ್ಷ್ಯ ತೋರಿದ್ದೇ ಆದಲ್ಲಿ ಜನವರಿ ಮೊದಲ ವಾರದಲ್ಲಿ ಕೊರೊನಾ ತೀವ್ರಗತಿಯಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ. ಎನ್ನಲಾಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.