ಮೈಸೂರಿನ MP ಎಲೆಕ್ಷನಲ್ಲಿ ಡಾಲಿ ಧನಂಜಯ್ ಅಬ್ಬರ ಶುರು, ಎದ್ದು ಬಿದ್ದು ರೊ ಚ್ಚಿಗೆದ್ದ ರಂಗಣ್ಣ

 | 
ೂ

ವಿಧಾನಸಭಾ ಚುಣಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಕಾಂಗ್ರೆಸ್‌ ಗೆ ಲೋಕಸಭಾ ಚುನಾವಣೆಯಲ್ಲಿ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಕಾಂಗ್ರೆಸ್‌ ಮುಂದಿನ ಲೋಕಸಭಾ ಚುಣಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ‌ ದೊಡ್ಡದೊಂದು ಸಂಚಲನ ಸೃಷ್ಟಿ ಮಾಡಲು ಕಾಂಗ್ರೆಸ್‌ ಕಾರ್ಯತಂತ್ರ ಸಿದ್ಧವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ಕ್ಷೇತ್ರವಾಗಿರುವ ಮೈಸೂರು ಕ್ಷೇತ್ರವನ್ನು ಗೆಲ್ಲಲು ಒಂದು ರಣತಂತ್ರವನ್ನು ಚರ್ಚಿಸಲಾಗುತ್ತಿದೆ. ಅದೇನೆಂದರೆ, ಇಲ್ಲಿ ಖ್ಯಾತ ಚಿತ್ರ ನಟ ʻಬಡವರ ಮಕ್ಕಳು ಬೆಳೀಬೇಕುʼ ಖ್ಯಾತಿಯ ನಟ ರಾಕ್ಷಸ ಡಾಲಿ ಧನಂಜಯ ಅವರನ್ನು ಕಣಕ್ಕಿಳಿಸಲು ಪ್ಲ್ಯಾನ್‌ ನಡೆದಿದೆ ಎಂದು ಕೇಳಿ ಬಂದಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಾಗಿರುವವರು ಪ್ರತಾಪ್‌ ಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೇರವಾದ ಠಕ್ಕರ್‌ ಕೊಡುತ್ತಿದ್ದಾರೆ. ಒಂದು ಹಂತದಲ್ಲಿ ಪ್ರತಾಪ್‌ ಸಿಂಹ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಅವರೇ ಕಣಕ್ಕಿಳಿಯುತ್ತಾರೆ ಎಂಬ ಚರ್ಚೆ ನಡೆದಿತ್ತು. ಪುತ್ರನನ್ನ ಲೋಕಸಭಾ ಕಣಕ್ಕಿಳಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲೆ ಶಾಸಕರು, ಸಚಿವರು ಹಾಗೂ ಮುಖಂಡರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದರು. 

ಆದರೆ, ಸಭೆಯಲ್ಲಿ ಒಮ್ಮತ್ತದ ಅಭಿಪ್ರಾಯ ಕೇಳಿ ಬರದ ಹಿನ್ನೆಲೆ ಡಾಲಿ ಧನಂಜಯ ಅವರ ಹೆಸರು ಕೇಳಿ ಬಂದಿದೆ..
ಒಂದು ವೇಳೆ ಡಾಲಿ ಧನಂಜಯ ಅವರು ಮೈಸೂರು ಕ್ಷೇತ್ರದಲ್ಲಿ ಕಣಕ್ಕಿಳಿದರೆ ದೊಡ್ಡ ಮಟ್ಟದ ಸಂಚಲನವಂತೂ ಕ್ರಿಯೇಟ್ ಆಗಲಿದೆ. ಸಿದ್ದರಾಮಯ್ಯ ಜತೆ ಆಪ್ತ ಒಡನಾಟ ಹೊಂದಿರುವ ಡಾಲಿ ಅವರು ಜನಪ್ರಿಯ ನಟ ಆಗಿರುವ ಕಾರಣಕ್ಕೆ ಪ್ರಚಾರ ನಿರಾಯಾಸವಾಗಿ ನಡೆಯುತ್ತದೆ. ಇನ್ನು ಈ ಕುರಿತು ರಂಗಣ್ಣ ಅವರನ್ನು ಸಿನೆಮಾ ಮಾಡಲು ಬಿಡಿ ಪೊಳ್ಳು ಭರವಸೆ ನೀಡಿ ಹಾಳುಮಾಡಬೇಡಿ ಅಂದಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.