ಸಂಕ್ರಾಂತಿ ಹಬ್ಬದಂದು ಪುನೀತ್ ರಾಜ್‍ಕುಮಾರ್ ಮನೆಗೆ ಭೇಟಿ ಕೊಟ್ಟ ದರ್ಶನ್ ಹಾಗೂ ವಿಜಯಲಕ್ಷ್ಮಿ, ಸಿಹಿ ತಿಂಡಿ ಮಾಡಿದ ಅಶ್ವಿನಿ ಮೇಡಂ

 | 
Hd

ಸಂಕ್ರಾಂತಿ ಹಬ್ಬವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೋರಾಗಿ ಆಚರಣೆ ಮಾಡುತ್ತಾರೆ. ಮೊದಲಿನಿಂದಲೂ ಮೈಸೂರಿನ ಸಮೀಪವಿರುವ ತಮ್ಮ ತೋಟದಲ್ಲಿ ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಕೂಡ ದರ್ಶನ್ ತಮ್ಮ ತೋಟದಲ್ಲಿ ಬೀಡುಬಿಟ್ಟಿದ್ದಾರೆ.

ಕಾಟೇರ ಸಿನಿಮಾದ ಭರ್ಜರಿ ಯಶಸ್ಸನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂಕ್ರಾಂತಿ ಹಬ್ಬದ ಜೊತೆಯಲ್ಲಿ ಸಂಭ್ರಮಿಸುತ್ತಿದ್ದಾರೆ. ಕಮರ್ಷಿಯಲ್ ಎಲಿಮೆಂಟ್ಸ್‌ ಅನ್ನು ಪಕ್ಕಕ್ಕೆ ಇಟ್ಟು ತಮ್ಮ ಪಾತ್ರದ ಮೂಲಕವೇ ಪ್ರಯೋಗ ಮಾಡಲು ಮುಂದಾಗಿದ್ದರು. ಈ ವಿಭಿನ್ನ ಪ್ರಯತ್ನ ದರ್ಶನ್ ಕೈ ಹಿಡಿದಿದೆ. ಪ್ರೇಕ್ಷಕರು ಕಾಟೇರ ಸಿನಿಮಾ ಮೆಚ್ಚಿ ಕೊಂಡಾಡಿದ್ದಾರೆ.

ಈಗ ಕಾಟೇರ ಯಶಸ್ಸನ್ನು ಸಂಕ್ರಾಂತಿ ಹಬ್ಬದೊಂದಿಗೆ ಆಚರಣೆ ಮಾಡುತ್ತಿದ್ದಾರೆ. ಈ ಬಾರಿ ವಿಶೇಷ ಅಂದರೆ, ಡಾ.ಪಾರ್ವತಮ್ಮ ರಾಜ್‌ಕುಮಾರ್ ಸಹೋದರನ ಪುತ್ರ ಧ್ರುವನ್ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಸ್ವತ: ದರ್ಶನ್ ಅವರೇ ತಮ್ಮ ಫಾರ್ಮ್ ಹೌಸ್‌ನಲ್ಲಿರುವ ಎತ್ತುಗಳೊಂದಿಗೆ ಧ್ರುವನ್ ಜೊತೆ ತೆಗೆಸಿಕೊಂಡ ಫೋಟೊಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಿದ್ದಾರೆ.

ಅಪ್ಪುಹಾಗೂ ತಮ್ಮ ಆಭಿಮಾನಿಗಳಿಗೆ ನಮ್ಮ ವಿರುದ್ದ ಕಿಡಿ ಕಾರುತ್ತ ನಿಮ್ಮ ಸಮಯ ಹಾಗೂ ನಿಮ್ಮ ಮನಸ್ಥಿತಿ ಹಾಳುಮಾಡಿಕೊಳ್ಳಬೇಡಿ  ನಾವೆಲ್ಲರೂ ಒಂದೇ ಎಂದಿದ್ದಾರೆ. ಇದರೊಂದಿಗೆ ತಮ್ಮ ಅಭಿಮಾನಿಗಳಿಗೆ ಹಾಗೂ ಸಮಸ್ತ ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ ಎಂದು ಹಾರೈಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.