ಮುದ್ದಿನ ಮಡದಿಯ ಬರ್ತಡೆ ಆಚರಿಸಿದ ದರ್ಶನ್, ಅಪ್ಪ ಬದಲಾಗಿದ್ದಾರೆ ಎಂದ ಮಗ ವಿನೀಶ್
Feb 5, 2025, 13:11 IST
|

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಪಾಲಾದ ದಿನದಿಂದಲೂ ಪತಿ ಪರವಾಗಿ ನಿಂತವರು ವಿಜಯಲಕ್ಷ್ಮಿ. ದರ್ಶನ್ ಅವರನ್ನ ಜೈಲಿನಿಂದ ಹೊರಗೆ ತರಲೇಬೇಕು ಎಂದು ಪಣ ತೊಟ್ಟ ವಿಜಯಲಕ್ಷ್ಮಿ ಕಾನೂನು ಹೋರಾಟ ಹಾಗೂ ಗಂಡನಿಗಾಗಿ ದೇವರ ಮೊರೆ ಹೋಗಿದ್ರು. ಕೊನೆಗೂ ದರ್ಶನ್ ಅವನ್ನ ಅವರನ್ನ ಜೈಲಿನಿಂದ ಬೇಲ್ ಮೇಲೆ ಕರೆತಂದಿದ್ದು, ಇದೀಗ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ನಟ ದರ್ಶನ್, ನಟಿ ಪವಿತ್ರಾಗೌಡ ಸೇರಿದಂತೆ ಹಲವು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕೊಲೆ ಕೇಸ್ ಆರೋಪಿಯಾಗಿರುವ ನಟ ದರ್ಶನ್ ಬಿಡುಗಡೆ ಬಳಿಕ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಪೋಸ್ಟ್ ಹಾಕಿಕೊಂಡಿದ್ದಾರೆ. ಕಳೆದ ನವೆಂಬರ್ 11 ರಂದು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಜನ್ಮದಿನವಿತ್ತು. ಆದರೆ, ನಟ ದರ್ಶನ್ ಜೈಲಿನಲ್ಲಿದ್ದ ಕಾರಣ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ.
ಇದೀಗ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿರುವ ದರ್ಶನ್ ಪತ್ನಿ ವಿಜಯಲಕ್ಷ್ಮಿ, ರೆಡ್ ಡ್ರೆಸ್‌ನಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ವಿಭಿನ್ನ ಫೋಟೋಸ್‌ಗಳನ್ನು ಹಂಚಿಕೊಂಡಿದ್ದಾರೆ. ಹುಟ್ಟುಹಬ್ಬದ ಕೇಕ್ ಕತ್ತರಿಸಿ ಖುಷಿಯಿಂದ ಹಲವು ಪೋಟೋಗಳನ್ನ ಪೋಸ್ಟ್ ಮಾಡಿದ್ದಾರೆ. ಇನ್ನೂ ಬರ್ತಡೆ ಕುರಿತು ಹಂಚಿಕೊಂಡಿರುವ ಫೋಟೋಗೆ ತಡವಾಗಿಯಾದರೂ ಈ ಸಂಭ್ರಮ ಖುಷಿಯಾಗಿದೆ ಎಂದು ಬರೆದುಕೊಂಡಿದ್ದಾರೆ .
ನೆಟ್ಟಿಗರು ಅತ್ತಿಗೆ, ಹ್ಯಾಪಿ ಬರ್ತ್ಡೇ ಎಂದು ಕಾಮೆಂಟ್ ಮಾಡಿದ್ದಾರೆ.ಸದ್ಯ ದರ್ಶನ್ ಜೊತೆ ಕಾಲ ಕಳೆಯುತ್ತಿರುವ ವಿಜಯಲಕ್ಷ್ಮಿ, ದರ್ಶನ್ ಜೊತೆ ಪ್ರತಿ ಕ್ಷಣ ಎಂಜಾಯ್ ಮಾಡ್ತಿರುವಂತಿದೆ. ಇತ್ತೀಚೆಗೆ ಖುಷಿಯ ಇನ್‌ಸ್ಟಾಗ್ರಾಂ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.