ಮಗನ ವಯಸ್ಸಿನ ಹುಡುಗಿ ಜೊತೆ ದರ್ಶನ್ ಡ್ಯಾನ್ಸ್, ಕಣ್ಣು ‌ಬಿಟ್ಟು ನೋಡಿ ಫ್ಯಾನ್ಸ್

 | 
ರ್ರರಾ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಟೇರ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಅದರ ಜೊತೆಗೆ ಸ್ನೇಹಿತರ ಜೊತೆ ಸುತ್ತಾಟ, ಖಾಸಗಿ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು ಇತ್ತೀಚೆಗೆ ಹುಲಿ ಉಗುರು ಪ್ರಕರಣ ಹಾಗೂ ಮಹಿಳೆಯೊಬ್ಬರಿಗೆ ತಮ್ಮ ಮನೆಯ ನಾಯಿ ಕಚ್ಚಿದ ವಿಚಾರದಿಂದಲೂ ಸುದ್ದಿಯಾಗಿದ್ದರು.

ಅಭಿಮಾನಿಗಳು ಕಾಟೇರ ಅಪ್‌ಡೇಟ್‌ಗಾಗಿ ಕಾಯುತ್ತಿದ್ದಾರೆ. ಚಿತ್ರತಂಡ ಇನ್ನುಳಿದ ಹಾಡುಗಳ ಚಿತ್ರೀಕರಣ ಮುಗಿಸಿ ಆದಷ್ಟು ಬೇಗ ಸಿನಿಮಾ ರಿಲೀಸ್ ಮಾಡುವ ಪ್ರಯತ್ನದಲ್ಲಿದೆ. ಮುಂದಿನ ವರ್ಷವೇ ಸಿನಿಮಾ ತೆರೆಗೆ ಬರುವುದು ಬಹುತೇಕ ಖಚಿತವಾಗಿದೆ. ಶೀಘ್ರದಲ್ಲೇ ಟೀಸರ್ ಅಥವಾ ಹಾಡು ರಿಲೀಸ್ ಆಗುವ ಸಾಧ್ಯತೆಯಿದೆ. 

ಅದಕ್ಕೂ ಮುನ್ನ ದರ್ಶನ್ ಅತಿಥಿ ಪಾತ್ರದಲ್ಲಿ ನಟಿಸಿರುವ ಗರಡಿ ಸಿನಿಮಾ ರಿಲೀಸ್ ಆಗಲಿದೆ. ಈ ವಾರ ಬಹಳ ಅದ್ಧೂರಿಯಾಗಿ ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾ ತೆರೆಗೆ ಬರಲಿದೆ. ಸದ್ಯ ನಟಿ ಪವಿತ್ರಾ ಗೌಡ ಮಗಳ ಬರ್ತ್‌ಡೇ ಸಂಭ್ರಮದಲ್ಲಿ ದರ್ಶನ್ ಭಾಗಿ ಆಗಿರುವ ವಿಡಿಯೋ ವೈರಲ್ ಆಗುತ್ತಿದೆ. ಮಗಳು ಖುಷಿ ಹುಟ್ಟುಹಬ್ಬ ಆಚರಣೆಯ ವಿಡಿಯೋವನ್ನು ಸ್ವತಃ ನಟಿ ಪವಿತ್ರಾ ಗೌಡ ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. 

ದರ್ಶನ್ ಅಭಿಮಾನಿಗಳು ಕೂಡ ಈ ವಿಡಿಯೋ, ಫೋಟೊಗಳನ್ನು ನೋಡಿ ಖುಷಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಖುಷಿ ಹುಟ್ಟುಹಬ್ಬ ಆಚರಣೆಯಲ್ಲಿ ನಟ ದರ್ಶನ್ ಭಾಗಿ ಆಗಿದ್ದಾರೆ. ಕೇಕ್ ಕತ್ತರಿಸಿ ಸಿಹಿ ತಿನ್ನಿಸಿ ಶುಭ ಕೋರಿದ್ದಾರೆ. ಖುಷಿ ಜೊತೆ ಡ್ಯಾನ್ಸ್ ಮಾಡಿ ಎಂಜಾಯ್ ಮಾಡಿದ್ದಾರೆ. ಆ ಸುಂದರ ಕ್ಷಣಗಳ ವಿಡಿಯೋ ವೈರಲ್ ಆಗುತ್ತಿದೆ. ಅಗಮ್ಯಾ, ಛತ್ರಿಗಳು ಸಾರ್ ಛತ್ರಿಗಳು, ಸಾಗುವ ದಾರಿ, ಪ್ರೀತಿ ಕಿತಾಬು ಸೇರಿದಂತೆ ಕೆಲ ಸಿನಿಮಾಗಳಲ್ಲಿ ಪವಿತ್ರಾ ಗೌಡ ನಟಿಸಿದ್ದರು. 

ಈ ಹಿಂದೆ ದರ್ಶನ್ ನಟನೆಯ ಸಿನಿಮಾ ಸೆಟ್‌ಗಳಲ್ಲೂ ಆಕೆ ಕಾಣಿಸಿಕೊಂಡಿದ್ದರು. ಈ ಹಿಂದೆಯೇ ಪವಿತ್ರ ಗೌಡ ಅವರು ತಮ್ಮ ಫೇಸ್​​ಬುಕ್​​ ಅಕೌಂಟ್​​ನಲ್ಲಿ ದರ್ಶನ್ ಜೊತೆಗಿರುವ ಫೋಟೊವನ್ನು ಕವರ್ ಪೇಜ್​ನಲ್ಲಿ ಹಾಕಿಕೊಂಡಿದ್ದರು. ಈ ಫೋಟೋ ವೈರಲ್​ ಕೂಡ ಆಗಿತ್ತು. ಜತೆಗೆ ದರ್ಶನ್​​, ನಟಿ ಪವಿತ್ರಾ ಗೌಡ ಕುರಿತು ಹಲವು ಸುದ್ದಿಗಳು ಹರಿದಾಡಿದ್ದವು. ಆದರೆ ಡಿ ಬಾಸ್ ಆಗಲಿ ಅವರ ಅಭಿಮಾನಿ ಬಳಗವಾಗಲಿ ಈ ಬಗ್ಗೆ ಹೆಚ್ಚಾಗಿ ತಲೆ ಕೆಡಿಸಿಕೊಂಡಿಲ್ಲ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.