ಹೆಂಡತಿಯ ಕೈಹಿಡಿದು ಮತ ಹಾಕಲು ಬಂದ ದರ್ಶನ್; ಗಂಡ ಹೆಂಡತಿ ಪ್ರೀತಿ ಕಂಡು ಮೆಚ್ಚಿಕೊಂಡ ಕರುನಾಡಿ
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯಾಗಿದ್ದು ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ.ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ಬಿರುಸಿನಿಂದ ಸಾಗಿದೆ.
ಇನ್ನು ಡೆವಿಲ್ ಸಿನಿಮಾದ ಚಿತ್ರೀಕರಣ ವೇಳೆ ಕೈಗೆ ಏಟು ಮಾಡಿಕೊಂಡು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ದರ್ಶನ್ ಇದೀಗ ಪತ್ನಿ ವಿಜಯಲಕ್ಷ್ಮಿ ಸಮೇತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಸರತಿಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ ದರ್ಶನ್ ಮತ್ತು ವಿಜಯಲಕ್ಷ್ಮಿ.
ಕನ್ನಡದ ಹೆಸರಾಂತ ನಟಿ ರಚಿತಾ ರಾಮ್ ಕತ್ರಿಗುಪ್ಪೆಯಲ್ಲಿ ಮತದಾನ ಮಾಡಿದರು. ಸಾಮಾನ್ಯರಂತೆ ಅರ್ಧ ಗಂಟೆಗೂ ಹೆಚ್ಚು ಕಾಲ ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಅಭಿಮಾನಿಗಳು ರಚಿತಾ ಅವರ ಜೊತೆ ಸೆಲ್ಫಿ ತೆಗೆಸಿಕೊಂಡು ಸಂಭ್ರಮಸಿದರು. ಮತದಾನದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ರಚಿತಾ ರಾಮ್ ಯುವಕರಿಗೆ ಸಲಹೆ ನೀಡಿದ್ದಾರೆ.
ಮನೆಯಲ್ಲಿ ಕೂತು ಕಾಮೆಂಟ್ ಮಾಡೋದಕ್ಕಿಂದ ಬಂದು ವೋಟ್ ಮಾಡಿ. ವೋಟ್ ಮಾಡದೇ ಬ್ಲೇಮ್ ಮಾಡಬೇಡಿ, ನಮ್ಮ ನಾಯಕರ ಆಯ್ಕೆ ಮಾಡಲೇಬೇಕು. ಬಿಸಿಲು ಅಂತ ಮನೆಯಲ್ಲಿ ಕೂರಬೇಡಿ, ಸಂಜೆವರೆಗೂ ಟೈಂ ಇದೆ ಬಂದು ವೋಟ್ ಮಾಡಿ. ಹಿರಿಯನಾಗರೀಕರೆ ಉತ್ಸಾಹದಿಂದ ವೋಟ್ ಮಾಡುವಾಗ ಯುವಕರು ಯಾಕೆ ಮನೆಯಲ್ಲಿ ಕೂರಬೇಕು’ ಎಂದು ಅವರು ಪ್ರಶ್ನೆ ಮಾಡಿದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.