'ದರ್ಶನ್ ಅಭಿಮಾನಿಗಳ ಹುಚ್ಚಾಟ; ಅಶ್ವಿನಿ ಮೇಡಂ ಮುಂದೆ ಕೈಮುಗಿದ ಯಜಮಾನ

 | 
Hu

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಪತ್ನಿ, ನಿರ್ಮಾಪಕಿ ಅಶ್ವಿನಿ ಅವರ ಬಗ್ಗೆ ಕೀಳು ಮಟ್ಟದ ಪೋಸ್ಟ್ ಹಂಚಿಕೊಂಡಿರುವ ಕಿಡಿಗೇಡಿ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದರ್ಶನ್ ಮತ್ತು ಸುದೀಪ್ ಅಭಿಮಾನಿಯ ಹೆಸರಿನಲ್ಲಿ ಈ ಪೋಸ್ಟ್ ಹಂಚಿಕೊಳ್ಳಲಾಗಿತ್ತು. ಇದರ ನಡುವೆಯೇ ಚಾಲೆಂಜಿಂಗ್ ಸ್ಟಾರ್ ದರ್ಶನ್, 9 ವರ್ಷಗಳ ಹಿಂದೆ ಹಂಚಿಕೊಂಡಿದ್ದ ಪೋಸ್ಟ್ ವೈರಲ್ ಆಗಿದೆ. 

ಸ್ಟಾರ್ ನಟರ ಅಭಿಮಾನಿಗಳ ಕಿತ್ತಾಟ ಇಂದು ನಿನ್ನೆಯದಲ್ಲ. ಅನಾದಿ ಕಾಲದಿಂದಲೂ ನಟರ ಅಭಿಮಾನಿಗಳು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳುತ್ತಲೇ ಬಂದಿದ್ದಾರೆ. ಆದರೆ ಈಚೆಗೆ ಅದರ ವ್ಯಾಪ್ತಿ ದೊಡ್ಡದಾಗಿದೆ. ಕಾರಣ, ಸೋಶಿಯಲ್ ಮೀಡಿಯಾ! ಹೌದು, ಈಚೆಗೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಬಗ್ಗೆ ಅವಾಚ್ಯ ಪದ ಬಳಸಿ ಕಿಡಿಗೇಡಿಯೊಬ್ಬ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾನೆ.

ಆರ್‌ಸಿಬಿ ಸೋಲಿಗೆ ಅಶ್ವಿನಿ ಕಾರಣ ಎನ್ನುವ ಕೀಳು ಅಭಿರುಚಿಯ ಪೋಸ್ಟ್ ಹಂಚಿಕೊಂಡಿರುವುದು ದರ್ಶನ್ ಅಭಿಮಾನಿಗಳು ಎಂದು ಹೇಳಲಾಗುತ್ತಿದೆ. ಆದರೆ ಈ ಒಂದೇ ಪೋಸ್ಟ್ ದರ್ಶನ್ ಮತ್ತು ಸುದೀಪ್ ಅಭಿಮಾನಿಗಳ ಹೆಸರಿನಲ್ಲಿ ವೈರಲ್ ಆಗುತ್ತಿದೆ. ಹಾಗಾಗಿ, ಈ ಪೋಸ್ಟ್‌ ಹಿಂದಿನ ಅಸಲಿಯತ್ತು ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಸ್ಟಾರ್ ನಟರ ಅಭಿಮಾನಿಗಳ ಹೆಸರಿನಲ್ಲಿ ನಡೆಯುವ ಇಂತಹ ಅತಿರೇಕಗಳ ಬಗ್ಗೆ ನಟ ದರ್ಶನ್ ಅವರು 9 ವರ್ಷಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. ಈ ಕುರಿತು ಪೋಸ್ಟ್ ಹಂಚಿಕೊಂಡಿದ್ದ ನಟ ದರ್ಶನ್ ಅವರು,ನನ್ನ ಪ್ರೀತಿಯ ಅಭಿಮಾನಿಗಳಲ್ಲಿ ವಿನಂತಿ. ಫೇಸ್‌ಬುಕ್, ಟ್ವಿಟರ್‌ಗಳಲ್ಲಿ ಬೇರೆ ಸಹನಟರನ್ನು ನಿಂದಿಸಿ ಮಾತನಾಡುವುದು, ಇವು ಯಾವುದು ಒಳಿತಲ್ಲ. ನನ್ನ ನಿಜವಾದ ಅಭಿಮಾನಗಳಾಗಿದ್ದಲ್ಲಿ ಅದನ್ನು ನಿಲ್ಲಿಸಬೇಕು ಎಂದು ತಾಕೀತು ನೀಡಿದ್ದರು. ಇದೀಗ ಈ ಘಟನೆಗೆ ಕ್ಷಮೆ ಕೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.