ದರ್ಶನ್ ಜೊತೆ ಪತ್ನಿ ವಿಜಯಲಕ್ಷ್ಮಿ ಫಾರಿನ್ ಟ್ರಿಪ್, ಪವಿತ್ರ ಗೌಡ ಕ ಣ್ಣೀರು
Jun 1, 2025, 10:27 IST
|

ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿರುವ ಪವಿತ್ರಾ ಗೌಡ, ಟೆಂಪಲ್ ರನ್ ನಲ್ಲಿ ಬ್ಯೂಸಿಯಾಗಿದ್ದಾರೆ. ನಟಿ, ಮಾಡೆಲ್ ಆಗಿರುವ ಪವಿತ್ರಾ ಗೌಡ ಮಗಳ ಜೊತೆಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಹಾಗೆಂದ ಮಾತ್ರಕ್ಕೇ ಎಲ್ಲಾ ಬಿಟ್ಟ ಸನ್ಯಾಸಿ ಇವರಲ್ಲವೇ ಅಲ್ಲ. ಅಷ್ಟಕ್ಕೂ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಮದುವೆಯ ವಾರ್ಷಿಕೋತ್ಸವ ವಿಶೇಷವಾಗಿ ಆಚರಿಸಿದ ಬೆನ್ನಲ್ಲೇ ಕಣ್ಣೀರು ಹಾಕಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 22 ವರ್ಷ ತುಂಬಿದೆ. ಈ ಸಂಬಂಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಪತಿಯ ಜೊತೆಗೆ ನಿಂತುಕೊಂಡಿರೋ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ಶಾಶ್ವತ ಅಂತ ಬರೆದುಕೊಂಡಿದ್ದಾರೆ. ಇದೇ ಫೋಟೋ ಈಗ ವೈರಲ್ ಆಗುತ್ತಿದೆ.
ಪತ್ನಿ ಕೈಹಿಡಿದು ‘ಮುದ್ದು ರಾಕ್ಷಸಿ’ಹಾಡಿಗೆ ರೊಮ್ಯಾಂಟಿಕ್ ಆಗಿ ದರ್ಶನ್ ಡ್ಯಾನ್ಸ್ ಮಾಡಿದ್ದಾರೆ. ಪತ್ನಿಗಾಗಿ ದರ್ಶನ್ ಹಿಂದಿ ಹಾಡೊಂದನ್ನು ಹಾಡಿದ್ದಾರೆ. ವಿಜಯಲಕ್ಷ್ಮಿ ಕೂಡ ಹಾಡು ಹಾಡುತ್ತಾ ಎಂಜಾಯ್ ಮಾಡಿದ್ದಾರೆ. ಈ ವಿಡಿಯೋಗಳನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಈ ಜೋಡಿ ಯಾವಾಗಲೂ ಹೀಗೆಯೇ ಇರಲಿ, ಈ ದಂಪತಿ ಮೇಲೆ ಯಾರ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಶುಭ ಹಾರೈಸುತ್ತಿದ್ದಾರೆ.
ಬಹಳ ದಿನಗಳಿಂದ ವಿವಾದಗಳಿಂದ ದೂರವಿರುವ ಪವಿತ್ರಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಅವರಷ್ಟೇ ಅಲ್ಲದೆ ಪವಿತ್ರಾ ಗೌಡ ಅವರ ಮಗಳು ಖುಷಿ ಕೂಡ ಆಕ್ಟೀವ್ ಆಗಿದ್ದಾರೆ. ಸದಾ ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಅವರು ಇಂದು ಮಂತ್ರಾಲಯಕ್ಕೆ ಭೇಟಿ ಕೊಟ್ಟ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ಓಮ್ ಶ್ರೀ ರಾಘವೇಂದ್ರಾಯ ಅವರು ಮಂತ್ರವನ್ನು ಕ್ಯಾಪ್ಶನ್ ಹಾಕಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.