ಏಕಾಏಕಿ ಧರ್ಮಸ್ಥಳಕ್ಕೆ ಬಂದು ವೀರೇಂದ್ರ ಹೆಗ್ಗಡೆಯ ಕಾಲಿಗೆ ಬಿದ್ದ ಡಿಕೆ ಶಿವಕುಮಾರ್
Apr 20, 2025, 16:34 IST
|

ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಒಂದಿಲ್ಲೊಂದು ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇರುತ್ತಲೇ ಇರುತ್ತಾರೆ. ಕುಟುಂಬ ಸಮೇತರಾಗಿ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದೇವರಲ್ಲಿ ಪ್ರಾರ್ಥಿಸುತ್ತಾರೆ.ಕಳೆದ ವಾರವಷ್ಟೇ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದಿದ್ದ ಡಿಸಿಎಂ ಇಂದು ಬೆಳ್ಳಂಬೆಳಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಒಂದು ಸುತ್ತು ದೇವಸ್ಥಾನ ಪ್ರದಕ್ಷಿಣೆ ಹಾಕಿ, ಮಂಜುನಾಥಸ್ವಾಮಿಯ ದರ್ಶನ ಪಡೆದು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಜೊತೆಗೆ ಹುಂಡಿಗೆ ಕಾಣಿಕೆಯನ್ನೂ ಅರ್ಪಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರವಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಡಿಸಿಎಂ ಡಿಕೆ ಶಿವಕುಮಾರ್ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದರು.
ಮಂಜುನಾಥಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿ ಹುಂಡಿಗೆ ಕಾಣಿಕೆ ಹಾಕಿದರು. ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು. ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಅವರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಗೌಪ್ಯವಾಗಿ ಮಾತುಕತೆ ನಡೆಸಿದರು.ಮಂಜುನಾಥನ ದರ್ಶನದ ಬಳಿಕ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರನ್ನ ಭೇಟಿಯಾಗಿದ್ದಾರೆ. ಕಾಲಿಗೆ ಬಿದ್ದು ಆಶೀರ್ವಾದ ಸಹ ಪಡೆದಿದ್ದಾರೆ. ಬಳಿಕ ಕೆಲ ಕಾಲ ಗೌಪ್ಯ ಮಾತುಕತೆ ನಡೆಸಿದ್ದಾರೆ.
ಧರ್ಮಸ್ಥಳದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ ಡಿಕೆ ಶಿವಕುಮಾರ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಜನರ ಬದುಕು ಮುಖ್ಯ, ಭಾವನೆಗಿಂತ ಬದುಕಿನ ರಾಜಕೀಯ ಮಾಡಬೇಕು ಎಂದು ಹೇಳಿದರು. ಜಾತಿಗಣತಿ ವಿಚಾರದಲ್ಲಿ ರಾಹುಲ್ ಗಾಂಧಿ ಪತ್ರವನ್ನು ನೋಡಿಲ್ಲವೆಂದೂ, ಕಾಂಗ್ರೆಸ್ ಎಲ್ಲರಿಗೂ ನ್ಯಾಯ ಕೊಡುವ ಸಿದ್ಧಾಂತ ಹೊಂದಿದೆ ಎಂದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.