ಪೆಬ್ರವರಿ 17 ರ ಒಳಗಡೆ ಈ‌ ಕೆಲಸ ಮಾಡಿ, ಇಲ್ಲವಾದರೆ ನಿಮ್ಮ‌ ವಾಹನ ರಸ್ತೆಗೆ ಇಳಿಯಲ್ಲ

 | 
ರ

ಕಾರು, ಬೈಕು, ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ಸೇರಿದಂತೆ ಇನ್ನಿತರ ವಾಹನಗಳಿಗೆ ಕೇಂದ್ರದಿಂದ ಹೊಸ ನಿಯಮ ಜಾರಿಯಾಗಲಿದೆ. ಇದೇ ಫೆಬ್ರವರಿ ಹದಿನೇಳರ ಒಳಗಾಗಿ ಈ ಕೆಲಸ ಮಾಡುವುದು ಎಲ್ಲ ವಾಹನ ಸವಾರರಿಗೆ ಕಡ್ಡಾಯವಾಗಿದೆ. ಒಂದು ವೇಳೆ ನೀವು ಈ ಕೆಲಸ ಮಾಡದಿದ್ರೆ ಫೆಬ್ರವರಿ ಹದಿನೇಳರ ನಂತರ ₹2000 ದಂಡ ಮತ್ತು ನಿಮ್ಮ ವಾಹನ ಸೀಜ್ ಆಗುವ ಬಹಳಷ್ಟು ಸಾಧ್ಯತೆ ಇದೆ. 

ಹಾಗಾದ್ರೆ ಎಂತಹ ವಾಹನಗಳಿಗೆ ಇದು ಅನ್ವಯವಾಗಲಿದೆ.? ಮತ್ತು ಎಲ್ಲಿ.? ಹೇಗೆ ಮಾಡಬೇಕು.? ಮತ್ತು ಎಷ್ಟು ಹಣ ಖರ್ಚಾಗುತ್ತದೆ.? ನೋಡೋಣ ಬನ್ನಿ. ಸಾರಿಗೆ ಇಲಾಖೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ(HSRP) ನಂಬರ್ ಪ್ಲೇಟ್ ಅಳವಡಿಸುವಂತೆ ಫೆಬ್ರವರಿ 17 ರವರೆಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನ ಒಳಗೆ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಹೌದು, ಎಚ್‌ಎಸ್‌ಆರ್‌ಪಿ(HSRP) ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17 ಕೊನೆಯ ದಿನವಾಗಿದ್ದು, ನಿಗದಿತ ದಿನದೊಳಗೆ ಎಚ್‌ಎಸ್‌ಆರ್‌ಪಿ(HSRP) ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ.

ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 1, 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲ ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನ ಅಂದರೆ ಎಚ್‌ಎಸ್‌ಆರ್‌ಪಿ(HSRP) ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದೆ.

2019 ಏಪ್ರಿಲ್ 1 ಕ್ಕಿಂತ ಹಳೆಯದಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ(HSRP) ನಂಬರ್ ಪ್ಲೇಟ್ ಹಾಕಿಸಿಕೊಳ್ಳುವಂತೆ ಸಾರಿಗೆ ಇಲಾಖೆ ನೀಡಿರುವ ಗಡುವು ಫೆಬ್ರವರಿ ಹದಿನೇಳುಕ್ಕೆ ಮುಕ್ತಾಯವಾಗಲಿದೆ. ನಂಬರ್ ಪ್ಲೇಟ್ ಬದಲಾವಣೆಗೆ ಹಲವು ವಾಹನ ಮಾಲೀಕರು ಆಸಕ್ತಿ ತೋರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಿಸಿ ಮುಟ್ಟಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಮೊದಲ ಬಾರಿ ಸಿಕ್ಕಿಬಿದ್ದರೆ ₹1000 ದಂಡ, ಎರಡನೇ ಬಾರಿ ಸಿಕ್ಕಿಬಿದ್ದರೆ ₹2000 ದಂಡ ಹಾಕಲಾಗುತ್ತದೆ. ಹಾಗಾಗಿ ಈ ಕೆಲಸ ಬೇಗನೆ ಮಾಡಿಸಿ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.