ಚೈತ್ರ ಕುಂದಾಪುರ ಅವರನ್ನು ಅಧಿಕಾರಿಗಳು ಯಾವ ರೀತಿ ಹಿಡಿದಿದ್ದಾರೆ ಗೊತ್ತಾ, ರೋಚಕ ವಿಡಿಯೋ
ಮಾತೆತ್ತಿದರೆ ಧರ್ಮ ,ಭಾಷೆ ಎನ್ನುತ್ತಿದ್ದ ಮಹಿಳೆ ಅವಳು.ಭಾಷಣ ಹೋರಾಟದ ಮೂಲಕ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ ಆ್ಯಂಡ್ ಗ್ಯಾಂಗ್ ಸಿಸಿಬಿ ಬಲೆಗೆ ಬಿದ್ದಿದೆ. ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ನಕಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರನ್ನು ತಯಾರು ಮಾಡಿ ಬರೋಬ್ಬರಿ 5 ಕೋಟಿ ರೂ. ದೋಚಿದ್ದ ಪ್ರಕರಣದಲ್ಲಿ ಫೈರ್ ಬ್ರ್ಯಾಂಡ್ ನಾಯಕಿ ಎಂಬ ಹಣೆಪಟ್ಟಿ ಇರುವ ಚೈತ್ರಾ ಕುಂದಾಪುರ ಮತ್ತು ತಂಡವನ್ನು ಬಂಧಿಸಲಾಗಿದೆ.
ಪ್ರಖರ ವಾಗ್ಮಿ, ಹಾರ್ಡ್ ಕೋರ್ ಹಿಂದೂ ಕಾರ್ಯಕರ್ತೆ ಎಂಬ ಮುಖವಾಡ ಧರಿಸಿ ಭಾಷಣದ ಮೂಲಕ ಅಬ್ಬರಿಸುತ್ತಿದ್ದ ಚೈತ್ರಾ ಕುಂದಾಪುರ ಮತ್ತು ಟೀಂ ಆರ್‌ಎಸ್‌ಎಸ್ ಮತ್ತು ಬಿಜೆಪಿಗೆ ದೋಖಾ ಮಾಡಿದೆ. ಪೊಲೀಸರು ಕಳೆದ ರಾತ್ರಿ ನಡೆಸಿದ ಸಿನಿಮೀಯ ಶೈಲಿಯ ಮಿಂಚಿನ ಕಾರ್ಯಾಚರಣೆಯಲ್ಲಿ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿದೆ. ಅಲ್ಲದೇ ಗೆಳಯ ಶ್ರೀಕಾಂತ್ ನಾಯಕ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ 2023 ವಿಧಾನಸಭಾ ಚುನಾವಣೆಯನ್ನು ಬಂಡವಾಳ ಮಾಡಿಕೊಂಡು ಈ ತಂಡ ದುಡ್ಡು ಮಾಡುವ ಯೋಜನೆಯನ್ನು ಹಾಕಿತ್ತು. ಈ ಕೃತ್ಯದಲ್ಲಿ ಒಟ್ಟು ಎಂಟು ಜನ ಆರೋಪಿಗಳು ಭಾಗಿಯಾಗಿದ್ದಾರೆ. ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಐದು ಕೋಟಿ ರೂ. ಉಂಡೇನಾಮ ತಿಕ್ಕಲಾಗಿದೆ. ಈ ಬಗ್ಗೆ ಉದ್ಯಮಿ ಗೋವಿಂದ ಬಾಬು ಪೂಜಾರಿ, ಬೆಂಗಳೂರು ಬಂಡೇಪಾಳ್ಯ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ.
ಚೆಫ್ ಟಾಕ್ ಸಂಸ್ಥೆ ಮುಖ್ಯಸ್ಥನಾಗಿರುವ ಗೋವಿಂದ ಬಾಬು ಪೂಜಾರಿ ಬೈಂದೂರು ವಿಧಾನಸಭೆ ಟಿಕೆಟ್ ಆಕಾಂಕ್ಷಿ ಆಗಿದ್ದರು. ಈ ಬಗ್ಗೆ ಬಹಳ ಪ್ರಯತ್ನ ಮಾಡಿದ್ದರು. ಗೋವಿಂದ ಬಾಬು ಜೊತೆಗಿದ್ದವರೇ ತಲೆ ಹೊಡೆದು ಕಾಸು ಮಾಡುವ ಪ್ಲಾನ್ ಮಾಡಿದ್ದಾರೆ. ಅತ್ತ ಟಿಕೆಟ್ ಸಿಗದೆ ಕಾಸು ಕಳೆದುಕೊಂಡ ಗೋವಿಂದ ಬಾಬು ಪೂಜಾರಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿಯಲ್ಲಿ ಮಿಂಚಿನ ಕಾರ್ಯಾಚರಣೆ ಮಾಡಿದ್ದಾರೆ.
ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ರಾತ್ರೋರಾತ್ರಿ ಸಿನಿಮೀಯ ಶೈಲಿಯಲ್ಲಿ ದಾಳಿ ಮಾಡಿ ಕಳೆದ ಹಲವಾರು ದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ನಾಯಕ್‌ನನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬಂಧನ ಪ್ರಕ್ರಿಯೆ ನಡೆಸಿ ಕೋರ್ಟಿಗೆ ಹಾಜರುಪಡಿಸಲಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.