ಪತ್ನಿಗಾಗಿ ನಡು ಬಿಸಿಲಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಬೈಕ್ ಹತ್ತಿದ ದೊಡ್ಮನೆ ಶಿವಣ್ಣ

 | 
Hji

ಮೇ 7ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್. ಕ್ಷೇತ್ರದಲ್ಲಿ ಪ್ರಚಾರದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಚುನಾವಣಾ ಪ್ರಚಾರವನ್ನು ನಡೆಸಿದರು.

ಮೇ 7ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ನಡೆಯಲಿದ್ದು, ಬಿಜೆಪಿಯಿಂದ ಬಿ. ವೈ. ರಾಘವೇಂದ್ರ ಅಭ್ಯರ್ಥಿ ಯಾಗಿದ್ದಾರೆ. ಇನ್ನು ಗೀತಾ ಶಿವರಾಜ್ ಕುಮಾರ್ ಅವರು ಗೆಲ್ಲಲಿ ಎಂದು ಪತಿ ಶಿವರಾಜ್ ಕುಮಾರ್ ಎಲ್ಲೆಡೆ ಕಾರ್ಯಕರ್ತರೊಂದಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಕೆಟಿಕೆ ಕಲ್ಯಾಣ ಮಂಟಪದಲ್ಲಿ ತೀರ್ಥಹಳ್ಳಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಶಿವರಾಜ್​ಕುಮಾರ್ ಅವರು ಸದ್ಯ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದಾರೆ. ಅವರು ಪತ್ನಿ ಗೀತಾ ಪರ ಶಿವಮೊಗ್ಗದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಶಿವಮೊಗ್ಗದ ಕುಂಚೇನಹಳ್ಳಿಯಲ್ಲಿ ಶಿವಣ್ಣ ಅವರು ಪ್ರಚಾರ ಮಾಡಿದ್ದಾರೆ. ಈ ವೇಳೆ ಅವರು ಸಿನಿಮಾ ಡೈಲಾಗ್ ಹೇಳಿ, ಸಾಂಗ್ ಕೂಡ ಹಾಡಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.