ಡಿಸಿಎಂ ಡಿಕೆಶಿ ಆ ಹೇಳಿಕೆಗೆ ಕೆಂಡಾಮಂಡಲವಾದ ಕರುನಾಡು, ಕಾವೇರಿಗಾಗಿ ಹೆಚ್ಚಾದ ಹೋರಾಟ

 | 
Djsj

 ಕಾವೇರಿ ವಿವಾದ ಭುಗಿಲೆದ್ದಿದೆ ಈ ಸಮಯದಲ್ಲಿ ಕಾವೇರಿ ನದಿಯು ಇಡೀ ದಕ್ಷಿಣ ಭಾರತದ ಆಸ್ತಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.ಕಾವೇರಿ ಕರ್ನಾಟಕದ ಆಸ್ತಿ ಅಲ್ಲ ಎಂಬ ಡಿಎಂಕೆ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ ಮಾಧ್ಯಮಗಳು ಪ್ರಶ್ನಿಸಿದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿಗಳು ಹೌದು ಕಾವೇರಿ ನದಿ ಇಡೀ ದಕ್ಷಿಣ ಭಾರತದ ಆಸ್ತಿ ಎಂದು ತಿಳಿಸಿದರು.

ಕಾವೇರಿ ನೀರು ಹರಿಸುವ ವಿಚಾರವಾಗಿ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಬಂದ್ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಯಾರೊಬ್ಬರೂ ಕಾನೂನು ಕೈಗೆ ಎತ್ತಿಕೊಳ್ಳಬಾರದು. ನಾವು ನಮ್ಮ ರಾಜ್ಯದ ಹಿತ ಕಾಯುತ್ತಿದ್ದೇವೆ. ಹೋರಾಟ ಮಾಡಬಾರದು ಎಂದು ನಾವು ಹೇಳುವುದಿಲ್ಲ. ರೈತ ಸಂಘಟನೆ, ಕನ್ನಡ ಸಂಘಟನೆಗಳು, ಚಿತ್ರರಂಗ, ವಿರೋಧ ಪಕ್ಷಗಳ ಹೋರಾಟಕ್ಕೆ ನಾವು ಅಡ್ಡಿಪಡಿಸುವುದಿಲ್ಲ. ಆದರೆ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂದರು.

ಬೆಂಗಳೂರು ಬಂದ್‌ಗೆ ಕರೆ ನೀಡಿರುವ ಬಗ್ಗೆ ಕೇಳಿದಾಗ, ಬೆಂಗಳೂರಿನ ಘನತೆಗೆ ಧಕ್ಕೆ ಮಾಡಿದರೆ ನಿಮ್ಮ ಹೃದಯಕ್ಕೆ ನೀವೇ ಚುಚ್ಚಿಕೊಂಡಂತೆ. ನಾವು ಎಲ್ಲಾ ರೀತಿಯಲ್ಲಿ ರೈತರ ಹಿತ ಕಾಯುತ್ತಿದ್ದೇವೆ. ಈ ಬಂದ್ ನಿಂದ ಅವರಿಗೆ ಏನು ಲಾಭ? ಲಾಭ ಆಗುವುದಿದ್ದರೆ ಮಾಡಲಿ. ನಿಮ್ಮ ಪರವಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ದಯಮಾಡಿ ಬಂದ್ ನಂತಹ ತಪ್ಪು ಮಾಡಬೇಡಿ ಎಂದು ಡಿಕೆ ಶಿವಕುಮಾರ್‌ ತಿಳಿಸಿದರು.

ಇನ್ನು ಈ ಕುರಿತಾಗಿ ಕಾಂಗ್ರೆಸ್ ನಾಯಕರು ತಮಿಳುನಾಡಿನ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂಬ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನಾವೇನೂ ಮೂರ್ಖರೇ? ರಾಜ್ಯದ ಹಾಗೂ ಎಲ್ಲಾ ರೈತರ ರಕ್ಷಣೆ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಇನ್ನು ಈ ಹೇಳಿಕೆಗೆ ನ್ಯೂಸ್ ಚಾನೆಲ್ ಮುಖ್ಯಸ್ಥರಾದ ರಂಗಣ್ಣ ಅವರು ಡಿಕೆಶಿ ಅವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ನಮ್ಮದು ಕಾವೇರಿ ಕೂಡ ನಮ್ಮದೇ ಎಂದು ಕಿಡಿಕಾರಿದ್ದಾರೆ.
ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.