ಮಾಧ್ಯಮಗಳ ಮುಂದೆ ಸಿ.ಡಿದೆದ್ದ ಈಶ್ವರಪ್ಪ; 'ಈ‌ ಬಾರಿ ಆತನನ್ನು ಸೋಲಿಸುವುದು ಪಕ್ಕಾ'

 | 
Hjf

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವಪ್ಪ  ಭವಿಷ್ಯ ನುಡಿದಿದ್ದಾರೆ.

ಶಿವಮೊಗ್ಗ  ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಂದು ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಬಿ.ವೈ ರಾಘವೇಂದ್ರನನ್ನ  ಸೋಲಿಸಿ, ಬಿಜೆಪಿ ಕಟ್ಟಾ ಅನುಯಾಯಿಯಾದ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಈಶ್ವರಪ್ಪ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗ್ತಿದೆ. ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಚುನಾವಣಾ ಫಲಿತಾಂಶ ಬಂದು ಬಿಜೆಪಿ ಕಾರ್ಯಕರ್ತರ ವಿಜಯವಾಗುತ್ತಿದ್ದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. 

ಮುಂದಿನ ಜೂನ್‌ನಲ್ಲೇ ಪರಿಷತ್ ಸ್ಥಾನ ಖಾಲಿ ಆಗುತ್ತದೆ, ನಿಮ್ಮ ಮಗನನ್ನ ಎಂಎಲ್‌ಸಿ ಮಾಡ್ತೀವಿ. ನಿಮಗೆ ರಾಜ್ಯಪಾಲರ ಹುದ್ದೆ ಕೊಡ್ತೀವಿ ಅಂತ ಬಿಜೆಪಿ ಹೈಕಮಾಂಡ್ ನನಗೆ ಆಫರ್ ಕೊಟ್ಟಿದೆ. ನನಗೆ ಯಾವುದೇ ಸ್ಥಾನಮಾನ ಮುಖ್ಯವಲ್ಲ. ನನಗೆ ಸ್ಥಾನಮಾನ ಬೇಡ, ಪಕ್ಷ ಉಳಿಯಬೇಕು, ಬಿಎಸ್‌ವೈ ಕುಟುಂಬದ ಸರ್ವಾಧಿಕಾರದಿಂದ ಮುಕ್ತವಾಬೇಕು ಎಂಬುದಷ್ಟೇ ಮುಖ್ಯ ಎಂದು ಗುಡುಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.