50 ವರ್ಷ ತುಂಬಿದ ಬಳಿಕವೂ ತುಂಡು ಉಡು ಗೆ ತೊಟ್ಟ ಬಾಲಿವುಡ್ ನ ಟಿ; ಗುಮ್ಮಿದ ನೆಟ್ಟಿಗರು

 | 
He

ಬಾಲಿವುಡ್​ ಬಾಲಿವುಡ್​ ಹಸಿಬಿಸಿ ಲೇಡಿ ಮಲೈಕಾ ಅರೋರಾ ಅವರಿಗೆ ಈಗ 50 ವರ್ಷ ವಯಸ್ಸು. ಆದರೂ ಇಂದಿಗೂ ಫಿಟ್​ ಆ್ಯಂಡ್​ ಫೈನ್​ ಆಗಿದ್ದಾರೆ. ತಮ್ಮ ದೇಹಸಿರಿಯನ್ನು ಧಾರಾಳವಾಗಿ ಪ್ರದರ್ಶಿಸುವ ಮೂಲಕವೇ ಖ್ಯಾತಿ ಗಳಿಸಿದವರು ಇವರು. ವಯಸ್ಸು 50 ಆದರೂ ಇಂದಿಗೂ, ಅದನ್ನೇ ಮುಂದುವರೆಸಿಕೊಂಡು ಬಂದಿದ್ದಾರೆ. ಅಪರೂಪಕ್ಕೆ ಸಂಪೂರ್ಣ ದೇಹವನ್ನು ಮುಚ್ಚಿಕೊಂಡು ಟ್ರೋಲ್​ ಆಗುವುದೂ ಇದೆ, ಅಷ್ಟರಮಟ್ಟಿಗೆ ಇವರ ಡ್ರೆಸ್​ ಸೆನ್ಸ್​ಗೆ ಅಭಿಮಾನಿಗಳು ಒಗ್ಗಿ ಹೋಗಿದ್ದಾರೆ. 

ಹಾಗೆಂದು ದೇಹ ಪ್ರದರ್ಶನ ಮಾಡಿದಾಗಲೆಲ್ಲಾ ಸುಮ್ಮನೇ ಇರುತ್ತಾರೆ ಎಂದೇನಲ್ಲ. ಆಗಲೂ ಬುಡ್ಡಿ, ಬುಡಿಯಾ, ಮುದುಕಿ ಈ ವಯಸ್ಸಲ್ಲಿ ಇದೆಲ್ಲಾ ಬೇಕಾ ಅನ್ನುವವರೇ ಹೆಚ್ಚು.ಅಂದಹಾಗೆ,  ಮಲೈಕಾ ಅರೋರಾ ಮತ್ತು ಅರ್ಬಾಜ್ ಖಾನ್ ಅವರನ್ನು ಹಿಂದಿನ ದಿನದ ಹಾಟೆಸ್ಟ್ ಜೋಡಿಗಳಲ್ಲಿ ಒಂದು ಎಂದೇ ಕರೆಯಲಾಗುತ್ತಿತ್ತು. ಆದರೆ ಅವರು ಬೇರ್ಪಟ್ಟು ಹಲವು ವರ್ಷಗಳೇ ಕಳೆದಿವೆ.

 2017ರಲ್ಲಿ ಈ ಜೋಡಿ ಬೇರ್ಪಟ್ಟಿದೆ. ಮಲೈಕಾ ಅರೋರಾಗೆ ಈಗ 49 ವರ್ಷ ವಯಸ್ಸು. ಅರ್ಬಾಜ್​ ಖಾನ್​ ಜೊತೆ ಬೇರ್ಪಟ್ಟ ಬಳಿಕ 12 ವರ್ಷ ಚಿಕ್ಕವಾಗಿರುವ ನಟ ಅರ್ಜುನ್ ಕಪೂರ್  ಜೊತೆ ಕೆಲ ವರ್ಷಗಳಿಂದ ಡೇಟಿಂಗ್​ ಮಾಡುತ್ತಿದ್ದಾರೆ ಮಲೈಕಾ.  ಮಲೈಕಾ ಅರ್ಜುನ್​ ಕಪೂರ್​ ಜೊತೆ ಡೇಟಿಂಗ್​ನಲ್ಲಿದ್ದರೂ ಮಗನಿಗಾಗಿ ಆಗಾಗ್ಗೆ ಅರ್ಬಾಜ್​ ಖಾನ್​ರನ್ನು ಭೇಟಿಯಾಗುವುದು, ತಬ್ಬಿಕೊಳ್ಳುವುದು ನಡೆದಿದ್ದು, ಇವುಗಳ ವಿಡಿಯೋಗಳೂ ವೈರಲ್​ ಆಗುತ್ತಲೇ ಇರುತ್ತವೆ.

 ಮಲೈಕಾ ಏನೋ ಅರ್ಜುನ್​ ಕಪೂರ್​ ಜೊತೆ ಹಲವು ವರ್ಷಗಳಿಂದ ಸಂಬಂಧದಲ್ಲಿದ್ದಾರೆ. ಆದರೆ ಅದೇ ಇನ್ನೊಂದೆಡೆ ಅರ್ಬಾಜ್​ ಖಾನ್ ಕೆಲ ತಿಂಗಳ ಹಿಂದೆ ತಮ್ಮ ಅರ್ಧ ವಯಸ್ಸಿನ ಯುವತಿ ಶುರಾ ಜೊತೆ ಮದುವೆಯಾಗಿ ಸಂಸಾರ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಉತ್ತರ ಪ್ರದೇಶದ ನಾಥದ್ವಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಮಲೈಕಾ ಹಾಕಿಕೊಂಡು ಬಂದ ಡ್ರೆಸ್ ನೋಡಿ ಎಲ್ಲಿಗೆ ಯಾವ ಡ್ರೆಸ್ ಅಲ್ಲಿ ಬರಬೇಕೆಂದು ಅರ್ಥವಾಗುವುದಿಲ್ಲವೇ ಎಂದು ಕಿಡಿ ಕಾರಿದ್ದಾರೆ.