FactCheck:ಯಶ್ ಜೊತೆ Toxic ಸಿನಿಮಾದಲ್ಲಿ ನಟಿಸುವಾಗ ಗರ್ಭಿಣಿಯಾದ ಹೀರೋಯಿನ್, ರಾಧಿಕಾ ಗರಂ
Mar 2, 2025, 19:42 IST
|

ಪ್ರಖ್ಯಾತ ನಟಿ ಕಿಯಾರಾ ಅಡ್ವಾನಿ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶುಕ್ರವಾರ ಅವರು ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ದಂಪತಿ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಸೋಶಿಯ್ ಮೀಡಿಯಾದಲ್ಲಿ ಪುಟ್ಟ ಮಗುವಿನ ಸಾಕ್ಸ್ ಫೋಟೋ ಪೋಸ್ಟ್ ಮಾಡುವ ಮೂಲಕ ಈ ದಂಪತಿ ಶುಭ ಸಮಾಚಾರ ತಿಳಿಸಿದ್ದಾರೆ.
ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಪರಸ್ಪರ ಪ್ರೀತಿಸಿ ಮದುವೆ ಆದ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಬದುಕಿನಲ್ಲಿ ಈಗ ಹೊಸ ಅಧ್ಯಾಯ ಆರಂಭ ಆಗುತ್ತಿದೆ.ನಮ್ಮ ಬದುಕಿನ ಅತಿ ಶ್ರೇಷ್ಠವಾದ ಉಡುಗೊರೆ ಶೀಘ್ರದಲ್ಲೇ ಸಿಗಲಿದೆ ಎಂದು ಸಿದ್ದಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಕಮೆಂಟ್ ಬಾಕ್ಸ್ ನಲ್ಲಿ ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್, ರಾಶಿ ಖನ್ನಾ, ಏಕ್ತಾ ಕಪೂರ್, ಮನೀಶ್ ಮಲ್ಹೋತ್ರಾ, ಮನೀಶ್ ಪೌಲ್, ಸೋನಾಕ್ಷಿ ಸಿನ್ಹಾ ಮುಂತಾದವರು ಅಭಿನಂದನೆ ತಿಳಿಸಿದ್ದಾರೆ.
ಇನ್ನು ಈ ತಾರಾ ಜೋಡಿ 2023ರ ಫೆಬ್ರವರಿ 7ರಂದು ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ಅವರು ಮದುವೆ ಆಗಿದ್ದರು. ಜೈಸಲ್ಮರ್ ಸೂರ್ಯಗಡ್ ಕೋಟೆಯಲ್ಲಿ ಅವರ ವಿವಾಹ ನೆರವೇರಿತ್ತು. ಕೇವಲ ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಬಳಿಕ ಮುಂಬೈನಲ್ಲಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಿದ್ದರು. ಈಗ ಕಿಯಾರಾ ಪ್ರೆಗ್ನೆಂಟ್ ಆಗಿದ್ದಾರೆ.
ಚಿತ್ರರಂಗದಲ್ಲಿ ಕಿಯಾರಾ ಅಡ್ವಾಣಿ ಅವರಿಗೆ ಸಖತ್ ಬೇಡಿಕೆ ಇದೆ. ಬಾಲಿವುಡ್ ಹಾಗೂ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಅವರು ನಟಿಸಿ ಫೇಮಸ್ ಆಗಿದ್ದಾರೆ. ಹಲವು ಹಿಟ್ ಸಿನಿಮಾಗಳು ಅವರ ಖಾತೆಯಲ್ಲಿವೆ. ಈಗ ಯಶ್ ಜೊತೆ ಟಾಕ್ಸಿಕ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಮನೆ ಮಾಡಿದೆ. ಹಾಗಾಗಿ ಅವರು ಸಿನಿಮಾ ಬಿಡುಗಡೆ ಮುನ್ನವೇ ಸಿಹಿ ಸುದ್ದಿ ನೀಡಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadutech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.