ಈ ಮೂರು ರಾಶಿಯವರಿಗೆ ದೊಡ್ಡ ಗಂ.ಡಾಂತರ, ಕೋಡಿಶ್ರೀ ಖಡಕ್ ಭವಿಷ್ಯ

 | 
Ns

ಭವಿಷ್ಯ ನುಡಿಯುವುದರಲ್ಲಿ ಕೊಡಿ ಮಠದ ಶ್ರೀ ಗಳದು ಎತ್ತಿದ ಕೈ. ಅಷ್ಟಕ್ಕೂ ಈ ಹಿಂದೆ ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಚುನಾವಣಾಪೂರ್ವದಲ್ಲಿ ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಇದೀಗ ಸ್ಫೋಟಕ ಭವಿಷ್ಯವೊಂದನ್ನು ಹೇಳಿದ್ದಾರೆ. 

ಹುಬ್ಬಳ್ಳಿಯಲ್ಲಿ ಭವಿಷ್ಯ ನುಡಿದ ಅವರು, ರಾಜ್ಯದಲ್ಲಿ ಒಂದು ಪಕ್ಷದ ಸರ್ಕಾರ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂಬುದಾಗಿ ಹೇಳಿದ್ದೆ. ಅದು ನಿಜ ಆಗಿದೆ. ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ. ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಜಾಗತಿಕ ಮಟ್ಟದಲ್ಲಿ ಮೂರು ಗಂಡಾಂತರಗಳು ನಡೆಯಲಿವೆ. ಒಂದೆರಡು ರಾಷ್ಟಗಳು ಮುಚ್ಚಿ ಹೋಗಲಿವೆ ಎಂದು ಶ್ರೀಗಳು ಹೇಳಿದ್ದಾರೆ. 

ಜನರ ಅಕಾಲಿಕ ಮೃ.ತ್ಯು ಆಗುವ ಸೂಚನೆ ಇದೆ. 
ವಿಜಯದಶಮಿಯಿಂದ ಸಂಕ್ರಾಂತಿವರೆಗೆ ಜಗತ್ತಿನಲ್ಲಿ ದುರ್ಘಟನೆಗಳು ನಡೆಯಲಿವೆ. ಆಳುವವರು ಅರಿತರೆ ಗಂಡಾತರದಿಂದ ಪಾರಾಗಬಹುದು. ಇಲ್ಲವಾದರೆ ಅ.ಪಾಯ ಕಟ್ಟಿಟ್ಟ ಬುತ್ತಿ ಎಂದು ಕೋಡಿಮಠ ಶ್ರೀ ಹೇಳಿದ್ದಾರೆ. ಕರುನಾಡಿಗೆ ಕೆಲವೊಂದು ಆಪತ್ತುಗಳು ಇವೆ. ಜೊತೆಗೆ ಕೆಲ ಸಾವು ನೋವುಗಳು ಆಗಲಿವೆ. ಆದರೆ, ದೈವ ಕೃಪೆಯಿಂದ ಪಾರಾಗಬಹುದು. ಇನ್ನು ಭಾರತದಲ್ಲಿ ನಾನು ಹೇಳಿದಂಥ ಒಂದು ಘಟನೆ ಸಂಭವಿಸಲಿದೆ. 

ಇದನ್ನು ತಪ್ಪಿಸುವ ಹೊಣೆಗಾರಿಕೆ ಆಳುವವರ ಕೈಯಲ್ಲಿದೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳಲಿದ್ದಾರೆ. ಬಡವರಿಗೆ ಗ್ಯಾರಂಟಿ ಒಳ್ಳೆಯದೇ. ಯಾವ ಹೆಣ್ಣಿಗೆ ಸ್ವತಂತ್ರ ಇರಲಿಲ್ಲವೋ ಅಂಥ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬರುವಂತಾಗಿದೆ ಎಂದು ಅವರು ಹೇಳಿದ್ದಾರೆ.