ಸ್ವಂತ ಅಪ್ಪನಿಂದ ಮಗಳಿಗೂ ಕ್ಯಾನ್ಸರ್, ಈ ಇಬ್ಬರ ಮಧ್ಯೆ ಏ.ನಾಗಿತ್ತು ಗೊ ತ್ತಾ
ಇಲ್ಲೊಬ್ಬ ಪೊಲೀಸ್ ಸಿಬ್ಬಂದಿ, ತಮ್ಮಿಂದಲೇ ಮಗಳಿಗೆ ಕ್ಯಾನ್ಸರ್ ಬಂದಿದೆ ಎಂದು ಮನನೊಂದು ಸಾವಿಗೆ ಶರಣಾಗಿದ್ದಾರೆ. ಬೆಂಗಳೂರು ನಗರದ ಅಶೋಕನಗರ ಟ್ರಾಫಿಕ್ ಸ್ಟೇಷನ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರ್ ಎಂಬುವವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನವರು.
ಅವರು ಕೆಲ ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಇವರಿಗೆ ಕೇವಲ 44 ವರ್ಷ ವಯಸ್ಸಾಗಿತ್ತು. ಕುಮಾರ್, ಬೆಂಗಳೂರಿನ ಡೈರಿ ಸರ್ಕಲ್ ಬಳಿಯಿರುವ ಪೊಲೀಸ್ ಕ್ವಾಟ್ರಸ್ನಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಕೆಲ ಸಮಯದ ಹಿಂದೆ ಕ್ಯಾನ್ಸರ್ನ ಲಕ್ಷಣಗಳು ಅವರ ಓರ್ವ ಮಗಳಲ್ಲಿಯೂ ಕಾಣಿಸಿಕೊಂಡಿತ್ತು.
ಈ ಹಿನ್ನೆಲೆಯಲ್ಲಿ ಮಗಳಿಗೆ ಟ್ರೀಟ್ಮೆಂಟ್ ಕೊಡಿಸಿದ್ದರು. ಕುಮಾರ್ ಮಗಳು ಇತ್ತೀಚೆಗೆ ಚೇತರಿಸಿಕೊಳ್ಳುತ್ತಿದ್ದರು. ಆದರೂ, ನನ್ನಿಂದಲೇ ಮಗಳಿಗೆ ಕ್ಯಾನ್ಸರ್ ಬಂದಿದೆ ಎಂದು ಮನನೊಂದು ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿರುವ ಕುಮಾರ್ ತನ್ನ ಕಣ್ಣುಗಳನ್ನು ದಾನ ಮಾಡಿದ್ದಾರೆ. ಸದ್ಯ ಮೃತದೇಹವನ್ನು ಹುಟ್ಟುರೂ ಚನ್ನಗಿರಿಗೆ ತೆಗೆದುಕೊಂಡು ಹೋಗಿದ್ದಾರೆ. ಇವರ ಸಾವಿಗೆ ಪೊಲೀಸ್ ವರಿಷ್ಠಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.