ಇತ್ತೀಚೆಗೆ ಕನ್ನಡ ಚಿತ್ರರಂಗದ ಬೆಳವಣಿಗೆ ಕಂಡು ಹೊಸ ನಿರ್ಧಾರ ಕೈಗೊಂಡ ಗಣೇಶ್

 | 
Hu

ಮೆಚ್ಚಿನ ನಟನ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಬೇಕು ಎನ್ನುವುದು ಬಹುತೇಕ ಅಭಿಮಾನಿಗಳ ಕನಸಾಗಿರುತ್ತದೆ. ಆದರೆ ಇತ್ತೀಚಿಗೆ ಕನ್ನಡ ಚಿತ್ರರಂಗದ ಅನೇಕ ನಟರು ಹುಟ್ಟುಹಬ್ಬಗಳನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ಅಂದು ಅಭಿಮಾನಿಗಳ ಭೇಟಿ, ಕೇಕ್‌ ಕಟ್ಟಿಂಗ್‌ ಇದ್ಯಾವುದನ್ನೂ ಮಾಡದೇ ಅಭಿಮಾನಿಗಳಿಗೆ ಮೊದಲೇ ತಿಳಿಸಿ ಹುಟ್ಟುಹಬ್ಬ ಆಚರಣೆಯನ್ನು ತಮ್ಮ ಕುಟುಂಬಸ್ಥರೊಂದಿಗಷ್ಟೇ ಸೀಮಿತಗೊಳಿಸಿಕೊಳ್ಳುತ್ತಿದ್ದಾರೆ.

ಇದು ಅಭಿಮಾನಿಗಳಿಗೆ ಬೇಸರ ತರಿಸಿದರೂ ಕೂಡ ಎಲ್ಲಾ ಸಂದರ್ಭದಲ್ಲೂ ಸಮಯ ಒಂದೇ ರೀತಿ ಇರುವುದಿಲ್ಲ. ಶೂಟಿಂಗ್‌, ಅತಿಯಾದ ಮಳೆ, ಹಾಗೂ ದೂರದಿಂದ ಬರುವ ಅಭಿಮಾನಿಗಳಗೆ ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ಕೆಲವು ನಟರು ಈ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದೀಗ ಗೋಲ್ಡನ್‌ ಸ್ಟಾರ್‌ ನಟ ಗಣೇಶ್ ಕೂಡ ಈ ಬಾರಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಜುಲೈ 2 ರಂದು ಗಣೇಶ್ ಹುಟ್ಟುಹಬ್ಬವಿದ್ದು, ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯವಿಲ್ಲ. ಅದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ. ಗೆಳೆಯ ದರ್ಶನ್ ಸೆರೆಮನೆಯಲ್ಲಿದ್ದಾನೆ.ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಮುಂದಿನ ವರ್ಷ ಖಂಡಿತ ಒಟ್ಟಿಗೆ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ. ಎಂದಿನ ತಮ್ಮ ಅಭಿಮಾನದ ನಿರೀಕ್ಷೆಯೊಂದಿಗೆ, ನಿಮ್ಮವ ಗಣೇಶ ಎಂದು ಬರೆದುಕೊಂಡಿದ್ದಾರೆ.

ಮುಂಗಾರು ಮಳೆ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಹಿಟ್‌ ಪಡೆದ ಕಾಮಿಡಿ ಟೈಮ್‌ ಗಣೇಶ್ ಬಳಿಕ ಸಾಲು ಸಾಲು ಹಿಟ್‌ ಸಿನಿಮಾಗಳನ್ನೇ ನೀಡಿ ಗೋಲ್ಡನ್ ಸ್ಟಾರ್ ಎಂದು ಜನಪ್ರಿಯತೆ ಪಡೆದರು. ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ಗಣೇಶ್ ಈ ಬಾರಿಯೂ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳದೇ ಇರುವುದು ಬೇಸರ ತಂದಿದೆ. ಹೀಗಾಗಿ ಗಣೇಶ್‌ ಪೋಸ್ಟ್‌ಗೆ ಅಭಿಮಾನಿಗಳು ಹುಟ್ಟುಹಬ್ಬದ ದಿನವಲ್ಲ..ಯಾವಾಗಲೂ ನೀವು ಸಿಗುವುದಿಲ್ಲ ಎಂದು ಕಮೆಂಟ್‌ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.